HomeKarnatakaವೇಶ್ಯಾವಾಟಿಕೆ ದಂಧೆ: ಲಾಡ್ಜ್ ಮೇಲೆ ಪೊಲೀಸರ ದಿಢೀರ್ ದಾಳಿ; ಓರ್ವ ಆರೋಪಿ ಅರೆಸ್ಟ್

ವೇಶ್ಯಾವಾಟಿಕೆ ದಂಧೆ: ಲಾಡ್ಜ್ ಮೇಲೆ ಪೊಲೀಸರ ದಿಢೀರ್ ದಾಳಿ; ಓರ್ವ ಆರೋಪಿ ಅರೆಸ್ಟ್

ಬೆಳಗಾವಿ: ಲಾಡ್ಜ್ ವೊಂದರಲ್ಲಿ ಮಹಿಳೆಯನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಲಾಡ್ಜ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ರಡ್ಡರಹಟ್ಟಿ ರಸ್ತೆಯಲ್ಲಿರುವ ಶಿವಶಕ್ತಿ ಲಾಡ್ಜ್‌ನಲ್ಲಿ ಮಹಿಳೆಯನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವನನ್ನು ಪೊಲೀಸರು ಬಂಧಿಸಿದ್ದು, ಮಹಿಳೆಯನ್ನು ರಕ್ಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಥಣಿ ಸಿಪಿಐ ಸಂತೋಷ ಹಳ್ಳೂರ ನೇತೃತ್ವದಲ್ಲಿ ಪೊಲೀಸ್ ತಂಡ ಲಾಡ್ಜ್ ಮೇಲೆ ದಾಳಿ ನಡೆಸಿದೆ. ದಾಳಿ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಅಥಣಿ ತಾಲೂಕಿನ ಅರಟಾಳ ಗ್ರಾಮದ ಮಾಳಪ್ಪ ದಿಲೀಪ್ ಕಾಂಬಳೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಲಾಡ್ಜ್ ಮ್ಯಾನೇಜರ್ ರಾಹುಲ್ ಮಡ್ಡಿ ಹಾಗೂ ಗಣೇಶ ಸಂಕಪಾಳ ಅವರು ಮಹಿಳೆಯನ್ನು ಲಾಡ್ಜ್‌ನಲ್ಲಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸಲು ಸಹಕರಿಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಈ ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆ ಜಾಲದ ಹಿಂದೆ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಜಿಮ್ ಟ್ರೇನರ್ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು: ಸಲಿಂಗ ಕಾಮಕ್ಕೆ ಬಲಿಯಾದನಾ ವ್ಯಕ್ತಿ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದ ಜಿಮ್ ಟ್ರೇನರ್ ಕೊಲೆ ಪ್ರಕರಣ ಪೊಲೀಸರ ತನಿಖೆ ವೇಳೆ ಬೆಚ್ಚಿ ಬೀಳಿಸುವ ಅಂಶಗಳು ಬಯಲಾಗಿವೆ. ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಠಾಣೆ ಪೊಲೀಸರೇ ಶಾಕ್ ಆಗಿದ್ದಾರೆ.

ಜಿಮ್ ಟ್ರೈನರ್ ನಂದನ್ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಕೆಲ ಆತಂಕಕಾರಿ ಮಾಹಿತಿಗಳನ್ನು ಬಯಲಿಗೆಳೆದಿದ್ದಾರೆ. ಜಿಮ್ ಆ್ಯನಿವರ್ಸರಿ ಪಾರ್ಟಿ ನೆಪದಲ್ಲಿ ಅತಿಯಾದ ಡ್ರಗ್ಸ್ ಸೇವನೆ, ಸಲಿಂಗಕಾಮದ ಕೃತ್ಯ ಬೆಳಕಿಗೆ ಬಂದಿದೆ.

ಅತಿಯಾದ ಡ್ರಗ್ಸ್ ಸೇವನೆ ಹಾಗೂ ಸಲಿಂಗ ಕಾಅಮದ ವೇಳೆ ಗಲಾಟೆ ನಡೆದು ಮಾರಣಾಂತಿಕ ಹಲ್ಲೆ ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ನಂದನ್, ಅನುಷ್ ಶೆಟ್ಟಿ ಎಂಬಾತನಿಗೆ ಪರ್ಸನಲ್ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ. ಜಿಮ್ ಆ್ಯನಿವರ್ಸರಿ ಹಿನ್ನೆಲೆಯಲ್ಲಿ ಅನುಷ್ ಶೆಟ್ಟಿ, ಕೆಂಪಾಪುರದಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ಪಾರ್ಟಿ ಆಯೋಜಿಸಿ ನಂದನ್ ಸೇರಿದಂತೆ ಜಿಮ್‌ನ ನಾಲ್ವರು ಟ್ರೈನರ್‌ಗಳನ್ನು ಆಹ್ವಾನಿಸಿದ್ದ. ಪಾರ್ಟಿ ವೇಳೆ ಹಾಜರಿದ್ದವರೆಲ್ಲರೂ ಅತಿಯಾದ ಡ್ರಗ್ಸ್ ಮತ್ತು ಮದ್ಯ ಸೇವಿಸಿದ್ದರು ಎನ್ನಲಾಗಿದೆ.

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ ವೇಳೆ ಡ್ರಗ್ಸ್ ಬಳಕೆಗೆ ಸಂಬಂಧಿಸಿದ ವಸ್ತುಗಳು ಪತ್ತೆಯಾಗಿದ್ದು, ಎಲ್ಲರೂ ನಶೆಯಲ್ಲಿದ್ದದ್ದು ಮೇಲ್ನೋಟಕ್ಕೆ ದೃಢಪಟ್ಟಿದೆ. ಪೊಲೀಸ್ ಮೂಲಗಳ ಪ್ರಕಾರ, ತಡರಾತ್ರಿ ನಶೆಯಲ್ಲಿದ್ದ ವೇಳೆ ವಿಶ್ವನಾಥ್ ಹಾಗೂ ನಂದನ್‌ ನಡುವೆ ಸಲಿಂಗಕಾಮ ಶುರುವಾಗಿದೆ. ವಿಶ್ವನಾಥ್ ನಂದನ್ ಗೆ ಕಿಸ್ ಮಾಡಲು ಶುರುಮಾಡಿದ್ದಾನೆ. ಬಳಿಕ ಅಲ್ಲಿ ನೆರೆದಿದ್ದವರು ನಂದನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ವಿಶ್ವನಾಥ್ ಮತ್ತು ನಂದನ್ ನಡುವೆ ತೀವ್ರ ಗಲಾಟೆ ನಡೆದಿದೆ. ನಂದನ್ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಗಂಭೀರವಾಗಿ ಹಲ್ಲೆಗೊಳಗಾದ ನಂದನ್ ಮೃತಪಟ್ತಿದ್ದಾನೆ.

ನಂದನ್ ಮೃತದೇಹದ ಹಲವು ಭಾಗಗಳಲ್ಲಿ ಆಳವಾದ ಕಚ್ಚಿದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದೇಹದ ವಿವಿಧ ಭಾಗಗಳಲ್ಲಿ ಕಚ್ಚಿದ ಗುರುತುಗಳಿರುವುದು ಲೈಂಗಿಕ ದೌರ್ಜನ್ಯದ ವೇಳೆ ತೀವ್ರ ಸಂಘರ್ಷ ನಡೆದಿರುವುದನ್ನು ಪುಷ್ಟೀಕರಿಸುತ್ತಿದೆ. ಜಗಳ ವಿಕೋಪಕ್ಕೆ ತಿರುಗಿ ನಂದನ್‌ನ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಆದರೆ ಘಟನೆ ಬಳಿಕ ಅನುಷ್ ಶೆಟ್ಟಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ “ರಾತ್ರಿ ನಾನೇ ಪಾರ್ಟಿಗೆ ಕರೆದಿದ್ದೆ, ಆದರೆ ರಾತ್ರಿ ಏನು ನಡೆಯಿತೋ ನನಗೆ ಗೊತ್ತಿಲ್ಲ. ನಾನು ಬೇರೆ ಕೋಣೆಯಲ್ಲಿ ಮಲಗಿದ್ದೆ. ಬೆಳಿಗ್ಗೆ ಎದ್ದು ನೋಡಿದಾಗ ನಂದನ್ ತಲೆಯಿಂದ ರಕ್ತ ಸೋರುತ್ತಿತ್ತು, ಕೂಡಲೇ ಆಸ್ಪತ್ರೆಗೆ ದಾಖಲಿಸಿದೆ” ಎಂದಿದ್ದಾನೆ.

ತನ್ನ ಮನೆಯಲ್ಲಿ ಸ್ವತಃ ಪಾರ್ಟಿ ಆಯೋಜಿಸಿ, ಮನೆಯಲ್ಲೇ ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ನನಗೇನೂ ಗೊತ್ತಿಲ್ಲ ಎನ್ನುತ್ತಿರುವ ಅನುಷ್ ಶೆಟ್ಟಿಯ ಹೇಳಿಕೆ ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

ಸದ್ಯ ಅಮೃತಹಳ್ಳಿ ಠಾಣೆ ಪೊಲೀಸರು ನಂದನ್ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಇದೇ ವೇಳೆ ಪಾರ್ಟಿಯಲ್ಲಿದ್ದ ಅನುಷ್ ಶೆಟ್ಟಿ, ವಿಶ್ವನಾಥ್ ಸೇರಿದಂತೆ ಇತರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular