ಬೆಂಗಳೂರು: ಗಡಿಪಾರಾಗಿದ್ದರೂ ಬೆಂಗಳೂರಲ್ಲೇ ನೆಲೆಸಿದ್ದ 6 ರೌಡಿಶೀಟರ್ಗಳನ್ನು ಬೆಂಗಳುರು ಪೊಲೀಸರು ಬಂಧಿಸಿ, ಜೈಲಿಗಟ್ಟಿರುವ ಘಟನೆ ನಡೆದಿದೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಉಮೇಶ್ ಅಲಿಯಾಸ್ ಲೂಸು, ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮಧುಸೂದನ್ ಅಲಿಯಾಸ್ ಮಧು, ವಿಲ್ಸನ್ ಗಾರ್ಡನ್ ಠಾಣಾ ವ್ಯಾಪ್ತಿಯ ಮೊಹಮ್ಮದ್ ಆಜಂ ಅಲಿಯಾಸ್ ಆಜಂ, ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮೋಹಿನ್ , ಸುದ್ದಗುಂಟೆಪಾಳ್ಯ ವ್ಯಾಪ್ತಿಯ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಚುವ್ವಿ ಮತ್ತು ಮಡಿವಾಳ ಠಾಣಾ ವ್ಯಾಪ್ತಿಯ ರೌಡಿಶೀಟರ್ ಅಕ್ಷಯ್ನನ್ನು ಬಂಧಿಸಲಾಗಿದೆ.
ಈ ಆರೂ ರೌಡಿಶೀಟರ್ ಗಳನ್ನು ಬೆಂಗಳುರಿನಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಆದಾಗ್ಯೂ ಬೆಂಗಳೂರು ಬಿಟ್ಟು ಹೋಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರು ರೌಡಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ.
ಪಾಕಿಸ್ತಾನಕ್ಕೆ ಸೇನಾ ಮಾಹಿತಿ ರವಾನೆ: ನಿವೃತ್ತ ಯೋಧ ಸೇರಿ ಇಬ್ಬರು ಅರೆಸ್ಟ್
ನವದೆಹಲಿ: ಪಾಕಿಸ್ತಾನಕ್ಕೆ ಸೇನಾ ಮಾಹಿತಿ, ಭದ್ರತೆಗೆ ಸಂಬಂಧಿಸಿದ ಮಾಹಿತಿಗಳನ್ನು ರವಾನಿಸಿದ ಆರೋಪದ ಮೇಲೆ, ನಿವೃತ್ತ ಯೋಧ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಕೇಂದ್ರೀಯ ಸಂಸ್ಥೆಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ, ಗುವಾಹಟಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ಬೇಹುಗಾರಿಕೆ ಸಂಬಂಧಿತ ಚಟುವಟಿಕೆಗಳ ಆರೋಪದ ಮೇಲೆ ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಬಂಧಿಸಿದೆ.
ಭದ್ರತಾ ಪಡೆಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತನೊಬ್ಬನಿಗೆ ರವಾನಿಸುವಲ್ಲಿ ಆತ ಭಾಗಿಯಾಗಿದ್ದನೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಸಂಸ್ಥೆಗಳ ಮಾಹಿತಿಯ ಮೇರೆಗೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ನಿವೃತ್ತ ಸೇನಾ ಯೋಧ. ಈತ ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.
ಆರೋಪಿಗಳಲ್ಲಿ ಒಬ್ಬನನ್ನು ಬಿಹಾರದ ಪೂರ್ವ ಚಂಪಾರಣ್ನ 31 ವರ್ಷದ ಅಭಿಷೇಕ್ ಕುಮಾರ್ ಸಿಂಗ್ ಎಂದು ಗುರುತಿಸಿದ್ದಾರೆ. ಶಂಕಿತ ವ್ಯಕ್ತಿಯ ಕುರಿತಾದ ಪ್ರಾಥಮಿಕ ಮಾಹಿತಿಯನ್ನು ತೇಜ್ಪುರ ಮೂಲದ ಗಜರಾಜ್ ಕಾರ್ಪ್ಸ್ನ ಮಿಲಿಟರಿ ಗುಪ್ತಚರ ವಿಭಾಗವು ಹಂಚಿಕೊಂಡಿದೆ.
ಕಾರ್ಯಾಚರಣೆಯ ವೇಳೆ, ಆತನ ಬಳಿಯಿದ್ದ ಮೊಬೈಲ್ ಫೋನ್, ಸಿಮ್ ಕಾರ್ಡ್ಗಳು ಮತ್ತು ಅಪರಾಧಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.

