HomeEntertainmentನಟ ಅಂಬರೀಷ್ ಗೆ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಚಿವ ರಾಮಲಿಂಗಾ...

ನಟ ಅಂಬರೀಷ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಪತ್ರ.!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ಮಾಜಿ ಸಚಿವ ದಿವಂಗತ ಅಂಬರೀಷ್ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡುವಂತೆ ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಅಂಬರೀಷ್ ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಅಪಾರ ಕೊಡುಗೆ, ಸಾಮಾಜಿಕ ಸೇವೆ ಹಾಗೂ ಸಾರ್ವಜನಿಕ ಜೀವನದಲ್ಲಿನ ಅವರ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಬೇಕು ಎಂದು ಸಚಿವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ

ಅಂಬರೀಷ್ ಅವರು ತಮ್ಮ ವಿಶಿಷ್ಟ ಅಭಿನಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ‘ರೆಬೆಲ್ ಸ್ಟಾರ್’ ಎಂದೇ ಜನಪ್ರಿಯರಾಗಿದ್ದರು. ಹಲವು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ನೂರಾರು ಸಿನಿಮಾಗಳಲ್ಲಿ ನಟಿಸಿ ಕನ್ನಡ ಸಿನಿಪ್ರೇಕ್ಷಕರ ಮನಗೆದ್ದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರರಂಗದ ಜೊತೆಗೆ ರಾಜಕೀಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅಂಬರೀಷ್ ಅವರು ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮಂಡ್ಯ ಭಾಗ ಸೇರಿದಂತೆ ರಾಜ್ಯದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಅವರು, ತಮ್ಮ ಸರಳತೆ ಹಾಗೂ ಜನಪರ ನಿಲುವಿನಿಂದ ಜನಪ್ರಿಯರಾಗಿದ್ದರು.

ಈ ಎಲ್ಲಾ ಸೇವೆಗಳನ್ನು ಪರಿಗಣಿಸಿ ಅಂಬರೀಷ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ಗೌರವ ಸಲ್ಲಿಸಬೇಕು ಎಂದು ರಾಮಲಿಂಗಾರೆಡ್ಡಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಳ್ಳಿ ತೆರೆಯ ಮೇಲಿನ ‘ರೆಬೆಲ್ ಸ್ಟಾರ್’ ಹಾಗೂ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಅಚ್ಚುಮೆಚ್ಚಿನ ‘ಮಂಡ್ಯದ ಗಂಡು’ ಡಾ. ಅಂಬರೀಶ್ ಅವರ ನೆನಪು ಸದಾ ಅಮರವಾಗಿರುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ಕನ್ನಡ ನಾಡು, ನುಡಿ, ಕಲೆ ಹಾಗೂ ರಾಜಕೀಯ ಕ್ಷೇತ್ರಕ್ಕೆ ಅಂಬರೀಶ್ ಅವರು ನೀಡಿರುವ ಕೊಡುಗೆ ಅಪಾರ. ಅವರ ಜನಪ್ರಿಯತೆ ಹಾಗೂ ಅಭಿಮಾನಿಗಳ ಆಶಯವನ್ನು ಪರಿಗಣಿಸಿ, ಮುಂಬರುವ ರಾಜ್ಯೋತ್ಸವದ ಸಂದರ್ಭದಲ್ಲಿ ಅಂಬರೀಶ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ಅಂಬರೀಶ್ ಅವರಿಗೆ ಸಲ್ಲಬೇಕಾದ ಈ ಗೌರವವು ಕೇವಲ ಅವರಿಗಷ್ಟೇ ಸೀಮಿತವಲ್ಲ. ಇದು ನಾಡಿನ ಪ್ರತಿಯೊಬ್ಬ ಕನ್ನಡಿಗನ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ‘ರೆಬೆಲ್ ಸ್ಟಾರ್’ ಎಂದೇ ಜನಪ್ರಿಯರಾಗಿದ್ದ ಅಂಬರೀಶ್, ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಚಿತ್ರರಂಗದ ಜೊತೆಗೆ ರಾಜಕೀಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅವರು, ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು.

ಅಂಬರೀಶ್ ಅವರಿಗೆ ಮರಣೋತ್ತರವಾಗಿ ಕರ್ನಾಟಕದ ಅತ್ಯುನ್ನತ ನಾಗರಿಕ ಗೌರವವಾದ ‘ಕರ್ನಾಟಕ ರತ್ನ’ ನೀಡುವಂತೆ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಪ್ರಸ್ತಾವನೆ ಇದೀಗ ಮತ್ತೊಮ್ಮೆ ಗಮನ ಸೆಳೆದಿದೆ.

ಸಚಿವ ರಾಮಲಿಂಗಾ ರೆಡ್ಡಿ ಟ್ವೀಟ್

ಬೆಳ್ಳಿ ತೆರೆಯ ಮೇಲಿನ ‘ರೆಬೆಲ್ ಸ್ಟಾರ್’, ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಅಚ್ಚುಮೆಚ್ಚಿನ ‘ಮಂಡ್ಯದ ಗಂಡು’ ಡಾ. ಅಂಬರೀಶ್ ನಮ್ಮೆಲ್ಲರ ನೆನಪಿನಲ್ಲಿ ಸದಾ ಅಮರ.” ಕನ್ನಡ ನಾಡು, ನುಡಿ, ಕಲೆ ಹಾಗೂ ರಾಜಕೀಯ ರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅಭಿಮಾನಿಗಳ ಆಶಯದಂತೆ ಮತ್ತು ಅವರ ಜನಪ್ರಿಯತೆಯನ್ನು ಗುರುತಿಸಿ, ಮುಂಬರುವ ರಾಜ್ಯೋತ್ಸವದ ವೇಳೆಗೆ ಅವರಿಗೆ ‘ಕರ್ನಾಟಕ ರತ್ನ’ (ಮರಣೋತ್ತರವಾಗಿ) ಪ್ರಶಸ್ತಿ ನೀಡಿ ಗೌರವಿಸಬೇಕೆಂದು ನಾನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅಂಬರೀಶ್ ಅವರಿಗೆ ಸಲ್ಲಬೇಕಾದ ಈ ಗೌರವ ನಾಡಿನ ಪ್ರತಿಯೊಬ್ಬ ಕನ್ನಡಿಗನ ಗೌರವವಾಗಿದೆ.ಬೆಳ್ಳಿ ತೆರೆಯ ಮೇಲಿನ ‘ರೆಬೆಲ್ ಸ್ಟಾರ್’, ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಅಚ್ಚುಮೆಚ್ಚಿನ ‘ಮಂಡ್ಯದ ಗಂಡು’ ಡಾ. ಅಂಬರೀಶ್ ನಮ್ಮೆಲ್ಲರ ನೆನಪಿನಲ್ಲಿ ಸದಾ ಅಮರ.” ಕನ್ನಡ ನಾಡು, ನುಡಿ, ಕಲೆ ಹಾಗೂ ರಾಜಕೀಯ ರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅಭಿಮಾನಿಗಳ ಆಶಯದಂತೆ ಮತ್ತು ಅವರ ಜನಪ್ರಿಯತೆಯನ್ನು ಗುರುತಿಸಿ, ಮುಂಬರುವ ರಾಜ್ಯೋತ್ಸವದ ವೇಳೆಗೆ ಅವರಿಗೆ ‘ಕರ್ನಾಟಕ ರತ್ನ’ (ಮರಣೋತ್ತರವಾಗಿ) ಪ್ರಶಸ್ತಿ ನೀಡಿ ಗೌರವಿಸಬೇಕೆಂದು ನಾನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅಂಬರೀಶ್ ಅವರಿಗೆ ಸಲ್ಲಬೇಕಾದ ಈ ಗೌರವ ನಾಡಿನ ಪ್ರತಿಯೊಬ್ಬ ಕನ್ನಡಿಗನ ಗೌರವವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular