ಬೆಂಗಳೂರು: ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾಅರೆ.
ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಇದೀಗ ಇಡಿ ಅಧಿಕಾರಿಗಳು, ಶಿವಶಂಕರಪ್ಪ ಸಾಹುಕಾರ್ ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿದೇ ವೇಳೆ ಕೆಪಿಎಸ್ಸಿ ಸದಸ್ಯೆ ಬಿ.ವಿ.ಗೀತಾ ಅವರ ಮನೆ ಮೇಲೂ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಗೀತಾ ಅವರನ್ನೂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈಗಾಗಲೇ ಇಡಿಯಿಂದ ಬಂಧಿಸಲ್ಪಟ್ಟಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿಚಾರಣೆ ವೇಳೆ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಬಿ.ವಿ.ಗೀತಾ, ಶಾಂತಾ ಹೊಸಮನಿ ಸೇರಿದಂತೆ ಅಕ್ರಮದಲ್ಲಿ ನಾಲ್ವರ ಕೈವಾಡ ಇರುವ ಬಗ್ಗೆ ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇಂದು ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಎರಡನೇ ಬಾರಿ ದಾಳಿ ನಡೆಸಿದ್ದರು.
ಇನ್ನು ಕೆಪಿಎಸ್ ಸಿ ಸದಸ್ಯೆ ಗೀತಾ ಅವರ ಮನೆ ಮೇಲೂ ದಾಳಿ ನಡೆಸಿದ್ದರು. ಪರಿಶೀಲನೆ ಬಳಿಕ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಪ್ರಕರಣದ ತನಿಖೆ ಮತ್ತಷ್ಟು ಮಹತ್ವದ ಘಟ್ಟ ತಲುಪಿದೆ.
ಕೆಪಿಎಸ್ ಸಿ ಹಗರಣ: ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಎರಡನೇ ಬಾರಿ ED ಅಧಿಕಾರಿಗಳ ದಾಳಿ
ಬೆಂಗಳೂರು: ಕೆಪಿಎಸ್ ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇದು ಸಾಹುಕಾರ್ ಮನೆ ಮೇಲೆ ನಡೆದ ಎರಡನೇ ಇಡಿ ದಾಳಿಯಾಗಿದೆ.
ಇದೇ ವೇಳೆ ಕೆಪಿಎಸ್ ಸಿ ಸದಸ್ಯೆ ಗೀತಾ ಅವರ ಮನೆ ಮೇಲೂ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದಿಬಂದಿದೆ.
ಕೆಪಿಎಸ್ಸಿ ಹಗರಣದ ಪ್ರಮುಖ ಆರೋಪಿಯಾಗಿರುವ ಅಮಾನತುಗೊಂಡ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನೇಮಕಾತಿ ಅಕ್ರಮಗಳ ಗಂಭೀರ ಆರೋಪಗಳಿವೆ.
ಪಶುಸಂಗೋಪನಾ ಇಲಾಖೆಯ 400 ಪಶುವೈದ್ಯ ಅಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಸಾಹುಕಾರ್ ಪಾತ್ರವಿದೆ ಎಂಬ ಗಂಭೀರ ಆರೋಪವಿದೆ. ಸೆಪ್ಟೆಂಬರ್ 7, 2026 ರಂದು ಕರ್ನಾಟಕ ಹೈಕೋರ್ಟ್ ಶಿವಶಂಕರಪ್ಪ ಸಾಹುಕಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಆದಾಗ್ಯೂ ಶಿವಶಂಕರಪ್ಪ ಅವರನ್ನು ತನಿಖಾಧಿಕಾರಿಗಳು ಬಂಧಿಸದಿರುವುದು ಅಚ್ಚರಿ ಮೂಡಿಸಿದೆ.
ತಮ್ಮ ಪುತ್ರಿಯರ ಮತ್ತು ಸಂಬಂಧಿಕರ ನೌಕರಿ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ರಾಜ್ಯ ಸರ್ಕಾರ ಇವರನ್ನು ಆಯೋಗದ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ಒಡೆತನ ಪಡೆದ ಆರೋಪದ ಮೇರೆಗೆ ಯಾದಗಿರಿಯಲ್ಲೂ ಸಹ ಇವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಇನ್ನು ಕೆಪಿಎಸ್ ಸಿ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಕಿಂಗ್ ಪಿನ್ ಬಸವರಾಜ್ ಕನ್ನಾಳೆ ಅವರನ್ನು ಸಿಐಡಿ ಬಂಧಿಸಿದ್ದು, ತನಿಖೆ ಮುಂದುವರಿದಿದೆ.

