ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ವಿರಾಜಪೇಟೆ ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ನೆಕ್ಸಾ-ವಿರಾಜಪೇಟೆ, ನಿಸರ್ಗ ಲೇಔಟ್ ಇಲ್ಲಿ ಅಕ್ಟೋಬರ್, 07 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ “ನೇರ ಸಂದರ್ಶನ” ನಡೆಯಲಿದೆ.
ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ನೆಕ್ಸಾ- ವಿರಾಜಪೇಟೆ, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ರಿಲೇಷನ್‍ಷಿಪ್ ಮ್ಯಾನೇಜರ್, ಎಸ್‍ಆರ್ ರಿಲೇಷನ್‍ಷಿಪ್ ಮ್ಯಾನೇಜರ್, ಡ್ರೈವರ್ ಮತ್ತು ಆಫೀಸ್ ಬಾಯ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಡಿಪ್ಲೋಮಾ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ ದೂ.ಸಂ. 8296020826 ಇವರನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಅ. 8 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 08 ರಂದು ಬೆಳಿಗ್ಗೆ 10 ಗಂಟೆಗೆ “ನೇರ ಸಂದರ್ಶನ’ವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಇಟಾಚಿ ಕ್ಯಾಶ್ ಮ್ಯಾನೇಜ್‌ಮೆಂಟ್ ಸರ್ವಿಸ್ ಪ್ರೈ.ಲಿ., ಖಾಸಗಿ ಕಂಪನಿ ಭಾಗವಹಿಸಲಿದ್ದು, ಉದ್ಯೋಗ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.
ದಿನಾಂಕ: 08-10-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಮತ್ತು ಯಾವುದೇ ಪದವಿ ಪಡೆದಿರುವ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606/9108235132 ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2026-27ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ, ಸಿಇಟಿ, ನೀಟ್ ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚುರಲ್ ಆಫ್ ಆರ್ಕಿಟೆಕ್ಟರ್, ಬಿ ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ಸಿಇಟಿ/ನೀಟ್ ಮುಖೇನ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್ https://kmdconline.karnataka.gov.in ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋರ್ಟ್ ಸೈಜ್), ಸಿಇಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ.100 ರ ಛಾಪಕಾಗದದಲ್ಲಿ ಇಂಡೆಮಿನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-201449 ನ್ನು ಸಂಪರ್ಕಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್, 15 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

