HomeKarnatakaರಸ್ತೆ ಖಾಲಿಯಿದ್ದರೂ ಫುಟ್‌ಪಾತ್ ಮೇಲೆ ಸ್ಕೂಟರ್ ಚಾಲನೆ ; ಸವಾರನ ಶೋಕಿಗೆ ಭಾರಿ ಆಕ್ರೋಶ |...

ರಸ್ತೆ ಖಾಲಿಯಿದ್ದರೂ ಫುಟ್‌ಪಾತ್ ಮೇಲೆ ಸ್ಕೂಟರ್ ಚಾಲನೆ ; ಸವಾರನ ಶೋಕಿಗೆ ಭಾರಿ ಆಕ್ರೋಶ | Video

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಸವಾರರಿಗೆ ಹಾಗೂ ಫುಟ್‌ಪಾತ್‌ಗಳು ಪಾದಚಾರಿಗಳಿಗೆ ಎಂಬ ಕನಿಷ್ಠ ನಾಗರಿಕ ಪ್ರಜ್ಞೆಯನ್ನೂ ಮರೆತು ಕೆಲವರು ವರ್ತಿಸುತ್ತಿರುವುದು ಹೊಸದೇನಲ್ಲ. ಆದರೆ ರಸ್ತೆಯಲ್ಲಿ ವಾಹನಗಳ ದಟ್ಟಣೆ ಇಲ್ಲದೆ ಖಾಲಿಯಾಗಿದ್ದರೂ ಸಹ, ಸವಾರನೊಬ್ಬ ಬೈಕನ್ನು ಫುಟ್‌ಪಾತ್ ಮೇಲೆಯೇ ವೇಗವಾಗಿ ಚಲಾಯಿಸಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟ್ವಿಟರ್‌ನಲ್ಲಿ (ಎಕ್ಸ್) ಸನಾತನ ಕನ್ನಡ ಎಂಬ ಐಡಿಯಿಂದ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಬೆಂಗಳೂರು ಸಂಚಾರ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗಿದೆ. “ಮುಖ್ಯ ರಸ್ತೆ ಸಂಪೂರ್ಣವಾಗಿ ಖಾಲಿಯಾಗಿದ್ದರೂ ಸಹ ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವ ಹಂಬಲ ಏಕಿರಬೇಕು? ಪಾದಚಾರಿಗಳ ಸುರಕ್ಷತೆಯನ್ನು ಗಾಳಿಗೆ ತೂರಿ ಹೀಗೆ ಬೇಜವಾಬ್ದಾರಿಯಿಂದ ವಾಹನ ಚಲಾಯಿಸುವುದು ಅಪಾಯಕಾರಿ. ಇದು ನಾಗರಿಕ ಪ್ರಜ್ಞೆ ಮತ್ತು ಸಾರ್ವಜನಿಕ ಸುರಕ್ಷತೆಯ ಪ್ರಶ್ನೆಯಾಗಿದೆ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ವೀಡಿಯೊದಲ್ಲಿ ಫುಟ್‌ಪಾತ್ ಮೇಲೆ ಸಾರ್ವಜನಿಕರು ನಡೆದಾಡುತ್ತಿದ್ದರೂ ಸಹ, ಅದನ್ನು ಲೆಕ್ಕಿಸದ ಸವಾರನೊಬ್ಬ ಬೈಕನ್ನು ಭಾರಿ ವೇಗದಲ್ಲಿ ಚಲಾಯಿಸಿಕೊಂಡು ಹೋಗುವುದು ಸ್ಪಷ್ಟವಾಗಿ ಕಂಡುಬಂದಿದೆ. ವೀಡಿಯೊ ವೈರಲ್ ಆಗುತ್ತಿದ್ದಂತೆ ಸಾವಿರಾರು ನೆಟ್ಟಿಗರು ಕಾಮೆಂಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಮ್ಮೆ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿ ಯಾರೂ ಪ್ರಶ್ನಿಸದಿದ್ದರೆ, ಅದನ್ನೇ ಅಭ್ಯಾಸ ಮಾಡಿಕೊಳ್ಳುತ್ತಾರೆ. ಇಂತಹ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಈ ಸವಾರನಿಗೆ ಕನಿಷ್ಠ ಒಂದು ದಿನವಾದರೂ ಜೈಲು ಶಿಕ್ಷೆ ವಿಧಿಸಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ. ಇನ್ನು ಕೆಲವರು ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳಿಗೆ ಹೆದರಿ ಸವಾರ ಫುಟ್‌ಪಾತ್ ಏರಿರಬಹುದು ಎಂದು ವ್ಯಂಗ್ಯವಾಡಿದ್ದು, ನಗರದಲ್ಲಿ ಪಾದಚಾರಿಗಳ ಸುರಕ್ಷತೆ ಸವಾಲಾಗಿ ಪರಿಣಮಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular