HomeAgricultureರೈತರಿಗೆ ಗುಡ್ ನ್ಯೂಸ್: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ

ರೈತರಿಗೆ ಗುಡ್ ನ್ಯೂಸ್: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ತಾಲೂಕು ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ರೈತರು ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ 2026-27ನೇ ಸಾಲಿಗೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಮುಂದಿನ 30 ದಿನಗಳ ಒಳಗಾಗಿ, ಅಂದರೆ ನವೆಂಬರ್ 06 ರ ಒಳಗೆ ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಲ್ಲಿ ಮುದ್ದಾಂ ಆಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಇತ್ತೀಚಿನ ಪಹಣಿ ಪ್ರತಿ, ಇತ್ತೀಚಿನ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಬೋರ್‌ವೆಲ್‌ ನ ಜಿಪಿಎಸ್ ಫೋಟೋ (ಫಲಾನುಭವಿ ಬೋರ್‌ವೆಲ್ ಪಕ್ಕದಲ್ಲಿ ನಿಂತಿರುವ ಚಿತ್ರ), ರೇಷನ್ ಕಾರ್ಡ್ ಪ್ರತಿ (ಬಿಪಿಎಲ್)  ಆದಾಯ ಪ್ರಮಾಣ ಪತ್ರ ಪ್ರತಿ,ಪಾಸ್‌ಪೋರ್ಟ್ ಅಳತೆಯ ಫೋಟೋ 2 ಲಗತ್ತಿಸಬೇಕು.

ಸಲ್ಲಿಕೆಯಾದ ಅರ್ಜಿಗಳನ್ನು ಸರ್ಕಾರದ ಮಾನದಂಡಗಳು, ಮೆಸ್ಕಾಂ ನಿಗಮದ ತಾಂತ್ರಿಕ ಸಾಧ್ಯತೆ ಹಾಗೂ ಜಂಟಿ ಇಲಾಖಾ ಆಯ್ಕೆ ಸಮಿತಿಯ ಅನುಮೋದನೆಯ ಮೇರೆಗೆ ಆದ್ಯತೆಯ ಆಧಾರದಲ್ಲಿ ವಿದ್ಯುತ್ ಸಂಪರ್ಕ ಒದಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ದೇಶಿತ ಪಂಪ್‌ಸೆಟ್ ಇರುವ ಸರ್ವೆ ನಂಬರ್ ಜಮೀನಿನಲ್ಲಿ ಈ ಹಿಂದೆ ಗಂಗಾ ಕಲ್ಯಾಣ, ಎಸ್‌ಸಿಪಿ/ಟಿಎಸ್‌ಪಿ ಅಥವಾ ಸರ್ಕಾರದ ಯಾವುದೇ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯದಿರುವ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಗ್ರಾಮೀಣ ಉಪವಿಭಾಗ ಮೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಚಿತ್ರಕೃಪೆ-ಎಐ)

ಅ. 26 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ವಿಜೃಂಭಣೆ ಆಚರಣೆ

ಶಿವಮೊಗ್ಗ: ಅಕ್ಟೋಬರ್ 26 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದ್ದು, ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತದೆ. ಮೆರವಣಿಗೆಯು ಸೈನ್ಸ್ ಮೈದಾನದಿಂದ ಪ್ರಾರಂಭವಾಗಿ ಕುವೆಂಪು ರಂಗಮಂದಿರದವರೆಗೆ ಸಾಗಲಿದೆ.

ಅಲಂಕಾರ ಹಾಗೂ ಆಹ್ವಾನ: ಮಹಾನಗರ ಪಾಲಿಕೆ ವತಿಯಿಂದ ನಗರದ ಮುಖ್ಯ ಭಾಗಗಳಲ್ಲಿ ಬ್ಯಾನರ್, ಫ್ಲೆಕ್ಸ್ ,ತಳಿರು ತೋರಣ, ವಾಲ್ಮೀಕಿ ವೃತ್ತಕ್ಕೆ ಅಲಂಕಾರ ಹಾಗೂ ಮೆರವಣಿಗೆಯ ಭಾವಚಿತ್ರಕ್ಕೆ ಹೂವಿನ ಅಲಂಕಾರ ಮಾಡಲು ಸೂಚಿಸಿದ ಅವರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಹಂಚುವಂತೆ ತಿಳಿಸಿದರು‌.

ಸಾಂಸ್ಕೃತಿಕ ತಂಡಗಳು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೆರವಣಿಗೆಗೆ ಜಾನಪದ ಕಲಾ ತಂಡಗಳನ್ನು ನಿಯೋಜಿಸಲು ನಿರ್ದೇಶಿಸಿದರು.

ಜಯಂತಿ ಕಾರ್ಯಕ್ರಮ ಮುಗಿದ ಬಳಿಕ ಊಟ ಹಾಗೂ ಉತ್ತಮ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಿಂದ ಮಾಡುವಂತೆ ತಿಳಿಸಿದರು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಎಸ್‌ಎಸ್‌ಎಲ್‌ಸಿಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗೆ ರೂ. 1 ಲಕ್ಷ ನಗದು ಬಹುಮಾನ ಈಗಾಗಲೇ ಡಿಬಿಟಿ ಮೂಲಕ ಸಂದಾಯವಾಗಿದ್ದು, ಸದರಿ ವಿದ್ಯಾರ್ಥಿಯೊಂದಿಗೆ ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಗುವುದು ಎಂದು ತಿಳಿಸಿದ ಅವರು ಸಮಾಜದ ಮುಖಂಡರ ಸಲಹೆ, ಸೂಚನೆ ಮೇರೆಗೆ ಉಪನ್ಯಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.

ವಾಲ್ಮೀಕಿ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. 

ಸಮುದಾಯದ ಮುಖಂಡರ ಮನವಿ: ವಾಲ್ಮೀಕಿ ವೃತ್ತಕ್ಕೆ ಅಲಂಕಾರ ಮಾಡುವಂತೆ ಹಾಗೂ ಸಮಾಜದ ಬಾಂಧವರು ಇಲ್ಲಿಂದಲೇ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ಸಭೆಯಲ್ಲಿ ಜಿ.ಪಂ. ಸಿಇಓ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ., ಎಸಿ ಡಾ. ಮೈತ್ರಿ, ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಶ್ರೀನಿವಾಸ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪರಿಶಿಷ್ಟ ಪಂಗಡ ಮತ್ತು ವಿವಿಧ ಸಮುದಾಯಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular