HomeKarnatakaಸ್ಟಿಂಗ್ ಆಪರೇಷನ್ ವಿವಾದ: ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ಸಾಮಾಜಿಕ ಕಾರ್ಯಕರ್ತ ದಿನೇಶ್...

ಸ್ಟಿಂಗ್ ಆಪರೇಷನ್ ವಿವಾದ: ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ವಿಚಾರ ಇದೀಗ ರಾಜ್ಯಪಾಲರ ಅಂಗಳ ತಲುಪಿದೆ. ಸ್ಟಿಂಗ್ ಆಪರೇಷನ್ ವಿಚಾರ ಸಿಬಿಐ ತನಿಖೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರಿಗೆ ಪತ್ರ ಬರೆದ್ದಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಟ್ರಿಗಳ ಮೇಲೆ ಸ್ಟಿಂಗ್ ಆಪರೇಷನ್ ಆಗಬಹುದು ಎಚ್ಚರದಿಂದ ಇರಿ ಎಂದು ಸೂಚಿಸಿದ್ದರು. ಅಲ್ಲದೇ ನನ್ನ ಮೇಲೆಯೇ ಸ್ಟಿಂಗ್ ಆಪರೇಷನ್ ಮಾಡಿ ನನ್ನನ್ನು ಟ್ರ್ಯಾಪ್‌ ಮಾಡಲು ಯತ್ನ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಬಿಜೆಪಿ-ಜೆಡಿಎಸ್ ನಾಯಕರು ಖಾಸಗಿ ಏಜೆನ್ಸಿ ಮೂಲಕ ಸ್ಟಿಂಗ್ ಆಪರೇಷನ್ ಸಂಚು ರೂಪಿಸಿದ್ದಾರೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಸಿಬಿಐ ತನಿಖೆಗೆ ನೀಡುವಂತೆ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್, ಸ್ಟಿಂಗ್ ಆಪರೇಷನ್ ಮತ್ತು ರಾಜಕೀಯ ವ್ಯಕ್ತಿಗಳ ಖಾಸಗಿ ಸಂಭಾಷಣೆಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ಸಾರ್ವಜನಿಕವಾಗಿ ಪ್ರಸಾರ ಮಾಡುವಂತಹ ಘಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಗಂಭೀರ ಚರ್ಚೆಗಳು ಮತ್ತು ಆತಂಕ ವ್ಯಕ್ತವಾಗುತ್ತಿವೆ.

ಸಿಎಂ ಡಿ.ಕೆ ಶಿವಕುಮಾರ್​ ಸಚಿವ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಮತ್ತು ರಾಜಕೀಯ ನಾಯಕರನ್ನು ಹನಿಟ್ರ್ಯಾಪ್ ಹಾಗೂ ಇತರ ವಿವಾದಗಳಲ್ಲಿ ಸಿಲುಕಿಸಲು ಖಾಸಗಿ ಏಜೆನ್ಸಿಗಳ ಮೂಲಕ ಸ್ಟಿಂಗ್ ಆಪರೇಷನ್ ನಡೆಸುವ ಪ್ರಯತ್ನಗಳ ಕುರಿತು ಎಚ್ಚರಿಕೆ ನೀಡಿರುವುದು ವರದಿಯಾಗಿದೆ. ಈ ಹೇಳಿಕೆಯ ನಿಖರ ವಿವರಗಳನ್ನು ಸಂಬಂಧಿತ ಅಧಿಕೃತ ದಾಖಲೆ ಅಥವಾ ವಿಶ್ವಾಸಾರ್ಹ ಸುದ್ದಿ ವರದಿಯ ಮೂಲಕ ಪರಿಶೀಲಿಸುವುದು ಅಗತ್ಯವಾಗಿದೆ.

ಇಂತಹ ರಾಜಕೀಯ ಹಿನ್ನೆಲೆಯ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸ್ಪಿಂಗ್ ವಿಡಿಯೋಗಳ ಮೂಲ ಮತ್ತು ಅವುಗಳ ಹಿಂದೆ ಇರುವ ವ್ಯಕ್ತಿಗಳ ಪಾತ್ರವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡುವ ಅಗತ್ಯವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸ್ಟಿಂಗ್​ ಆಪರೇಷನ್ ಯೋಜನೆ ರೂಪಿಸಿದವರು, ಖಾಸಗಿ ಏಜೆನ್ಸಿಗಳ ಸಂಭವನೀಯ ಪಾತ್ರ, ಹಣಕಾಸು ಮತ್ತು ತಾಂತ್ರಿಕ ನೆರವು ಒದಗಿಸಿದವರು ಹಾಗೂ ಇದರ ಹಿಂದೆ ಯಾವುದೇ ಪೂರ್ವಯೋಜಿತ ಸಂಚು, ಸಂಘಟಿತ ಜಾಲ ಅಥವಾ ಕಾನೂನುಬಾಹಿರ ಉದ್ದೇಶವಿದೆಯೇ ಎಂಬುದನ್ನು ಪತ್ತೆ ಮಾಡಬೇಕು. ಡಿಜಿಟಲ್​ ಫಾರೆನ್ಸಿಕ್ ಸಾಕ್ಷ್ಯಗಳ ಆಧಾರದ ಮೇಲೆ ಪತ್ತೆಹಚ್ಚುವ ಸಲುವಾಗಿ ಯಾವುದೇ ರಾಜಕೀಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದ ಸ್ವತಂತ್ರ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ಆಗಬೇಕು. ಹೀಗಾಗಿ ಸಿಬಿಐ ಮೂಲಕ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಿ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಸಾಮಾಜಿಕ ಕ್ಜಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular