HomeKarnatakaಬೆಂಗಳೂರಿನಲ್ಲಿ ಜಿಮ್ ಟ್ರೇನರ್ ಅನುಮಾನಾಸ್ಪದವಾಗಿ ಸಾವು: ಸ್ನೇಹಿತರಿಂದಲೇ ಕೊಲೆ ಶಂಕೆ: ನಾಲ್ವರ ವಿರುದ್ಧ FIR ದಾಖಲು

ಬೆಂಗಳೂರಿನಲ್ಲಿ ಜಿಮ್ ಟ್ರೇನರ್ ಅನುಮಾನಾಸ್ಪದವಾಗಿ ಸಾವು: ಸ್ನೇಹಿತರಿಂದಲೇ ಕೊಲೆ ಶಂಕೆ: ನಾಲ್ವರ ವಿರುದ್ಧ FIR ದಾಖಲು

ಬೆಂಗಳೂರು: ಜಿಮ್‌ ಟ್ರೈನರ್ ಓರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸ್ನೇಹಿತರೇ ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಹೆಬ್ಬಾಳದ ಕೆಂಪಾಪುರದಲ್ಲಿ ಈ ಘಟನೆ ನಡೆದಿದೆ.

ನಂದನ್ (25) ಮೃತ ಜಿಮ್ ಟ್ರೈನರ್. ಶನಿವಾರ ಜಿಮ್ ಮೊದಲ ವರ್ಷದ ಆ್ಯನಿವರ್ಸರಿ ಇತ್ತು. ತಡವಾದರೆ ಬೆಳಗ್ಗೆ ಬರುತ್ತೇನೆ ಅಂತ ಮನೆಯವರಿಗೆ ಹೇಳಿ ನಂದನ್ ತೆರಳಿದ್ದರು. ಆ್ಯನಿವರ್ಸರಿ ಮುಗಿಸಿ ಇತರೆ ಸಿಬ್ಬಂದಿ ಜೊತೆ ಪರಿಚಿತರ ಅಪಾರ್ಟ್ಮೆಂಟ್‌ಗೆ ಹೋಗಿದ್ದರು. ಈ ವೇಳೆ ಗಲಾಟೆ ನಡೆದು ನಂದನ್ ಮೇಲೆ ಹಲ್ಲೆಯಾಗಿರುವ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ನಂದನ್ ಸಾವನ್ನಪ್ಪಿದ್ದಾರೆ. ವಿಚಾರ ತಿಳಿದು ಆಸ್ಪತ್ರೆಗೆ ಜಿಮ್‌ ಟ್ರೈನರ್‌ ತಾಯಿ ತೆರಳಿದ್ದರು. ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಅಪಾರ್ಟ್ಮೆಂಟ್‌ನಲ್ಲಿ ಗಲಾಟೆ ನಡೆದು ಮಾರಣಾಂತಿಕ ಹಲ್ಲೆ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ.

ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ನಂದನ್ ತಾಯಿ ಮಂಜುಳಾ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಾಲ್ವರ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣ ದಾಖಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಪಾಕಿಸ್ತಾನಕ್ಕೆ ಸೇನಾ ಮಾಹಿತಿ ರವಾನೆ: ನಿವೃತ್ತ ಯೋಧ ಸೇರಿ ಇಬ್ಬರು ಅರೆಸ್ಟ್

ನವದೆಹಲಿ: ಪಾಕಿಸ್ತಾನಕ್ಕೆ ಸೇನಾ ಮಾಹಿತಿ, ಭದ್ರತೆಗೆ ಸಂಬಂಧಿಸಿದ ಮಾಹಿತಿಗಳನ್ನು ರವಾನಿಸಿದ ಆರೋಪದ ಮೇಲೆ, ನಿವೃತ್ತ ಯೋಧ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಕೇಂದ್ರೀಯ ಸಂಸ್ಥೆಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ, ಗುವಾಹಟಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ಬೇಹುಗಾರಿಕೆ ಸಂಬಂಧಿತ ಚಟುವಟಿಕೆಗಳ ಆರೋಪದ ಮೇಲೆ ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಬಂಧಿಸಿದೆ.

ಭದ್ರತಾ ಪಡೆಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತನೊಬ್ಬನಿಗೆ ರವಾನಿಸುವಲ್ಲಿ ಆತ ಭಾಗಿಯಾಗಿದ್ದನೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಸಂಸ್ಥೆಗಳ ಮಾಹಿತಿಯ ಮೇರೆಗೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ನಿವೃತ್ತ ಸೇನಾ ಯೋಧ. ಈತ ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.

ಆರೋಪಿಗಳಲ್ಲಿ ಒಬ್ಬನನ್ನು ಬಿಹಾರದ ಪೂರ್ವ ಚಂಪಾರಣ್‌ನ 31 ವರ್ಷದ ಅಭಿಷೇಕ್ ಕುಮಾರ್ ಸಿಂಗ್ ಎಂದು ಗುರುತಿಸಿದ್ದಾರೆ. ಶಂಕಿತ ವ್ಯಕ್ತಿಯ ಕುರಿತಾದ ಪ್ರಾಥಮಿಕ ಮಾಹಿತಿಯನ್ನು ತೇಜ್‌ಪುರ ಮೂಲದ ಗಜರಾಜ್ ಕಾರ್ಪ್ಸ್‌ನ ಮಿಲಿಟರಿ ಗುಪ್ತಚರ ವಿಭಾಗವು ಹಂಚಿಕೊಂಡಿದೆ.

ಕಾರ್ಯಾಚರಣೆಯ ವೇಳೆ, ಆತನ ಬಳಿಯಿದ್ದ ಮೊಬೈಲ್ ಫೋನ್, ಸಿಮ್ ಕಾರ್ಡ್‌ಗಳು ಮತ್ತು ಅಪರಾಧಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular