HomeKarnatakaಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ 5 ಹೊಸ ರೂಟ್‌ಗಳಿಗೆ...

ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ 5 ಹೊಸ ರೂಟ್‌ಗಳಿಗೆ ವಿಮಾನ ಸೇವೆ

ಬೆಂಗಳೂರು: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಯಾನ ಸಂಸ್ಥೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 5 ಹೊಸ ಮಾರ್ಗಗಳಲ್ಲಿ ವಿಮಾನ ಸೇವೆ ವಿಸ್ತರಿಸಲು ಮುಂದಾಗಿದೆ.

ಪ್ರಯಾಣಿಕರ ಬೇಡಿಕೆ ಮತ್ತು ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ ಈ ಹೊಸ ವಿಮಾನಗಳನ್ನು ಪರಿಚಯಿಸಲಾಗುತ್ತಿದ್ದು, ಇದು ಬೆಂಗಳೂರಿನಿಂದ ದೇಶ ಹಾಗೂ ವಿದೇಶಗಳಿಗೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ವೇಳಾಪಟ್ಟಿಯ ಪ್ರಕಾರ, ಬೆಂಗಳೂರಿನಿಂದ ನೇಪಾಳದ ರಾಜಧಾನಿ ಕಠ್ಮಂಡು ನಗರಕ್ಕೆ ನೇರ ಅಂತರರಾಷ್ಟ್ರೀಯ ವಿಮಾನಯಾನ ಸೇವೆ ಆರಂಭವಾಗಲಿದೆ. ಇದರೊಂದಿಗೆ ದೇಶೀಯ ವಿಮಾನಯಾನ ಜಾಲವನ್ನು ಬಲಪಡಿಸಲು ಬೆಂಗಳೂರಿನಿಂದ ಕೊಯಮತ್ತೂರು, ಗೋವಾ (ಮೋಪಾ), ಜೋಧ್‌ಪುರ್ ಹಾಗೂ ಮಧುರೈ ನಗರಗಳಿಗೆ ಹೊಸದಾಗಿ ದೈನಂದಿನ ವಿಮಾನ ಸೇವೆಗಳನ್ನು ಆರಂಭಿಸಲಾಗುತ್ತಿದೆ. ಇದು ದಕ್ಷಿಣ ಭಾರತದ ಪ್ರಮುಖ ನಗರಗಳ ನಡುವಿನ ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಹೆಚ್ಚು ಸಹಕಾರಿಯಾಗಲಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಈ ಹೊಸ ಮಾರ್ಗಗಳ ಸೇರ್ಪದೆಯೊಂದಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ತನ್ನ ದೈನಂದಿನ ಒಟ್ಟು ವಿಮಾನಗಳ ಹಾರಾಟದ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಿದೆ. ಮುಂಬರುವ ಚಳಿಗಾಲದಲ್ಲಿ ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಹಾಗೂ ತಡೆರಹಿತ ವಿಮಾನಯಾನ ಸೌಲಭ್ಯ ಒದಗಿಸುವುದು ಸಂಸ್ಥೆಯ ಮುಖ್ಯ ಗುರಿಯಾಗಿದೆ.

ಬೆಂಗಳೂರು ಕೇಂದ್ರಸ್ಥಾನದಿಂದ ಕಾರ್ಯನಿರ್ವಹಿಸುತ್ತಿರುವ ವಿಮಾನಯಾನ ಸಂಪರ್ಕಗಳು ವೃದ್ಧಿಸುತ್ತಿರುವುದರಿಂದ, ಐಟಿ ರಾಜಧಾನಿಯ ಜನರಿಗೆ ಹಾಗೂ ಉದ್ಯಮಿಗಳಿಗೆ ವಿಶ್ವದ ವಿವಿಧ ಪ್ರಮುಖ ತಾಣಗಳಿಗೆ ಪ್ರಯಾಣಿಸುವುದು ಇನ್ನಷ್ಟು ಸುಲಭವಾಗಲಿದೆ.

ಬೆಂಗಳೂರಿನಲ್ಲಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿ: ಸ್ಥಳೀಯ ನಿವಾಸಿಗಳಿಗೆ ಬಿಗ್ ರಿಲೀಫ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಾರಿಗೆ ತರುತ್ತಿರುವ ಸ್ಮಾಅರ್ಟ್ ಪಾರ್ಕಿಂಗ್ ಯೋಜನೆಯಿಂದ ಸ್ಥಳೀಯ ನಿವಾಸಿಗಳಿಗೆ ಬಿಗ್ ರಿಲೀಫ್ ಸಿಗಲಿದೆ. ಸ್ಥಳೀಯ ನಿವಾಸಿಗಳು ಈ ಯೋಜನೆಯಡಿ ತಮ್ಮ ಮನೆ ಬಳಿಯೇ ವಾಅಹನಗಳನ್ನು ನಿಲ್ಲಿಸಬಹುದಾಗಿದೆ.

ನಗರದ ಪ್ರಮುಖ ವಾಣಿಜ್ಯ ಮತ್ತು ವಸತಿ ಪ್ರದೇಶವಾದ ಜಯನಗರದಲ್ಲಿ ಶೀಘ್ರದಲ್ಲೇ ಅತ್ಯಾಧುನಿಕ ‘ಸ್ಮಾರ್ಟ್ ಪಾರ್ಕಿಂಗ್’ ಜಾರಿಗೆ ಬರಲಿದ್ದು, ಈ ವ್ಯವಸ್ಥೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಪ್ರಮುಖ ವಿನಾಯಿತಿ ನೀಡಲಾಗಿದೆ. ಜಯನಗರದ ನಿವಾಸಿಗಳು ತಮ್ಮ ಮನೆಗಳ ಮುಂಭಾಗದಲ್ಲಿ ನಿಲ್ಲಿಸುವ ವಾಹನಗಳಿಗೆ ಯಾವುದೇ ಪಾರ್ಕಿಂಗ್ ಶುಲ್ಕ ಪಾವತಿಸಬೇಕಾಗಿಲ್ಲ ಎಂದು ಬೆಂಗಳೂರು ದಕ್ಷಿಣ ನಗರ ನಿಗಮದ ಆಯುಕ್ತ ಕೆ.ಎನ್. ರಮೇಶ್ ಸ್ಪಷ್ಟಪಡಿಸಿದ್ದಾರೆ.

ಹೊಸ ವ್ಯವಸ್ಥೆಯ ಪ್ರಕಾರ, ಪಾರ್ಕಿಂಗ್ ಶುಲ್ಕವು ಕೇವಲ ಪ್ರಮುಖ ವಾಣಿಜ್ಯ ರಸ್ತೆಗಳಿಗೆ ಮಾತ್ರ ಅನ್ವಯಿಸಲಿದ್ದು, ಅಲ್ಲಿಯೂ ಕೂಡ ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಶುಲ್ಕ ವಸೂಲಿ ಮಾಡಲಾಗುತ್ತದೆ. ಜಯನಗರ ವ್ಯಾಪಾರಿಗಳ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ವ್ಯಕ್ತಪಡಿಸಿದ ಆತಂಕ ಹಾಗೂ ಶುಲ್ಕ ಕಡಿತದ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸುವುದಾಗಿ ಆಯುಕ್ತರು ತಿಳಿಸಿದ್ದಾರೆ.

ವಾಣಿಜ್ಯ ರಸ್ತೆಗಳಲ್ಲಿ ಅನಧಿಕೃತ ನಿಲುಗಡೆಗೆ ಕಡಿವಾಣ ಹಾಕಲು ಮತ್ತು ವಾಹನ ಸವಾರರಿಗೆ ಅನುಕೂಲ ಕಲ್ಪಿಸಲು ಈ ತಂತ್ರಜ್ಞಾನ ಆಧಾರಿತ ಯೋಜನೆ ಹಮ್ಮಿಕೊಳ್ಳಲಾಗಿದೆ.

ಸ್ಮಾರ್ಟ್ ಪಾರ್ಕಿಂಗ್ ಯೋಜನೆಯಡಿ ಆಯ್ದ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು, ಮೊಬೈಲ್ ಆಪ್ ಮೂಲಕ ನೈಜ ಸಮಯದ ಪಾರ್ಕಿಂಗ್ ಲಭ್ಯತೆ ಮಾಹಿತಿ ಹಾಗೂ ಡಿಜಿಟಲ್ ಸೂಚನಾ ಫಲಕಗಳನ್ನು ಅಳವಡಿಸಲಾಗುತ್ತದೆ. ಇದು ವಾಹನ ಸವಾರರಿಗೆ ಖಾಲಿ ಇರುವ ಪಾರ್ಕಿಂಗ್ ಜಾಗವನ್ನು ಸುಲಭವಾಗಿ ಹುಡುಕಲು ಸಹಾಯ ಮಾಡಲಿದೆ. ಒಟ್ಟಿನಲ್ಲಿ, ವಾಣಿಜ್ಯ ಮಳಿಗೆಗಳ ರಸ್ತೆಗಳಲ್ಲಿ ಶುಲ್ಕ ಅನ್ವಯಿಸಿದರೂ, ಮನೆಗಳ ಮುಂದೆ ವಾಹನ ನಿಲ್ಲಿಸುವ ಸ್ಥಳೀಯ ನಿವಾಸಿಗಳಿಗೆ ಇದು ನಿಟ್ಟುಸಿರು ಬಿಡುವಂತಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular