HomeKarnatakaಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಶಿಫ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ: ಕಾರಣವೇನು?

ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಶಿಫ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ: ಕಾರಣವೇನು?

ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಆದೇಶಕ್ಕೆ ತಡೆ ನೀಡಲಾಗಿದೆ.

ಬೆಳಗಾವಿಯ ಹಿಂಡಲಗಾ ಜೈಲಿಗೆ ಅಪರಾಧಿ ಪ್ರಜ್ವಲ್ ರೇವಣ್ಣನನ್ನ ಶಿಫ್ಟ್ ಮಾಡಲು ನೀಡಲಾಗಿದ್ದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಹೀಗಾಗಿ ಇನ್ನೂ ಪ್ರಜ್ವಲ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರಾಗೃಹ ವಿಭಾಗದ ನಾರ್ತ್ ರೇಂಜ್‌ನ ಡಿಐಜಿ ಆಗಿದ್ದ ಸೋಮಶೇಖರ್ ಸದ್ಯ ಜೈಲಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನನ್ನು ಶಿಫ್ಟ್ ಮಾಡಿದರೆ ಭದ್ರತಾ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಭದ್ರತೆಯ ದೃಷ್ಟಿಯಿಂದ ಸದ್ಯ ಪ್ರಜ್ವಲ್ ರೇವಣ್ಣನನ್ನ ಶಿಫ್ಟ್ ವಿಚಾರವನ್ನ ತಡೆ ಹಿಡಿಯಲಾಗಿದೆ.

ಪ್ರಜ್ವಲ್ ರೇವಣ್ಣನನ್ನ ಶಿಫ್ಟ್ ಮಾಡುವ ಬಗ್ಗೆ ಶನಿವಾರ (ಅ.10) ನಿರ್ಧಾರ ಸಾಧ್ಯತೆ ಇದೆ. ಇತ್ತ ಶಿಫ್ಟ್ ಆದೇಶ ಪ್ರಶ್ನಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಆದೇಶ ಮುಂದುವರಿದರೆ ಸೋಮವಾರ ಪ್ರಜ್ವಲ್ ರೇವಣ್ಣ ಪರ ವಕೀಲರು ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಇಂದು ಬೆಳಗ್ಗೆ ಪ್ರಜ್ವಲ್ ರೇವಣ್ಣ ಸೇರಿದಂತೆ 9 ಮಂದಿಯನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಸಿಟಿ ಪೊಲೀಸರು ಸೂಚಿಸಿದ್ದರು.

ಪ್ರಜ್ವಲ್ ರೇವಣ್ಣ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್

ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಬೆಳಗಾವಿ ಹಿಂದಲಗಾ ಜೈಲಿಗೆ ಶಿಫ್ಟ್ ಮಾಡಲು ಸಿದ್ಧತೆಗಳು ನಡೆದಿವೆ.

ಕೆಲ ದಿನಗಳ ಹಿಂದೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್, ಸಿಮ್ ಕಾರ್ಡ್, ಪೆನ್ ಡ್ರೈವ್, ನೋಟ್ ಬುಕ್ ಸೇರಿದಂತೆ ನಿಷೇಧಿತ ವಸ್ತಿಗಳು ಪತ್ತೆಯಾಗಿದ್ದವು. ಅಲ್ಲದೇ ಪ್ರಜ್ವಲ್ ರೇವಣ್ಣ ಜೈಲಿನ ಸೆಲ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಪ್ರಜ್ವಲ್ ರೇವಣ್ಣನನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಕಾರಾಗೃಹ ಮತ್ತು ಸುಧಾರಣೆ ಸೇವೆ ಇಲಾಖೆ ಡಿಜಿಪಿ ಅಲೋಕ್​ಕುಮಾರ್ ಮಹತ್ವದ ಆದೇಶ ಮಾಡಿದ್ದಾರೆ.

ಪ್ರಜ್ವಲ್ ರೇವಣನ್ನು ಶಿಫ್ಟ್​ ಸಂಬಂಧ ಬೆಳಗಾವಿಯ ಹಿಂಡಲಗಾ ಜೈಲಿಗೆ ಅಧಿಕೃತ ಇ-ಮೇಲ್ ಮಾಡಲಾಗಿದೆ. ಜೈಲು ಮುಖ್ಯ ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದ್ದು, ಆದಷ್ಟು ಬೇಗ ಹಿಂಡಲಗಾ ಜೈಲಿಗೆ ಪ್ರಜ್ವಲ್​​ ಶಿಫ್ಟ್​ ಮಾಡಲಾಗುತ್ತೆ. ಯಾವಾಗ ಬೇಕಾದ್ರೂ ಎಸ್ಕಾರ್ಟ್ ಮೂಲಕ ಶಿಫ್ಟ್​ ಮಾಡಬಹುದು. ಹೀಗಾಗಿ ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ

2026ರ ಆಗಸ್ಟ್​​​ 11ರಂದು ಪರಪ್ಪನ ಅಗ್ರಹಾರ ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿತ್ತು. ಈ ವೇಳೆ ಪ್ರಜ್ವಲ್​​ ರೇವಣ್ಣ ಇದ್ದ ಸೆಲ್​​ನಲ್ಲಿ ಮೊಬೈಲ್​​ ಪತ್ತೆಯಾಗಿತ್ತು. ಜೊತೆಗೆ ಚಾರ್ಜರ್, ನೀಲಿ ಬಣ್ಣದ ನೋಟ್‌ಬುಕ್ ಹಾಗೂ ಪೆನ್ ಡ್ರೈವ್​​ನ ಕೂಡ ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್‌ನಲ್ಲಿ ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ , ನೆಟ್‌ಫ್ಲಿಕ್ಸ್ , ಪ್ರೈಮ್ ವಿಡಿಯೋ ಆ್ಯಪ್‌ಗಳು ಇದ್ದು, ಪಾಸ್‌ವರ್ಡ್‌ನಿಂದ ರಕ್ಷಿಸಲ್ಪಟ್ಟಿದ್ದವು. ವಿಧಿವಿಜ್ಞಾನ ಪರೀಕ್ಷೆಯಲ್ಲಿ (FSL) ಮೊಬೈಲ್‌ನಲ್ಲಿ ಕೆಲ ವಿಡಿಯೋ ಫೈಲ್‌ಗಳು ಕೂಡ ಪತ್ತೆಯಾಗಿವೆ ಎನ್ನಲಾಗಿತ್ತು.

ಅಲ್ಲದೇ ಪ್ರಜ್ವಲ್​​ ರೇವಣ್ಣ ಜೈಲಿನಲ್ಲಿ ಮೊಬೈಲ್​​ನಲ್ಲಿ ಮಾತನಾಡುತ್ತಿದ್ದ ವಿಡಿಯೋ, ಫೋಟೋಗಳು ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳ ನಿರ್ಲಕ್ಷ್ಯ ಇರೋದು ಸಾಬೀತು ಹಿನ್ನೆಲೆ ತನಿಖೆಗಾಗಿ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದ ತಂಡ ರಚನೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ಕೂಡ ನಡೆದಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular