HomeLatest Newsವೆಸ್ಟ್ ಇಂಡೀಸ್ ವಿರುದ್ಧದ ಸೋಲು: ಯಾರನ್ನೂ ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದ ಗಂಭೀರ್

ವೆಸ್ಟ್ ಇಂಡೀಸ್ ವಿರುದ್ಧದ ಸೋಲು: ಯಾರನ್ನೂ ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದ ಗಂಭೀರ್

ಭಾರತದ ವಿರುದ್ಧದ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಭರ್ಜರಿ ಜಯ ಸಾಧಿಸಿದ ಬಳಿಕ ಹೆಚ್ಷಿನ ರನ್ ಕಲೆಹಾಕಿದರೂ ತಂಡ ಸೋಲು ಅನುಭವಿಸಲು ಕಾರಣವೇನು ಎಂಬ ಬಗ್ಗೆ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಂಚಿಯಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 249 ರನ್ಗಳ ದೊಡ್ಡ ಮೊತ್ತವನ್ನು ಕಲೆಹಾಕಿತು. ಆದರೂ ಎದುರಾಳಿ ತಂಡವು ಅತ್ಯಂತ ಸುಲಭವಾಗಿ ಗುರಿಯನ್ನು ತಲುಪಿತು. ಈ ಸೋಲಿನ ಬಳಿಕ ಮಾತನಾಡಿದ ಗಂಭೀರ್ ಯಾವುದೇ ಆಟಗಾರರ ಮೇಲೆ ಅಥವಾ ವೈಯಕ್ತಿಕ ತಪ್ಪುಗಳ ಮೇಲೆ ಬೊಟ್ಟು ಮಾಡಲು ನಿರಾಕರಿಸಿದ್ದಾರೆ.

ಪಂದ್ಯದ ನಿರ್ಣಾಯಕ ಹಂತದಲ್ಲಿ ವಿಂಡೀಸ್ ಬೌಲರ್ ರೋಸ್ಟನ್ ಚೇಸ್ ಅತ್ಯುತ್ತಮ ಪ್ರದರ್ಶನ ನೀಡಿದರು. ಅವರ ನಿಖರ ದಾಳಿಯು ಪಂದ್ಯದ ಗತಿಯನ್ನೇ ಬದಲಾಯಿಸಿತು ಎಂದು ಗಂಭೀರ್ ಮುಕ್ತಕಂಠದಿಂದ ಶ್ಲಾಘಿಸಿದರು. ಭಾರತದ ಆರಂಭಿಕ ಬ್ಯಾಟರ್ಗಳಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಹಾಗೂ ಶಿವಂ ದುಬೆ ಅವರನ್ನು ಕಡಿಮೆ ಮೊತ್ತಕ್ಕೆ ಔಟ್ ಮಾಡುವ ಮೂಲಕ ಚೇಸ್ ಪಂದ್ಯದ ಮೇಲಿನ ಹಿಡಿತ ಬಿಗಿಗೊಳಿಸಿದರು. ಆದಾಗ್ಯೂ ಸಂಜು ಸ್ಯಾಮ್ಸನ್ ಅವರ ಅರ್ಧಶತಕ ಹಾಗೂ ಶ್ರೇಯಸ್ ಅಯ್ಯರ್ ಮತ್ತು ತಿಲಕ್ ವರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಬೃಹತ್ ಮೊತ್ತ ತಲುಪಲು ಸಾಧ್ಯವಾಯಿತು.

ವಿಂಡೀಸ್ ಇನ್ನಿಂಗ್ಸ್ ವೇಳೆ ನಿರ್ಣಾಯಕ ಹಂತದಲ್ಲಿ ಕ್ಯಾಚ್ ಕೈಚೆಲ್ಲಿದ ಪ್ರಸಂಗ ಹಾಗೂ ಮೈದಾನದ ಪರಿಸ್ಥಿತಿಯ ಬಗ್ಗೆಯೂ ಗಂಭೀರ್ ಮಾತನಾಡಿದರು. ಮೈದಾನದಲ್ಲಿ ಕ್ಯಾಚ್ಗಳು ಕೈಚೆಲ್ಲುವುದು ಕ್ರೀಡೆಯಲ್ಲಿ ಸಹಜ. ಉದ್ದೇಶಪೂರ್ವಕವಾಗಿ ಯಾರು ಕೂಡ ತಪ್ಪು ಮಾಡುವುದಿಲ್ಲ. ಹಾಗಾಗಿ ಈ ಸೋಲಿಗೆ ಯಾರೊಬ್ಬರನ್ನೂ ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. 250 ರನ್ಗಳಂತಹ ದೊಡ್ಡ ಮೊತ್ತವನ್ನು ರಕ್ಷಿಸಿಕೊಳ್ಳುವಲ್ಲಿ ಎಲ್ಲಿ ಎಡವಿದ್ದೇವೆ ಎಂಬುದನ್ನು ನಾವು ಗಂಭೀರವಾಗಿ ಅವಲೋಕಿಸಿ ಮುಂದಿನ ಪಂದ್ಯಗಳಿಗೆ ಸಜ್ಜಾಗಬೇಕಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular