HomeKarnatakaರಾಜ್ಯ ಮಟ್ಟದ ಪುಸ್ತಕ ಆಯ್ಕೆ: ಪ್ರದರ್ಶನ ಹಾಗೂ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ರಾಜ್ಯ ಮಟ್ಟದ ಪುಸ್ತಕ ಆಯ್ಕೆ: ಪ್ರದರ್ಶನ ಹಾಗೂ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ಸಾಲಿನಲ್ಲಿ ಮುದ್ರಣಗೊಂಡು, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಲಾದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.

ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಸಾರ್ವಜನಿಕ ಪ್ರದರ್ಶನ ಹಾಗೂ ಆಕ್ಷೇಪಣೆಗಳ ಸಲ್ಲಿಕೆಗೆ ದಿನಾಂಕಗಳನ್ನು ನಿಗದಿಪಡಿಸಿ ಇಲಾಖೆಯ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

ಪುಸ್ತಕಗಳ ಪ್ರದರ್ಶನ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು 2026 ರ ಅಕ್ಟೋಬರ್ 12 ರಿಂದ 14 ರವರೆಗೆ ಎರಡು ದಿನಗಳ ಕಾಲ ಬೆಳಿಗ್ಗೆ 10:00 ರಿಂದ ಸಂಜೆ 5:30 ರವರೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹತ್ತಿರ ‘ಡಾ. ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ’ದ ಗ್ರಂಥಾಲಯ ಸಭಾಂಗಣದಲ್ಲಿ (ನೆಲ ಮಹಡಿ) ಏರ್ಪಡಿಸಲಾಗಿದೆ.

ಅಲ್ಲದೆ, ಆಯ್ಕೆಯಾದ ಎಲ್ಲಾ ಭಾಷೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಪ್ರದರ್ಶಿಸಲಾಗುತ್ತದೆ. ಸಾರ್ವಜನಿಕರು ಹಾಗೂ ಲೇಖಕರು ಇಲಾಖೆಯ ಅಧಿಕೃತ ವೆಬ್‍ಸೈಟ್  dpl.karnataka.gov.in ನಲ್ಲೂ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ:

ಪುಸ್ತಕ ಆಯ್ಕೆಗೆ ಸಂಬಂಧಿಸಿದಂತೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ 2026 ರ ಅಕ್ಟೋಬರ್ 12 ರಿಂದ ಅಕ್ಟೋಬರ್ 22 ರ ವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:30 ರ ಒಳಗಾಗಿ ತಮ್ಮ ಲಿಖಿತ ಮನವಿಗಳನ್ನು ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಇಲ್ಲಿಗೆ ಸಲ್ಲಿಸಬೇಕಾಗಿದೆ.

ನಿಗದಿತ ಅಂತಿಮ ದಿನಾಂಕದ ನಂತರ ಬರುವ ಯಾವುದೇ ಮನವಿಗಳನ್ನು ಅಥವಾ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ವಿದ್ಯಾಕುಮಾರಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಪಂಪ್‌ಸೆಟ್‌ ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ತಾಲೂಕು ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ರೈತರು ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ 2026-27ನೇ ಸಾಲಿಗೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಮುಂದಿನ 30 ದಿನಗಳ ಒಳಗಾಗಿ, ಅಂದರೆ ನವೆಂಬರ್ 06 ರ ಒಳಗೆ ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಲ್ಲಿ ಮುದ್ದಾಂ ಆಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಇತ್ತೀಚಿನ ಪಹಣಿ ಪ್ರತಿ, ಇತ್ತೀಚಿನ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಬೋರ್‌ವೆಲ್‌ ನ ಜಿಪಿಎಸ್ ಫೋಟೋ (ಫಲಾನುಭವಿ ಬೋರ್‌ವೆಲ್ ಪಕ್ಕದಲ್ಲಿ ನಿಂತಿರುವ ಚಿತ್ರ), ರೇಷನ್ ಕಾರ್ಡ್ ಪ್ರತಿ (ಬಿಪಿಎಲ್)  ಆದಾಯ ಪ್ರಮಾಣ ಪತ್ರ ಪ್ರತಿ,ಪಾಸ್‌ಪೋರ್ಟ್ ಅಳತೆಯ ಫೋಟೋ 2 ಲಗತ್ತಿಸಬೇಕು.

ಸಲ್ಲಿಕೆಯಾದ ಅರ್ಜಿಗಳನ್ನು ಸರ್ಕಾರದ ಮಾನದಂಡಗಳು, ಮೆಸ್ಕಾಂ ನಿಗಮದ ತಾಂತ್ರಿಕ ಸಾಧ್ಯತೆ ಹಾಗೂ ಜಂಟಿ ಇಲಾಖಾ ಆಯ್ಕೆ ಸಮಿತಿಯ ಅನುಮೋದನೆಯ ಮೇರೆಗೆ ಆದ್ಯತೆಯ ಆಧಾರದಲ್ಲಿ ವಿದ್ಯುತ್ ಸಂಪರ್ಕ ಒದಗಿಸಲಾಗುವುದು.

ಉದ್ದೇಶಿತ ಪಂಪ್‌ಸೆಟ್ ಇರುವ ಸರ್ವೆ ನಂಬರ್ ಜಮೀನಿನಲ್ಲಿ ಈ ಹಿಂದೆ ಗಂಗಾ ಕಲ್ಯಾಣ, ಎಸ್‌ಸಿಪಿ/ಟಿಎಸ್‌ಪಿ ಅಥವಾ ಸರ್ಕಾರದ ಯಾವುದೇ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯದಿರುವ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಗ್ರಾಮೀಣ ಉಪವಿಭಾಗ ಮೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular