HomeKarnatakaಕನ್ನಡಿಗರ ಆಕ್ರೋಶಕ್ಕೆ ಮಣಿದ ಝೊಮೆಟೊ ಉದ್ಯೋಗಿ; ಕೈ ಮುಗಿದು ಕನ್ನಡದಲ್ಲೇ ಕ್ಷಮೆ

ಕನ್ನಡಿಗರ ಆಕ್ರೋಶಕ್ಕೆ ಮಣಿದ ಝೊಮೆಟೊ ಉದ್ಯೋಗಿ; ಕೈ ಮುಗಿದು ಕನ್ನಡದಲ್ಲೇ ಕ್ಷಮೆ

ಬೆಂಗಳೂರಿನಲ್ಲಿ ಮತ್ತೆ ಭಾಷಾ ವಿವಾದ ಮುನ್ನೆಲೆಗೆ ಬಂದಿದೆ. ಝೊಮೆಟೊ ಗೋದಾಮಿನ ಮೇಲ್ವಿಚಾರಕನೊಬ್ಬ ಸ್ಥಳೀಯ ಸಿಬ್ಬಂದಿಗೆ ಹಿಂದಿ ಕಲಿಯುವಂತೆ ಒತ್ತಾಯಿಸಿದ್ದಾನೆ. ಅಲ್ಲದೆ, ಹಿಂದಿ ಮಾತನಾಡಲು ಸಾಧ್ಯವಾಗದಿದ್ದರೆ ಕೆಲಸ ಬಿಟ್ಟು ಹೋಗಬಹುದು ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಅದೇ ಉದ್ಯೋಗಿ ಕನ್ನಡದಲ್ಲೇ ಕೈ ಮುಗಿದು ಕ್ಷಮೆ ಕೇಳಿದ್ದಾನೆ.

ಆಂಧ್ರ ಪ್ರದೇಶ ಮೂಲದ ಅಶೋಕ್ ಎಂಬಾತ ಬೆಂಗಳೂರಿನ ಮಾದನಾಯಕನಹಳ್ಳಿ ಸಮೀಪದ ಝೊಮೆಟೊ ಗೋದಾಮಿನಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದಾನೆ ಎನ್ನಲಾಗಿದೆ. ಸ್ಥಳೀಯ ಸಿಬ್ಬಂದಿಯೊಂದಿಗೆ ಮಾತನಾಡುವ ವೇಳೆ, “ನನಗೆ ಕನ್ನಡ ಬರುವುದಿಲ್ಲ. ನಾನು ಹಿಂದಿಯಲ್ಲೇ ಮಾತನಾಡುತ್ತೇನೆ. ನನ್ನೊಂದಿಗೆ ಕೆಲಸ ಮಾಡಬೇಕಾದರೆ ನೀವು ಹಿಂದಿ ಕಲಿಯಬೇಕು. ಇಲ್ಲದಿದ್ದರೆ ಕೆಲಸ ಬಿಟ್ಟು ಹೋಗಬಹುದು” ಎಂದು ಹೇಳಿದ್ದಾನೆ.

ಇದಕ್ಕೆ ಸಿಬ್ಬಂದಿ, “ಇದು ಕರ್ನಾಟಕ” ಎಂದು ಹೇಳಿದಾಗ, ಅಶೋಕ್‌ ಹಿಂದಿಯಲ್ಲೇ ಮಾತನಾಡುವುದಾಗಿ ಹೇಳಿದ್ದಾನೆ. ಈ ವೇಳೆ ನಡೆದ ಸಂಪೂರ್ಣ ಸಂಭಾಷಣೆಯನ್ನು ಯಾರೋ ವಿಡಿಯೊ ಮಾಡಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://x.com/sarpame/status/2107081181959512110

ವಿಡಿಯೊ ವೈರಲ್ ಆಗುತ್ತಿದ್ದಂತೆ ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಸಿಬ್ಬಂದಿಗೆ ಭಾಷೆಯ ವಿಚಾರದಲ್ಲಿ ಒತ್ತಡ ಹೇರುವುದನ್ನು ಖಂಡಿಸಿರುವ ಕೆಲವರು, ಅಶೋಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಅಶೋಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ವಿಷಯ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಅಶೋಕ್ ಇದೀಗ ವಿಡಿಯೊ ಮೂಲಕ ಕ್ಷಮೆಯಾಚಿಸಿದ್ದಾನೆ. ಕೈ ಮುಗಿದು ಕನ್ನಡದಲ್ಲೇ ಮಾತನಾಡಿರುವ ಆತ, “ನನ್ನಿಂದ ತಪ್ಪಾಗಿದೆ. ಇನ್ಮುಂದೆ ಈ ರೀತಿ ವರ್ತಿಸುವುದಿಲ್ಲ” ಎಂದು ಹೇಳಿದ್ದಾನೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular