ಕಲಬುರಗಿ: ಕುಡಿದ ಮತ್ತಿನಲ್ಲಿ ಮಸೀದಿ ಪ್ರವೇಶಿಸಿದ್ದ ಕಲಬುರಗಿ ಜಿಲ್ಲೆ ಮಹಾಗಾಂವ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಹಣಮಂತ ರೆಡ್ಡಿ ಅವರನ್ನು ಎಸ್ಪಿ ಅಡ್ಡೂರು ಶ್ರೀನಿವಾಸಲು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆ ಕಮಲಾಪುರ ಹರಸೂರ ಗ್ರಾಮದಲ್ಲಿ ಗುರುವಾರ ಜಗಳ ನಡೆದಿತ್ತು. ಗಲಾಟೆ ಮಾಡಿಕೊಂಡವರ ಮನೆಯ ರಕ್ಷಣೆಗಾಗಿ ಹೋದ ಪೊಲೀಸ್ ಸಿಬ್ಬಂದಿ ಹಣಮಂತರೆಡ್ಡಿ ಸಂಜೆ ಮದ್ಯಪಾನ ಮಾಡಿ ಮಸೀದಿ ಒಳಗೆ ಹೋಗಿದ್ದಾರೆ.
ಸ್ಥಳೀಯರು ಆತನೊಂದಿಗೆ ಗಲಾಟೆ ಮಾಡಿ ವಿಡಿಯೋ ಮಾಡಿ ಮಹಾಗಾಂವ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಮಾಹಿತಿ ಪಡೆದ ಎಸ್ಪಿ ಹನುಮಂತರೆಡ್ಡಿಯನ್ನು ಅಮಾನತು ಮಾಡಿದ್ದಾರೆ. ಮಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲ ಮನ್ನಾ, ವಿಮೆ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ
ಗಂಗಾವತಿ: ಸಾಲದ ಹೊರೆ ತೀರಿಸಲು ಹಾಗೂ ವಿಮೆ ಹಣ ಪಡೆಯುವ ಉದ್ದೇಶದಿಂದ ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ನಡೆದಿರುವ ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಪತಿ ಮೃತಪಟ್ಟರೆ ಸಾಲ ಮನ್ನಾ ಆಗಬಹುದು ಮತ್ತು ವಿಮೆ ಹಣ ಕೈ ಸೇರಬಹುದು ಎಂಬ ಉದ್ದೇಶದಿಂದ ಪತ್ನಿ ಈ ಕೃತ್ಯ ಎಸಗಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಪತ್ನಿ ಸೇರಿದಂತೆ ಸಂಬಂಧಪಟ್ಟವರ ವಿಚಾರಣೆ ನಡೆಸಲಾಗಿದ್ದು, ಕೊಲೆಯ ಹಿಂದಿನ ನಿಜವಾದ ಕಾರಣ ಹಾಗೂ ಇತರ ವಿವರಗಳು ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುಷ್ಟೂರು ಕ್ಯಾಂಪ್ ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಘವೇಂದ್ರ(45) ಕೊಲೆಯಾದ ವ್ಯಕ್ತಿ. ಪತ್ನಿ ಉಮಾ, ಸಂಬಂಧಿ ಶಿವಾಜಿ ಮತ್ತು ಕಲೀಲ್ ಸಾಬ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ರಾಘವೇಂದ್ರ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಈತನನ್ನು ಕೊಲೆ ಮಾಡಿದರೆ ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಪಡೆದ ಸಾಲ ಮನ್ನಾ ಆಗುತ್ತದೆ. ವಿಮೆಯಿಂದ ಹಣ ಬರುತ್ತದೆ ಎನ್ನುವ ಕಾರಣಕ್ಕೆ ಉಮಾ ಕೊಲೆಗೆ ಸಂಚು ರೂಪಿಸಿದ್ದಾಳೆ. ಸೆಪ್ಟೆಂಬರ್ 7ರಂದು ಗಂಗಾವತಿಗೆ ಆಗಮಿಸಿದ್ದ ಉಮಾ ವಿಮೆಯ ಹಣ ಮತ್ತು ಸಾಲ ಮನ್ನಾ ಆಗುವ ಬಗ್ಗೆ ಮಾಹಿತಿ ಕಲೆ ಹಾಕಿದ್ದಾಳೆ. ಅದೇ ದಿನ ರಾತ್ರಿ ಮುಸ್ಟೂರು ಕ್ಯಾಂಪ್ ನಿಂದ ಹೆಬ್ಬಾಳಕ್ಕೆ ಹೋಗುವ ಮಾರ್ಗದಲ್ಲಿ ಕಟ್ಟಿಗೆಯಿಂದ ಹೊಡೆದು ರಾಘವೇಂದ್ರನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ: ಹರಿಹರ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ (SC/ST) ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಈಗಾಗಲೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ನವೀಕರಣಗೊಂಡಿರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇನ್ನುಳಿದ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹರಿಹರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹರಿಹರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

