ಬೆಂಗಳೂರು: ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಪುಂಡರಿಬ್ಬರು ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿಯಲ್ಲಿ ನಡೆದಿದೆ.
ಹರಹಾನ್ ಸಾರಿಹಾನ್ ಮತ್ತು ಬಸೀರ್ ಅಲಿಯಾಸ್ ಗಿಡ್ಡ ಎಂಬ ಇಬ್ಬರು ಕುಡಿದ ಮತ್ತಿನಲ್ಲಿ ಜಗಳವಾಡುತ್ತಿದ್ದರು. ಈ ವೇಳೆ ಸ್ಥಳೀಯರು 112ಗೆ ಕರೆ ಮಾಡಿದ್ದಾರೆ. ಈ ವೇಳೆ ರಾತ್ರಿ ಪಾಳಿಯಲ್ಲಿದ್ದ ಪೊಲೀಸ್ ಸಿಬ್ಬಂದಿಗಳಾದ ಮಣಿಕಂಠ ಮತ್ತು ರಾಯಪ್ಪ ಪೂಜಾರಿ ಸ್ಥಳಕ್ಕೆ ಬಂದು ಜಗಳ ಬಿಡಿಸಲು ಮುಂದಾಗಿದ್ದಾರೆ.
ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆಯೇ ಪುಂಡರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾಲಿನಿಂದ ಒದ್ದು ದರ್ಪ ಮೆರೆದಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯ ಎದೆ, ಕೈಕಾಲುಗಳಿಗೆ ಗಾಯಗಳಾಗಿವೆ.
ಸದ್ಯ ಗಾಯಾಳು ಪೊಲೀಸರಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದು ವಿಚಾರಣೆ ನಡೆಸಿದ್ದಾರೆ.
ಜಗಳ ಬಿಡಿಸಲು ಹೋದ ಪೊಲೀಸರ ಮೇಲೆ ಪುಂಡರು ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಜಾ ಕೈದಿಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಡಿಐಜಿ: ಬಂಧಿತ ಜೈಲಾಧಿಕಾರಿಯ ಮತ್ತಷ್ಟು ಕರ್ಮಕಾಂಡ ಬಯಲು
ಬೆಂಗಳೂರು: ಸುಪ್ರೀಂ ಕೋರ್ಟ್ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಅವರ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ.
2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನ ಸುಪ್ರೀಂ ಕೋರ್ಟ್ನ ನಕಲಿ ಆದೇಶದ ಆಧಾರದ ಮೇಲೆ ಬಿಡುಗಡೆ ಮಾಡಲಾಗಿತ್ತು. ಶಂಕರ್ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಕಲಿ ದಾಖಲೆಯನ್ನ ಜೈಲಿನ ಎಸ್ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪವಿದೆ. ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಐಜಿ ಸೋಮಶೇಖರ್ ಹಾಗೂ ಶ್ರೀಕಾಂತ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಡುಗಡೆ ನಂತರ ಪತ್ನಿಗೆ ಕೈದಿ ಶಂಕರ್ ಕೈಕೊಟ್ಟಿದ್ದರಿಂದ ಪ್ರಕರಣ ಬಹಿರಂಗವಾಗಿದೆ ಎನ್ನಲಾಗಿದ್ದು, ಪತಿ ಮತ್ತೊಂದು ಮದುವೆಯಾಗಿದ್ದಕ್ಕೆ ಕೋಪಗೊಂಡ ಪತ್ನಿ ಸತ್ಯ ಹೇಳಿರುವ ಮಾಹಿತಿ ಲಭ್ಯವಾಗಿದೆ.
ಅನಾಮಧೇಯ ಪತ್ರದ ಆಧಾರದ ಮೇಲೆ ಕಾರಾಗೃಹ ಇಲಾಖೆ ತನಿಖೆ ನಡೆಸಿದಾಗ ಬೃಹತ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಅಪಹರಣ, ಕೊಲೆ ಪ್ರಕರಣದಲ್ಲಿ ಶಂಕರ್ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಜೈಲಿಗೆ ಭೇಟಿ ನೀಡುತ್ತಿದ್ದ ಶಂಕರ್ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು, 2018ರಲ್ಲಿ ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕರಾಗಿದ್ದ ಸೋಮಶೇಖರ್ ಸಹಾಯ ಮಾಡಿದ್ದರು.
ಸಜಾ ಬಂದಿಗಳ ವಿಭಾಗದ ಸಿಬ್ಬಂದಿ ಶ್ರೀಕಾಂತ್ಗೆ ನಕಲಿ ದಾಖಲೆ ಸೃಷ್ಟಿಸಲು ಸೂಚಿಸಿದ್ದ ಸೋಮಶೇಖರ್, ಸುಪ್ರೀಂಕೋರ್ಟ್ನ ನಕಲಿ ಆದೇಶ ಇಟ್ಟುಕೊಂಡು 2018ರಲ್ಲಿ ಶಂಕರ್ನ ಜೈಲಿನಿಂದ ಬಿಡುಗಡೆ ಮಾಡಿದ್ದರು ಎನ್ನಲಾಗಿದೆ.
ತನಿಖೆಗೆ ಅಸಹಕಾರ ಹಿನ್ನೆಲೆ ಇತ್ತೀಚೆಗೆ ಶಂಕರ್ ಹಾಗೂ ಶ್ರೀಕಾಂತ್ನನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಶಂಕರ್ ಪತ್ನಿಗೆ ಡಿಐಜಿ ವಿಡಿಯೋ ಕರೆ ಮಾಡಿರೋದು ಪತ್ತೆಯಾಗಿದೆ. ವಿಡಿಯೋ ಕಾಲ್ನಲ್ಲಿ ವಿವಸ್ತ್ರವಾಗುವಂತೆ ಡಿಐಜಿ ಸೋಮಶೇಖರ್ ಹೇಳಿದ್ದು, ವಿಡಿಯೋ ವಶಕ್ಕೆ ಪಡೆದ ಪೊಲೀಸರು ಅದನ್ನು ಎಫ್ಎಸ್ಎಲ್ಗೆ ರವಾನಿಸಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಶಂಕರ್ ಪತ್ನಿ ಮನೆಗೆ ಹೋಗದೇ ಬೇರೊಬ್ಬಳನ್ನು ಎರಡನೇ ಮದುವೆಯಾಗಿದ್ದ. ಇದರಿಂದ ಕೋಪಗೊಂಡ ಶಂಸ್ಕರ್ ಪತ್ನಿ, ಅನಾಮಧೇಯ ಪತ್ರದ ಮೂಲಕ ಇಡೀ ಪ್ರಕರಣ ಬಯಲಿಗೆಳೆದಿದ್ದಾಳೆ ಎನ್ನಲಾಗಿದೆ.

