HomeKarnatakaಸ್ವಂತ ಮನೆ ಕನಸು ಕಂಡವರಿಗೆ ಗುಡ್ ನ್ಯೂಸ್: ವಸತಿ, ನಿವೇಶನ ರಹಿತ ಕುಟುಂಬಗಳಿಂದ ಅರ್ಜಿ ಆಹ್ವಾನ

ಸ್ವಂತ ಮನೆ ಕನಸು ಕಂಡವರಿಗೆ ಗುಡ್ ನ್ಯೂಸ್: ವಸತಿ, ನಿವೇಶನ ರಹಿತ ಕುಟುಂಬಗಳಿಂದ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ಮೂಲಕ ಪ್ರಧಾನಮಂತ್ರಿ ಆವಾಸ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿಯಲ್ಲಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ(ನಿವೇಶನ/ ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ https/pmay.urban.gov.in        ಪೋರ್ಟಲ್‍ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಕೊಡಗು ಜಿಲ್ಲೆಯ ನಗರಸಭೆ, ಮಡಿಕೇರಿ, ಪುರಸಭೆ ಕುಶಾಲನಗರ ಮತ್ತು ವಿರಾಜಪೇಟೆ ಹಾಗೂ ಪಟ್ಟಣ ಪಂಚಾಯಿತಿ ಸೋಮವಾರಪೇಟೆ ಮತ್ತು ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಇದುವರೆಗೂ ಯಾವುದೇ ವಸತಿ ಯೋಜನೆಗಳ ಸೌಲಭ್ಯ ಪಡೆಯದೇ ಇರುವ ಕುಟುಂಬದ ಮುಖ್ಯಸ್ಥ ಮಹಿಳೆಯರು, ಹಿರಿಯ ನಾಗರಿಕರು, ವಿಧುರರು, ವಿಶೇಷ ಚೇತನರು ಹಾಗೂ ಮಾಜಿ ಸೈನಿಕರುಗಳು ಬಿಎಲ್‍ಸಿ ಘಟಕದಡಿ-ನಿವೇಶನ/ ಕಚ್ಚಾ ಮನೆ ಹೊಂದಿರುವ ವಸತಿ ರಹಿತರು ಹೊಸ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನ ಪಡೆಯಲು, ಎಎಚ್‍ಪಿ ಘಟಕದಡಿ-ನಿವೇಶನ ರಹಿತರು, ಐಎಸ್‍ಎಸ್ ಘಟಕದಡಿ ವಸತಿ ನಿರ್ಮಾಣದ ಬ್ಯಾಂಕಿಂಗ್ ಸಾಲದಲ್ಲಿ ಬಡ್ಡಿ ಸಬ್ಸಿಡಿ ಸೌಲಭ್ಯ ಪಡೆಯಲು ಅವಕಾಶವಿದೆ.

ಎಲ್ಲಾ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ (ವಿಶೇಷವಾಗಿ ಸಪಾಯಿ ಕರ್ಮಚಾರಿಗಳು, ಬೀದಿ ಬದಿ ವ್ಯಾಪಾರಿಗಳು, ಪಿ.ಎಂ. ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಕೊಳಚೆ ಪ್ರದೇಶ ನಿವಾಸಿಗಳು ಸೇರಿದಂತೆ) ವಸತಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಹಾಗೂ ಅರ್ಜಿದಾರರು ನಿಗದಿತ ನಮೂನೆಯಲ್ಲಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಗೆ ಅರ್ಜಿದಾರರ ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೋಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕ, ಕುಟುಂಬದವರ ಆಧಾರ್ ಕಾರ್ಡ್ ಹಾಗೂ ನಿವೇಶನ ಅಥವಾ ಕಚ್ಚಾ ಮನೆಯ ದಾಖಲೆಗಳನ್ನು ಸಲ್ಲಿಸಲು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಆಯಾಯ ನಗರ ಸ್ಥಳೀಯ ಸಂಸ್ಥೆಗಳ ವಸತಿ ಶಾಖೆಯನ್ನು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿಎಲ್‍ಟಿಸಿ ಕೋಶವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ್ ರಾಮಣ್ಣ ಅವರು ತಿಳಿಸಿದ್ದಾರೆ.

ಅ.11 ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಮಡಿಕೇರಿ: ಮಡಿಕೇರಿ ದಸರಾ-2026ರ ಅಂಗವಾಗಿ ದಸರಾ ಸಾಂಸ್ಕೃತಿಕ ಸಮಿತಿಯ ವತಿಯಿಂದ ಅಕ್ಟೋಬರ್ 11 ರಿಂದ 21 ರವರೆಗೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯಲಿದೆ.

ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಕಾಫಿ ದಸರಾ, ಕವಿಗೋಷ್ಠಿ, ಮಕ್ಕಳ ದಸರಾ, ಜನಪದ ದಸರಾ, ಯುವ ದಸರಾ ಹಾಗೂ ಮಹಿಳಾ ದಸರಾ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಜನಮನ ಸೆಳೆಯಲಿವೆ.

ಅಕ್ಟೋಬರ್ 11 ರಂದು ಸಂಜೆ 5.30ಕ್ಕೆ ಪಂಪಿನ ಕೆರೆಯಲ್ಲಿ ಕರಗ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಅಕ್ಟೋಬರ್ 12, ರಂದು ಸಂಜೆ 6.30ಕ್ಕೆ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 13 ರಂದು ಬೆಳಗ್ಗೆ ಕಾಫಿ ದಸರಾ ಉದ್ಘಾಟನೆ ನಡೆಯಲಿದ್ದು, ಸಂಜೆ 4 ಗಂಟೆಗೆ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ಅಕ್ಟೋಬರ್ 14 ರಂದು ಬೆಳಗ್ಗೆ 10 ಗಂಟೆಗೆ ಕಾಫಿ ದಸರಾ ಮೇಳ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 15 ರಂದು ಬೆಳಗ್ಗೆ 10 ಗಂಟೆಗೆ ಕವಿಗೋಷ್ಠಿ ಹಾಗೂ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 16 ರಂದು ಬೆಳಗ್ಗೆ 9 ಗಂಟೆಗೆ ಮಕ್ಕಳ ದಸರಾ ಸ್ಪರ್ಧೆಗಳು ಹಾಗೂ ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಅಕ್ಟೋಬರ್ 17 ರಂದು ಬೆಳಗ್ಗೆ 10 ಗಂಟೆಗೆ ಶ್ವಾನ ಪ್ರದರ್ಶನ (ಡಾಗ್ ಶೋ) ಹಾಗೂ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 18 ರಂದು ಬೆಳಗ್ಗೆ 10 ಗಂಟೆಗೆ ಜನಪದ ದಸರಾ ಹಾಗೂ ಸಂಜೆ 6.30ಕ್ಕೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಕ್ಟೋಬರ್ 19 ರಂದು ಬೆಳಗ್ಗೆ 10 ಗಂಟೆಗೆ ಮಹಿಳಾ ದಸರಾ ಹಾಗೂ ಸಂಜೆ 6.30ಕ್ಕೆ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್, 20 ರಂದು ಆಯುಧ ಪೂಜೆಯ ಅಂಗವಾಗಿ ಸಂಜೆ 6 ಗಂಟೆಯಿಂದ ಗಾಂಧಿ ಮೈದಾನದಲ್ಲಿ ರಸಮಂಜರಿ ಕಾರ್ಯಕ್ರಮಗಳು ನಡೆಯಲಿವೆ.

ಅಕ್ಟೋಬರ್, 21 ರಂದು ವಿಜಯ ದಶಮಿಯಂದು ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ದಸರಾ ಮಂಟಪಗಳ ಆಕರ್ಷಕ ಶೋಭಾಯಾತ್ರೆ ಸಾಗಲಿದೆ.

ಅಕ್ಟೋಬರ್, 22 ರಂದು ಬೆಳಗ್ಗೆ 6 ಗಂಟೆಗೆ ಅತಿಥಿಗಳಿಂದ ವಿಜೇತ ದಸರಾ ಮಂಟಪಗಳಿಗೆ ಪ್ರಶಸ್ತಿ ವಿತರಣೆ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular