HomeKarnatakaಕ್ರೀಡಾ ಸಾಧಕರಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ

ಕ್ರೀಡಾ ಸಾಧಕರಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ

ಬೆಂಗಳೂರು: ರಾಜ್ಯ ಸರ್ಕಾರವು ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಕ್ರೀಡಾ ಪ್ರತಿಭೆಗಳಿಗೆ ಹೊಸ ಅವಕಾಶ ನೀಡುತ್ತಿದೆ. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಅರ್ಹ ಕ್ರೀಡಾಪಟುಗಳಿಗೆ ಮೀಸಲಾತಿ ಹಾಗೂ ಕೃಪಾಂಕಗಳ ಸೌಲಭ್ಯ ದೊರೆಯಲಿದೆ. ಈ ಮೂಲಕ ಕ್ರೀಡಾ ಸಾಧನೆಗೆ ಗೌರವದ ಜೊತೆಗೆ, ಕ್ರೀಡಾಪಟುಗಳ ಭವಿಷ್ಯಕ್ಕೆ ಹೊಸ ಅವಕಾಶಗಳು ದೊರೆಯಲಿವೆ.

ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ರಾಜ್ಯದ ಕೀರ್ತಿಯನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಹಾಗೂ ಕ್ರೀಡಾ ಬದುಕಿನ ನಂತರವೂ ಭದ್ರ ಭವಿಷ್ಯ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗ ಒಳಗೊಂಡಂತೆ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ. ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಒಲಿಂಪಿಕ್ಸ್‌, ಏಷ್ಯನ್‌ ಗೇಮ್ಸ್‌ ಸೇರಿದಂತೆ ಅಧಿಸೂಚಿತ 34 ಕ್ರೀಡೆಗಳಲ್ಲಿನ ಸಾಧನೆಗೆ ಅನುಗುಣವಾಗಿ ಕೃಪಾಂಕದ ಸೌಲಭ್ಯವೂ ಇರಲಿದೆ.

ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿಯೊಂದು ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಈ ಬಾರಿ ಮೈಸೂರು ದಸರಾಕ್ಕೆ ಮತ್ತಷ್ಟು ಮೆರಗು: ರಕ್ಷಣಾ ಇಲಾಖೆಯಿಂದ ಏರ್ ಶೋಗೆ ಒಪ್ಪಿಗೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮತ್ತಷ್ಟು ಮೆರುಗು ನೀಡಲು ಭಾರತೀಯ ವಾಯುಪಡೆಯ ವೈಮಾನಿಕ ಪ್ರದರ್ಶನ ಆಯೋಜಿಸಲು ಕೇಂದ್ರ ರಕ್ಷಣಾ ಸಚಿವಾಲಯ ಅನುಮತಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವಿಗೆ ಸ್ಪಂದಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರ್‌ ಶೋಗೆ ಒಪ್ಪಿಗೆ ನೀಡಿದ್ದಾರೆ.

ಮೈಸೂರು ದಸರಾ ಸಂದರ್ಭದಲ್ಲಿ ಅಕ್ಟೋಬರ್ 18ರಿಂದ 20ರವರೆಗೆ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ವೈಮಾನಿಕ ಪ್ರದರ್ಶನ ನಡೆಸಲಿದೆ. ಆಕಾಶದಲ್ಲಿ ವಿವಿಧ ಆಕರ್ಷಕ ವಿನ್ಯಾಸಗಳು, ವೇಗದ ಚಲನೆಗಳು ಹಾಗೂ ಸಾಹಸಮಯ ವೈಮಾನಿಕ ಕಸರತ್ತುಗಳನ್ನು ವೀಕ್ಷಿಸುವ ಅವಕಾಶ ದಸರಾ ಪ್ರವಾಸಿಗರಿಗೆ ಸಿಗಲಿದೆ.

2026ರ ಮೈಸೂರು ದಸರಾ ಮಹೋತ್ಸವದಲ್ಲಿ ಭಾರತದ ರಕ್ಷಣಾ ಪಡೆಗಳು ಭಾಗವಹಿಸಲಿವೆ; ಇದು ಈ ವರ್ಷದ ಸಂಭ್ರಮಾಚರಣೆಗೆ ವಿಶೇಷ ಹೆಮ್ಮೆ, ದೇಶಭಕ್ತಿ ಮತ್ತು ವೈಭವದ ಮೆರುಗನ್ನು ನೀಡಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ಪ್ರಸಿದ್ಧ ‘ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ’ವು ಅಕ್ಟೋಬರ್ 18 ರಿಂದ 20 ರವರೆಗೆ ನಡೆಸಿಕೊಡಲಿರುವ ಅದ್ಭುತ ವೈಮಾನಿಕ ಪ್ರದರ್ಶನಗಳು ಮೈಸೂರಿನ ಜನತೆಯನ್ನು ಮಂತ್ರಮುಗ್ಧರನ್ನಾಗಿಸಲಿವೆ. ಇದರೊಂದಿಗೆ, ನಮ್ಮ ರಕ್ಷಣಾ ಪಡೆಗಳ ಮೂರೂ ವಿಭಾಗಗಳನ್ನು ಪ್ರತಿನಿಧಿಸುವ ಸ್ತಬ್ಧಚಿತ್ರಗಳು ಅವುಗಳ ಶೌರ್ಯ, ಸೇವೆ ಮತ್ತು ಸ್ಫೂರ್ತಿಯನ್ನು ಅನಾವರಣಗೊಳಿಸಲಿವೆ.

ಮೈಸೂರು ದಸರಾದಲ್ಲಿ ನಮ್ಮ ರಕ್ಷಣಾ ಪಡೆಗಳು ಭಾಗವಹಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಮನ್ನಿಸಿ, ಕಾರ್ಯಕ್ರಮದ ಯಶಸ್ಸಿಗೆ ಬೆಂಬಲ ನೀಡಿದ ರಕ್ಷಣಾ ಸಚಿವರಿಗೆ ಕರ್ನಾಟಕ ಸರ್ಕಾರವು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತದೆ.

ಮೈಸೂರು ದಸರಾ ಕರ್ನಾಟಕದ ಚೈತನ್ಯವನ್ನು ಬಿಂಬಿಸುವ ಹಬ್ಬವಾಗಿದ್ದು, ಇದು ರಾಜ್ಯದ ಜನತೆಗೆ ಸೇರಿದ್ದಾಗಿದೆ. ಈ ವರ್ಷದ ಸಂಭ್ರಮಾಚರಣೆಯನ್ನು ಹಿಂದೆಂದಿಗಿಂತಲೂ ಹೆಚ್ಚು ವರ್ಣರಂಜಿತ, ಎಲ್ಲರನ್ನೂ ಒಳಗೊಂಡ ಮತ್ತು ಸ್ಮರಣೀಯವಾಗಿಸಲು ನಾವು ಉತ್ಸುಕರಾಗಿದ್ದೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular