HomeIndiaಸಿಜೆಪಿ ಪ್ರತಿಭಟನೆ: ಗುರುಗ್ರಾಮದ ಮನೆಯಲ್ಲಿಯೇ ಯೂಟ್ಯೂಬರ್ ಧ್ರುವ್ ರಾಠಿಯನ್ನು ವಶಕ್ಕೆ ಪಡೆದ ಪೊಲೀಸರು.

ಸಿಜೆಪಿ ಪ್ರತಿಭಟನೆ: ಗುರುಗ್ರಾಮದ ಮನೆಯಲ್ಲಿಯೇ ಯೂಟ್ಯೂಬರ್ ಧ್ರುವ್ ರಾಠಿಯನ್ನು ವಶಕ್ಕೆ ಪಡೆದ ಪೊಲೀಸರು.

ನವದೆಹಲಿ: ಮತದಾರರ ಪಟ್ಟಿ ವಿಸೇಷ ಪರಿಷ್ಕರಣೆ (ಎಸ್ಐಆರ್) ಅಕ್ರಮ ಖಂಡಿಸಿ ಹಾಗೂ ಮುಖ್ಯ ಚುನವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನಾ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಸಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಂತರ್ ಮಂತರ್ ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಗೆ ಆಗಮಿಸಿದ್ದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಸೇರಿ ಪ್ರಮುಖರನ್ನು ದೆಹಲಿ ಪೊಲೀಸರು ಇಂದಿರಾಗಾಂಧಿ ಅಂತರಾಷ್ಟ್ರ‍ೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಇದಕ್ಕೂ ಮುನ್ನ ಸಿಜೆಪಿ ಪ್ರತಿಭಟನೆಗೆ ತೆರಳು ಸಿದ್ಧರಾಗಿದ್ದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಯವರನ್ನು ಗುರುಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧ್ರುವ್ ರಾಠಿ ದೆಹಲಿಗೆ ತೆರಳಲು ಸಿದ್ಧರಾಗುತ್ತಿದ್ದ ವೇಳೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಧ್ರುವ್ ಜೊತೆ ಇದ್ದ ಇತರ ಸಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತ ಮುಂಬೈನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್, ಅಶುತೋಷ್ ರಾಂಕಾ ಅವರನ್ನು ದೆಹಲಿ ಮಹಿಳಾಅ ಪೊಲೀಸರು ವಿಮಾಅನದ ಒಳಗೆ ಹೋಗಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸಿಜೆಪಿ ನಾಯಕರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಸಿಜೆಪಿ ಪ್ರತಿಭಟನೆ ಕರೆ ಬೆನ್ನಲ್ಲೇ ಮಧ್ಯರಾತ್ರಿ ದೆಹಲಿಯಲ್ಲಿ 1000ಕ್ಕೂ ಹೆಚ್ಚು ಜನ ಪೊಲೀಸ್ ವಶಕ್ಕೆ

ನವದೆಹಲಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್ಎ) ಇಂದು ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲದೇ ರಾತ್ರೋರಾತ್ರಿ 1,000ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.

ಮಧ್ಯರಾತ್ರಿ 12:30ರ ಸುಮಾರಿಗೆ ಕಾರ್ಯಾಚರಣೆ ಕೈಗೊಂಡ ದೆಹಲಿ ಪೊಲೀಸರು ಸಾವಿರಾರು ಜನರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯಲಾದವರ ಪೈಕಿ ಸುಮಾರು 250 ಮಂದಿ ದೆಹಲಿಯ ಆಗ್ನೇಯ (ಸೌತ್ ಈಸ್ಟ್) ಜಿಲ್ಲೆಗೆ ಸೇರಿದವರಾಗಿದ್ದಾರೆ. ವಿಶೇಷವಾಗಿ 2020ರ ಸಿಎಎ ವಿರೋಧಿ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದ ಶಾಹೀನ್ ಬಾಗ್ ಸುತ್ತಮುತ್ತಲಿನ ಪ್ರದೇಶಗಳಿಂದ ಈ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನುಳಿದಂತೆ ಉತ್ತರ ಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಶಹದಾರಾ ಹಾಗೂ ಪೂರ್ವ ದೆಹಲಿ ಜಿಲ್ಲೆಗಳಿಂದ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮುಂಜಾಗ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಪ್ರತಿಭಟನಾಕಾರರನ್ನು ಒಗ್ಗೂಡಿಸಿ ಕಾನೂನುಬಾಹಿರ ಪರಿಸ್ಥಿತಿ ಸೃಷ್ಟಿಸಿದ ಇತಿಹಾಸ ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular