HomeKarnatakaಹೆಜ್ಜೇನು ದಾಳಿಯಿಂದ ರೈತ ಸಾವು

ಹೆಜ್ಜೇನು ದಾಳಿಯಿಂದ ರೈತ ಸಾವು

ಶಿವಮೊಗ್ಗ: ಹೆಜ್ಜೇನು ದಾಳಿಗೆ ಒಳಗಾಗಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಿಮ್ಮಾನಾಯ್ಕ್(60) ಮೃತಪಟ್ಟವರು ಎಂದು ಹೇಳಲಾಗಿದೆ.

ಶಿವಮೊಗ್ಗ ಹೊರವಲಯದ ಮಲವಗೊಪ್ಪದಲ್ಲಿ ಹೆಜ್ಜೇನು ದಾಳಿಗೆ ಒಳಗಾಗಿದ್ದ ರೈತ ತಿಮ್ಮಾನಾಯ್ಕ್ ಗುರುವಾರ ಮೃತಪಟ್ಟಿದ್ದಾರೆ. ತಮ್ಮ ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಹೆಜ್ಜೇನು ಹುಳಗಳು ಅವರ ಮೇಲೆ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡಿದ್ದ ತಿಮ್ಮನಾಯ್ಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಮೃತಪಟ್ಟಿದ್ದಾರೆ.

ದಸರಾ: ಮಂಗಳವಾರಗಳಂದು ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ: ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:13.10.2026 ಹಾಗೂ 20.10.2026 ರ ಮಂಗಳವಾರವೂ ಸಹ ತೆರೆದಿರುತ್ತದೆ.

ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ‘ವಿಪತ್ತು ನಿರ್ವಹಣಾ ತಜ್ಞರ’ ನೇಮಕ: ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಕೃತಿ ವಿಕೋಪ ವಿಪತ್ತು ನಿರ್ವಹಣಾ ತಜ್ಞರ (ಡಿಸಾಸ್ಟರ್ ಮ್ಯಾನೇಜ್ಮೆಂಟ್ ಎಕ್ಸ್ ಪರ್ಟ್) ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಒಬ್ಬರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೇಮಕಗೊಳ್ಳುವ ಅಭ್ಯರ್ಥಿಗೆ ಮಾಸಿಕ ರೂ. 53,240/- ಗಳ ಗೌರವ ಸಂಭಾವನೆ ನಿಗದಿಪಡಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ವಿವರವಾದ ಅರ್ಜಿಯನ್ನು ಸಲ್ಲಿಸಲು 2026ರ ಅಕ್ಟೋಬರ್ 21 ಕೊನೆಯ ದಿನಾಂಕವಾಗಿರುತ್ತದೆ. ಹುದ್ದೆಯ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.

ದಸರಾ ಉತ್ಸವ – ವಿದ್ಯುತ್ ಸುರಕ್ಷತಾ ಕ್ರಮಗಳು: ಮೆಸ್ಕಾಂ ಮುಂಜಾಗ್ರತಾ ಕ್ರಮ

ಶಿವಮೊಗ್ಗ: ನವರಾತ್ರಿ ಉತ್ಸವ ಸಂದರ್ಭದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಹಾಗೂ ವಿದ್ಯುತ್ ಅವಘಡಗಳಿಗೆ ಆಸ್ಪದವಾಗದಂತೆ ಈ ಕೆಳಕಾಣಿಸಿದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ತಿಳಿಸಿದೆ.

ದಸರಾ / ನವರಾತ್ರಿ ಉತ್ಸವ ಆಚರಣೆ ಸಂದರ್ಭದಲ್ಲಿ ವಿದ್ಯುತ್ ಲೈನ್‌ಗಳಿಂದ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಬಾರದು. ಸಂಬಂಧಪಟ್ಟ ಮೆಸ್ಕಾಂ ಉಪವಿಭಾಗ ಅಥವಾ ಶಾಖಾ ಕಚೇರಿಗೆ ತೆರಳಿ ಅನುಮತಿ ಪಡೆಯಬೇಕು. ವಿಗ್ರಹ ಪ್ರತಿಷ್ಠಾಪನೆ ಮಾಡುವ ಸ್ಥಳದ ಸುತ್ತಮುತ್ತ ಯಾವುದೇ ವಿದ್ಯುತ್ ಮಾರ್ಗಗಳಿಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ವಿದ್ಯುತ್ ಲೈನ್‌ನ ಕೆಳಗೆ ಅಥವಾ ಅಕ್ಕಪಕ್ಕದಲ್ಲಿ ಪೆಂಡಾಲ್ ಅಥವಾ ಶಾಮಿಯಾನ ಹಾಕಬಾರದು. ಸುರಕ್ಷತೆಯ ಅಂತರವನ್ನು ಕಾಯ್ದುಕೊಂಡು ಪೆಂಡಾಲ್, ಶಾಮಿಯಾನ ಹಾಕಬೇಕು.

ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳಿಗೆ ಬ್ಯಾನರ್ ಮತ್ತು ಫಲಕಗಳನ್ನು ಕಟ್ಟಬಾರದು. ವಿಗ್ರಹ ವಿಸರ್ಜನೆ ದಿನವೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಶೋಭಾಯಾತ್ರೆ ವಾಹನಗಳಿಗೆ ವಿದ್ಯುತ್ ತಂತಿಗಳು ತಾಗುವ ರೀತಿಯಲ್ಲಿ ಅತೀ ಎತ್ತರದ ಧ್ವಜ ಅಥವಾ ಇತರ ಅಲಂಕಾರಿಕ ಸಾಧನಗಳನ್ನು ಕಟ್ಟಬಾರದು. ವಿದ್ಯುತ್ ಅವಘಡಗಳನ್ನು ತಪ್ಪಿಸಲು ಹೆಚ್ಚಿನ ಜಾಗ್ರತೆ ವಹಿಸುವುದು ಅತ್ಯಗತ್ಯ.

ವಿಗ್ರಹಗಳ ವಿಸರ್ಜನಾ ಮೆರವಣಿಗೆ ನಡೆಯುವ ಬೀದಿಗಳಲ್ಲಿ ವಿದ್ಯುತ್ ಲೈನ್‌ಗಳ ಅಡಚಣೆ ಇದ್ದಲ್ಲಿ ಸಂಬಂಧಿಸಿದ ಮೆಸ್ಕಾಂ ಕಚೇರಿಯ ಗಮನಕ್ಕೆ ತರಬೇಕು. ಅಂತಹ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ವಿಸರ್ಜನಾ ಮೆರವಣಿಗೆಗೆ ಅನುಕೂಲ ಮಾಡಿಕೊಡಲು ಮೆಸ್ಕಾಂ ಸಿದ್ಧವಿದೆ.

ಯಾವುದೇ ವಿದ್ಯುತ್ ಅವಘಡಗಳು ಸಂಭವಿಸಿದಲ್ಲಿ ತುರ್ತು ಸಹಾಯಕ್ಕಾಗಿ ದೂರವಾಣಿ ಸಂಖ್ಯೆ 8277883388 ಅಥವಾ 0824-2950953, ಅಥವಾ ಮೆಸ್ಕಾಂ ಸಹಾಯವಾಣಿ 1912 ಸಂಪರ್ಕಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular