HomeKarnatakaಆನ್ ಲೈನ್ ಗೇಮ್ ಗೀಳಿಗೆ ಬಿದ್ದ ಸ್ನೇಹಿತರಿಂದ ಟಾರ್ಚರ್: ನೊಂದ ಬಾಲಕ ಆತ್ಮಹತ್ಯೆ

ಆನ್ ಲೈನ್ ಗೇಮ್ ಗೀಳಿಗೆ ಬಿದ್ದ ಸ್ನೇಹಿತರಿಂದ ಟಾರ್ಚರ್: ನೊಂದ ಬಾಲಕ ಆತ್ಮಹತ್ಯೆ

ದಾವಣಗೆರೆ: ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ಸ್ನೇಹಿತರು ಹಣ ನೀಡುವಂತೆ ಪೀಡಿಸುತ್ತಿದ್ದುದಕ್ಕೆ ಬೇಸತ್ತ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ.

ಮನೋಜ್ ಟಿ.ಆರ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಗೇಮ್ ಆಪ್‌ನಲ್ಲಿ ಹಣ ಹಾಕುವಂತೆ ಒತ್ತಾಯಿಸಿದ್ದರು. ಹಣ ತರದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ನೇಹಿತರು ಒತ್ತಾಯಕ್ಕೆ ಮನೆಯಿಂದ ಸುಮಾರು 4 ಲಕ್ಷ ರೂ. ಹಣವನ್ನು ಮನೋಜ್‌ ತೆಗೆದುಕೊಂಡುಹೋಗಿದ್ದ. ಮನೆಯಲ್ಲಿ ಇಟ್ಟಿದ್ದ ಹಣದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಪರಿಶೀಲನೆ ನಡೆಸಿದಾಗ ನಾಲ್ವರು ಹಣ ತರುವಂತೆ ಒತ್ತಾಯಿಸಿರುವುದು ಗೊತ್ತಾಗಿದೆ. ಅಲ್ಲದೇ ಹಣಕ್ಕಾಗಿ ಮಗನ ಮೇಲೆ ಹಲ್ಲೆ ಸಹ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಕೇಸ್: ವಿಜಯಲಕ್ಷ್ಮೀ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್; ದರ್ಶನ್ ಗೆ ಮತ್ತಷ್ಟು ಆತಂಕ

ನವದೆಹಲಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ದರ್ಶನ್ ಗೆ ತೀವ್ರ ಹಿನ್ನಡೆಯಾಗಿದೆ.

ಪ್ರಕರಣದಲ್ಲಿ ಮಹತ್ವದ ತಿರುವು ನೀಡಿದ್ದ ಆರೋಪಿ ಪ್ರದೂಷ್, ನ್ಯಾಯಾಲಯದ ಮುಂದೆ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಆದರೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ಪಾಲಿಸದೆ ಹಾಗೂ ಸಹ-ಆರೋಪಿಗಳ ಗಮನಕ್ಕೆ ತರದೆ ಆತನಿಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡಲಾಗಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದ ನಂತರ, ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳ ಪೀಠದಲ್ಲಿ ನಡೆದ ವಾದ-ಪ್ರತಿವಾದದ ಬಳಿಕ, ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ಕಾನೂನುಬಾಹಿರ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ವಿಜಯಲಕ್ಷ್ಮಿ ಅವರ ಅರ್ಜಿಯನ್ನು ವಜಾಗೊಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular