HomeKarnatakaಅನ್ನಭಾಗ್ಯ ಫಲಾನುಭವಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಅನ್ನಭಾಗ್ಯ ಫಲಾನುಭವಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಅನ್ನಭಾಗ್ಯ ಯೋಜನೆಯಲ್ಲಿ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಸುಲಭವಾಗಿ ಇ-ಕೆವೈಸಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಸರ್ಕಾರದಿಂದ “ಅನ್ನ ಸೇವೆ” ಎಂಬ ನೂತನ ಮೊಬೈಲ್ ಆ್ಯಪ್ ಅನ್ನು ಪರಿಚಯಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ.

ಜನತೆಯ ಸಮಯ ಮತ್ತು ಶ್ರಮವನ್ನು ಉಳಿಸುವ ನಿಟ್ಟಿನಲ್ಲಿ ಈ ಡಿಜಿಟಲ್ ಸೇವೆಯನ್ನು ಆರಂಭಿಸಲಾಗಿದೆ. ಇನ್ಮುಂದೆ ಫಲಾನುಭವಿಗಳು ಇ-ಕೆವೈಸಿಗಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ, ತಮ್ಮ ಮೊಬೈಲ್‌ನಲ್ಲಿಯೇ ಮನೆಯಲ್ಲಿ ಕುಳಿತು ಸುಲಭವಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು.

ಇ-ಕೆವೈಸಿ ಕಡ್ಡಾಯ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಷನ್ ಕಾರ್ಡ್‌ನಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರು (ಹಿರಿಯರು, ಮಕ್ಕಳು ಹಾಗೂ ‘ಫೇಸ್ ಅಥೆಂಟಿಕೇಷನ್’ ಸೌಲಭ್ಯ ಬಳಸಿ) ಸರ್ಕಾರದ ನಿರ್ದೇಶನದಂತೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು.

ಉಚಿತ ಸೇವೆ: ನ್ಯಾಯಬೆಲೆ ಅಂಗಡಿಗಳಲ್ಲಿ ಬಿ.ಪಿ.ಎಲ್ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸುವುದು ಸಂಪೂರ್ಣವಾಗಿ ಉಚಿತವಾಗಿದೆ. ಹಣ ಪಡೆಯುತ್ತಿರುವ ದೂರುಗಳು ಬಂದರೆ ಅಂತಹ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಆಹಾರ ಇಲಾಖೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಿದೆ.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಮತ್ತು ಪಡಿತರ ವಿತರಣೆಯನ್ನು ಚುರುಕುಗೊಳಿಸಲು ನ್ಯಾಯಬೆಲೆ ಅಂಗಡಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಡ್ಡಾಯವಾಗಿ ತೆರೆದಿರಬೇಕು ಎಂದು ಸರ್ಕಾರ ಆದೇಶಿಸಿದೆ.

ಶಿವಮೊಗ್ಗ ಜಿಲ್ಲೆಯ ಅಂಕಿ-ಅಂಶಗಳು: ಜಿಲ್ಲೆಯಲ್ಲಿ ಒಟ್ಟು 4,96,728 ಕಾರ್ಡ್‌ಗಳಿದ್ದು, ಈ ಪೈಕಿ 3,40,499 ಬಿ.ಪಿ.ಎಲ್ ಕಾರ್ಡ್‌ಗಳು, 1,20,178 ಎ.ಪಿ.ಎಲ್ ಕಾರ್ಡ್‌ಗಳು ಮತ್ತು 3,6,051 ಅಂತ್ಯೋದಯ ಕಾರ್ಡ್‌ಗಳು ಚಾಲ್ತಿಯಲ್ಲಿವೆ.

ರೇಷನ್ ಕಾರ್ಡ್ ಸಕ್ರಿಯವಾಗಿರಲು ಹಾಗೂ ಉಚಿತ ಅಕ್ಕಿ ಸೌಲಭ್ಯ ಮುಂದುವರಿಯಲು ಇ-ಕೆವೈಸಿ ಕಡ್ಡಾಯವಾಗಿದೆ. ಆದ್ದರಿಂದ ರೇಷನ್ ಕಾರ್ಡ್‌ನಲ್ಲಿರುವ ಎಲ್ಲಾ ಸದಸ್ಯರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಆಧಾರ್ ಕಾರ್ಡ್ ಮತ್ತು ಲಿಂಕ್ ಆಗಿರುವ ಮೊಬೈಲ್‌ನೊಂದಿಗೆ ತೆರಳಿ ಬಯೋಮೆಟ್ರಿಕ್ ಮೂಲಕ ಅಥವಾ ತಾವೇ ಸ್ವತಃ ‘ಅನ್ನ ಸೇವೆ’ ಆ್ಯಪ್ ಮೂಲಕ ದಿನಾಂಕ 20-10-2026 ರೊಳಗಾಗಿ ಇ-ಕೆವೈಸಿ ದೃಢೀಕರಣ ಪೂರ್ಣಗೊಳಿಸಬೇಕೆಂದು ಅವರು ಕೋರಿದ್ದಾರೆ. 

ವಿವಿಧ ನಿಗಮಗಳಿಂದ ಅರ್ಜಿ‌ ಆಹ್ವಾನ : ಅವಧಿ ವಿಸ್ತರಣೆ

ಶಿವಮೊಗ್ಗ: ಶಿವಮೊಗ್ಗ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅದರ ವ್ಯಾಪ್ತಿಗೊಳಪಡುವ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಮರಾಠ ಸಮುದಾಯ ಅಭಿವೃದ್ಧಿ ನಿಗಮಗಳು 2026-27 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲಯ ಕರೆಯಲಾಗಿದ್ದ ಅರ್ಜಿ ಸಲ್ಲಿಸುವ ಅವಧಿಯನ್ನು ಅ. 15 ರವರೆಗೆ ವಿಸ್ತರಿಸಲಾಗಿದೆ.

ನಿಗಮಗಳಿಂದ ಸೌಲಭ್ಯ ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು http://sevasindhu.karnataka.gov.in ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಫಕರ ಕಚೇರಿ, ಡಿ.ದೇವರಾಜ ಅರಸು ಭವನ, ಬಾಲರಾಜ್ ಅರಸು ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular