HomeKarnatakaರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಸಮನ್ಸ್ ಜಾರಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಸಮನ್ಸ್ ಜಾರಿ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ರೇಣುಕಾಸ್ವಾಅಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ 59ನೇ ಸಿಎಸ್‌ಎಚ್‌ ನ್ಯಾಯಾಲಯವು ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್ 15ರಂದು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿ ಹೇಳಿಕೆ ದಾಖಲಿಸುವಂತೆ ನಿರ್ದೇಶನ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಣುಕಾಸ್ವಾಮಿ ಹತ್ಯೆ ನಡೆದ ದಿನದಂದು (ಜೂನ್ 8, 2024) ನಟ ದರ್ಶನ್ ಅವರು ಆರ್‌ಆರ್ ನಗರದ ‘ಸ್ಟೋನಿಬ್ರೂಕ್’ ರೆಸ್ಟೋರೆಂಟ್‌ನಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಉಪಸ್ಥಿತರಿದ್ದರು. ತನಿಖಾಧಿಕಾರಿಗಳು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ನಟ ಚಿಕ್ಕಣ್ಣ ಅವರನ್ನು ದರ್ಶನ್ ವಿರುದ್ಧದ ಪ್ರಮುಖ ಸಾಕ್ಷಿಯನ್ನಾಗಿ ಸೇರಿಸಲಾಗಿದೆ.

ಹತ್ಯೆ ನಡೆಯುವ ಕೆಲವೇ ಗಂಟೆಗಳ ಮೊದಲು ನಟ ದರ್ಶನ್ ಎಲ್ಲಿದ್ದರು? ಯಾರ ಜೊತೆಗಿದ್ದರು? ಹಾಗೂ ಅವರ ನಡವಳಿಕೆ ಹೇಗಿತ್ತು? ಎಂಬುದನ್ನು ದೃಢೀಕರಿಸಲು ಚಿಕ್ಕಣ್ಣ ಅವರ ಸಾಕ್ಷ್ಯ ಹಾಗೂ ವಿಚಾರಣೆ ಅತ್ಯಂತ ನಿರ್ಣಾಯಕವಾಗಿದೆ. ನ್ಯಾಯಾಲಯದಲ್ಲಿ ಚಿಕ್ಕಣ್ಣ ಅವರು ಯಾವ ರೀತಿಯ ಹೇಳಿಕೆ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಈ ಮೊದಲು ತನಿಖೆ ವೇಳೆ ಪೊಲೀಸರ ಮುಂದೆ ಹಾಜರಾಗಿದ್ದ ಚಿಕ್ಕಣ್ಣ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿಯೂ ಸಿಆರ್‌ಪಿಸಿ 164ರ ಅಡಿಯಲ್ಲಿ ತಮ್ಮ ಸ್ವಯಂಪ್ರೇರಿತ ಹೇಳಿಕೆಯನ್ನು ದಾಖಲಿಸಿದ್ದರು. ಇದೀಗ ವಿಚಾರಣೆ ಪ್ರಕ್ರಿಯೆ ಆರಂಭವಾಗಿರುವುದರಿಂದ, ಕೋರ್ಟ್‌ನಲ್ಲಿ ಪ್ರತ್ಯಕ್ಷ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣೆಗಾಗಿ ಅವರಿಗೆ ಸಮನ್ಸ್ ನೀಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್: ವಿಜಯಲಕ್ಷ್ಮೀ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್; ದರ್ಶನ್ ಗೆ ಮತ್ತಷ್ಟು ಆತಂಕ

ನವದೆಹಲಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ದರ್ಶನ್ ಗೆ ತೀವ್ರ ಹಿನ್ನಡೆಯಾಗಿದೆ.

ಪ್ರಕರಣದಲ್ಲಿ ಮಹತ್ವದ ತಿರುವು ನೀಡಿದ್ದ ಆರೋಪಿ ಪ್ರದೂಷ್, ನ್ಯಾಯಾಲಯದ ಮುಂದೆ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಆದರೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ಪಾಲಿಸದೆ ಹಾಗೂ ಸಹ-ಆರೋಪಿಗಳ ಗಮನಕ್ಕೆ ತರದೆ ಆತನಿಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡಲಾಗಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದ ನಂತರ, ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳ ಪೀಠದಲ್ಲಿ ನಡೆದ ವಾದ-ಪ್ರತಿವಾದದ ಬಳಿಕ, ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ತೆಗೆದುಕೊಂಡ ನಿರ್ಧಾರದಲ್ಲಿ ಯಾವುದೇ ಕಾನೂನುಬಾಹಿರ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ವಿಜಯಲಕ್ಷ್ಮಿ ಅವರ ಅರ್ಜಿಯನ್ನು ವಜಾಗೊಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular