HomeKarnatakaರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ-ಜೆಡಿಎಸ್ ನಾಯಕರು

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ-ಜೆಡಿಎಸ್ ನಾಯಕರು

ಬೆಂಗಳೂರು: ಎಸ್‌ಐಆರ್‌ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಜೆಡಿಎಸ್ ನಾಕ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ ಐಆರ್ ಪ್ರಕ್ರಿಯೆಯಲ್ಲಿ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಸಂಬಂಧ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸುತ್ತಿರುವ ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ರಾಜಭವನಕ್ಕೆ ಭೇಟಿ ನೀಡಿ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ. ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರನ್ನು ಅನವಶ್ಯಕವಾಗಿ ಕರೆಸಿ ವಿಚಾರಣೆ ಮಾಡಲಾಗುತ್ತಿದೆ. ಯಾರು ಬೇಕಾದರೂ ಫಾರ್ಮ್‌ 7 ಸಲ್ಲಿಸಬಹುದು ಹಾಗೂ ಪ್ರಕರಣ ದಾಖಲಿಸಲು ಯಾರಿಗೂ ಹೇಳಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದರೆ ಅದನ್ನು ಮತದಾರರು ಪ್ರಶ್ನೆ ಮಾಡಬಹುದು. ಇಲ್ಲಿ ಪೊಲೀಸರು ಅಥವಾ ಸರ್ಕಾರ ಮಧ್ಯಪ್ರವೇಶ ಮಾಡುವಂತಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಪೊಲೀಸರ ಮೂಲಕ ಫಾರ್ಮ್‌ 7 ಸಲ್ಲಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುತ್ತಿದೆ ಎಂದರು.

ಕಾಂಗ್ರೆಸ್‌ಗೆ ಚುನಾವಣೆಯ ಭಯ ಶುರುವಾಗಿದೆ. ಮುಂದೆ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂಬುದು ಗೊತ್ತಾಗಿದೆ. ಆದ್ದರಿಂದ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಬಿ.ಕೆ.ಹರಿಪ್ರಸಾದ್‌ ತಮ್ಮ ಹಳೆಯ ದಿನಗಳಂತೆಯೇ ರೌಡಿಗಳಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಈ ಗೂಂಡಾಗಿರಿಗೆ ನಾವು ಭಯ ಪಡುವುದಿಲ್ಲ. ಬಿಜೆಪಿ ಕಾರ್ಯಕರ್ತರನ್ನು ಸರ್ಕಾರ ಟಾರ್ಗೆಟ್‌ ಮಾಡಬಾರದು, ಸರ್ಕಾರವನ್ನು ವಜಾ ಮಾಡಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ. ಡಿಜಿ ಹಾಗೂ ಮುಖ್ಯ ಕಾರ್ಯದರ್ಶಿಯನ್ನು ಕರೆದು ಮಾತಾಡುತ್ತೇನೆ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದರು.

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿ ಮೈತ್ರಿಕೂಟದಿಂದ ತೀವ್ರಗೊಂಡ ಪ್ರತಿಭಟನೆ: ಚುನಾವಣಾ ಆಯೋಗಕ್ಕೆ ಮುತ್ತಿಗೆ ಯತ್ನ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಇಂಡಿ’ ಮೈತ್ರಿಕೂಟದ ಸಂಸದರು ಸಂಸತ್ ಭವನದಿಂದ ಚುನಾವಣಾ ಆಯೋಗದ ಕೇಂದ್ರ ಕಚೇರಿ ‘ನಿರ್ವಚನ ಸದನ’ದವರೆಗೆ ಮಂಗಳವಾರ ಬೃಹತ್ ಪಾದಯಾತ್ರೆ ನಡೆಸಿದ್ದಾರೆ.

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ,ವೇಣುಗೋಪಾಲ್, ಸೇರಿದಂತೆ ವಿಪಕ್ಷಗಳ ನಾಯಕರು ಈ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಿಸಿದ್ದರು. ಆಯೋಗವು “ವಂಚನಾ ಆಯೋಗ”ವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ನಾಯಕರು, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಿಇಸಿ ವಿರುದ್ಧ ಮಹಾಭಿಯೋಗ ನಿರ್ಣಯ ತರಲು ನೀಲನಕ್ಷೆ ಸಿದ್ಧಪಡಿಸಿದ್ದಾರೆ.

ಈ ವೇಳೆ ಪ್ರತಿಭಟನಾ ನಾಯಕರು ಚುನಾವಣಾ ಆಯೋಗದ ಕೇಂದ್ರ ಕಚೇರಿ ‘ನಿರ್ವಚನ ಸದನ’ಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಚುನಾವಣಾ ಆಯೋಗದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಬ್ಯಾರಿಕೇಡ್ ಗಳನ್ನು ಅಳವಡಿಸಿ ತದೆಯೊಡ್ದಲಾಯಿತು. ಕಾಂಗ್ರೆಸ್ ನಾಯಕರಾದ ರಾಅಹುಲ್ ಗಾಂಧಿ,ಪ್ರಿಯಾಂಕಾ ಗಾಂಧಿ ಹಾಗೂ ಇತರರನ್ನು ಆಕಾಶವಾಣಿ ಕೇಂದ್ರದ ಬಳಿಯೇ ತಡೆಯಲಾಯಿತು. ಈ ವೇಳೆ ಕಚೇರಿ ಹಿಂಭಾಗದಿಂದ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಕಚೇರಿ ಹಿಂಭಾಗದಲ್ಲಿಯೂ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರಿಂದ ಪ್ರತಿಭಟನಾಕಾರರು ಸ್ಥಳದಲ್ಲೇ ಕುಳಿತು ಧರಣಿ ಮುಂದುವರೆಸಿದರು.

ಇದೇ ವೇಳೆ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರು ಆಕಾಅಶವಾಣಿ ಕೇಂದ್ರದ ಬಳಿಯೇ ಧರಣಿ ಕುಳಿತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಿದರು. ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಲು ಎಂದು ಆಗ್ರಹಿಸಿದರು.

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನಚಕಮಕಿ ವಾಗ್ವಾದ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಕೆಲ ನಾಯಕರನ್ನು ವಶಕ್ಕೆ ಪಡೆದು ವಾಹನದಲ್ಲಿ ತುಂಬಿ ಕರೆದೊಯ್ದಿದ್ದಾರೆ.

ಅಕ್ಟೋಬರ್ 10-20: ಬ್ಲಾಕ್ ಮಟ್ಟದಲ್ಲಿ ಬೈಕ್-ಸೈಕಲ್ ರ್ಯಾಲಿ ಹಾಗೂ ಪ್ರತಿಕೃತಿ ದಹನ. ಅಕ್ಟೋಬರ್ 25-ನವೆಂಬರ್ 25ರಂದು ದೇಶಾದ್ಯಂತ ಬೂತ್ ಮಟ್ಟದಲ್ಲಿ “ವೋಟ್ ಬಚಾವೋ” ಚೌಪಾಲ್ ಸಭೆಗಳು ನಡೆಯಲಿವೆ.

ನವೆಂಬರ್ 1 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಜನಾಕ್ರೋಶ ಸಮಾವೇಶ. ನವೆಂಬರ್ 25-26: ‘ಚಲೋ ದೆಹಲಿ’ ಮೂಲಕ ಸಂವಿಧಾನ ದಿನದಂದು ರಾಜಧಾನಿ ಮುತ್ತಿಗೆ ನಡೆಯಲಿದೆ. ಚುನಾವಣಾ ಆಯೋಗದ ನಿರ್ಧಾರಗಳ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಮುಂದುವರೆಸಿದ್ದು, ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆವರೆಗೂ ಈ ಹೋರಾಟ ತೀವ್ರಗೊಳಿಸಲು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ನಿರ್ಧರಿಸಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular