HomeIndiaಹಾಡಹಗಲೇ ಗುಂಡಿನ ಚಕಮಕಿ; ಪತ್ನಿ ಮತ್ತು ಯುವಕನ ಮೇಲೆ ಪತಿಯಿಂದಲೇ ಫೈರಿಂಗ್ | Video

ಹಾಡಹಗಲೇ ಗುಂಡಿನ ಚಕಮಕಿ; ಪತ್ನಿ ಮತ್ತು ಯುವಕನ ಮೇಲೆ ಪತಿಯಿಂದಲೇ ಫೈರಿಂಗ್ | Video

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಕೋಟ್ಲಾ ಚುಂಗಿ ಚೌರಾಹಾ ಬಳಿಯ ಜನನಿಬಿಡ ರಸ್ತೆಯಲ್ಲಿ ಮಂಗಳವಾರ ರಾತ್ರಿ ಭೀಕರ ಗುಂಡಿನ ದಾಳಿ ನಡೆದಿದೆ. ಪತಿಯೊಬ್ಬ ತನ್ನ ಪತ್ನಿ ಹಾಗೂ ಆಕೆಯ ಜೊತೆಗಿದ್ದ ಮತ್ತೊಬ್ಬ ಯುವಕನ ಮೇಲೆ ಮಾರಣಾಂತಿಕವಾಗಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯನ್ನು ಪರಿಶೀಲಿಸಿದಾಗ, ರಿಷಭ್ ಅಲಿಯಾಸ್ ಬಂಟಿ ತೈಲಂಗ್ ಮತ್ತು ಆತನ ಪತ್ನಿ ಶಿಪ್ರಾ ತೈಲಂಗ್ ನಡುವೆ ಕಳೆದ ಎರಡು ವರ್ಷಗಳಿಂದ ತೀವ್ರ ಭಿನ್ನಾಭಿಪ್ರಾಯವಿತ್ತು. ಈ ಕಾರಣದಿಂದ ಶಿಪ್ರಾ ತನ್ನ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಮಂಗಳವಾರ ರಾತ್ರಿ ಶಿಪ್ರಾ ಅವರು ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾಗ, ಮಾರ್ಗಮಧ್ಯೆ ಅಂಗಡಿಯೊಂದರ ಬಳಿ ನಿಂತು ಸನ್ನಿ ಠಾಕೂರ್ ಎಂಬ ಯುವಕನೊಂದಿಗೆ ಮಾತನಾಡುತ್ತಿದ್ದರು.

ಈ ವೇಳೆ ಸ್ಥಳಕ್ಕೆ ಬಂದ ರಿಷಭ್, ತನ್ನ ಬಳಿಯಿದ್ದ ಲೈಸೆನ್ಸ್ ಹೊಂದಿದ ರಿವಾಲ್ವರ್‌ನಿಂದ ಇಬ್ಬರ ಮೇಲೆಯೂ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಆರೋಪಿಯು ಆರು ಸುತ್ತಿಗಿಂತಲೂ ಹೆಚ್ಚು ಬಾರಿ ಗುಂಡು ಹಾರಿಸಿದ್ದು, ಇಬ್ಬರಿಗೂ ಹಲವು ಗುಂಡುಗಳು ತಗುಲಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಘಟನೆ ನಡೆದ ತಕ್ಷಣವೇ ಚೌಕದಲ್ಲಿದ್ದ ಪೊಲೀಸರು ಆರೋಪಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಗ್ರಾದ ಆಸ್ಪತ್ರೆಗೆ ರವಾನಿಸಲಾಗಿದೆ. ವಿಚಾರಣೆ ವೇಳೆ ಆರೋಪಿಯು, ತನ್ನ ಪತ್ನಿಗೆ ಆ ಯುವಕನೊಂದಿಗೆ ಅಕ್ರಮ ಸಂಬಂಧವಿದೆ ಎಂಬ ಸಂಶಯದಿಂದ ಈ ಕೃತ್ಯ ಎಸಗಿರುವುದಾಗಿ ಹೇಳಿಕೆ ನೀಡಿದ್ದಾನೆ. ಆದರೆ ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನಾ ಸ್ಥಳದಿಂದ ದೊರೆತ ರಿವಾಲ್ವರ್ ಮತ್ತು ಕಾಲಿ ಕಾರ್ಟ್ರಿಡ್ಜ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಘಟನೆ ನಡೆದ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ಹತ್ತಿರದ ಅಂಗಡಿಗಳಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ತನಿಖೆಯ ವರದಿ ಹಾಗೂ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular