HomeIndiaBREAKING: ಇಂಡಿಗೋ ವಿಮಾನದಲ್ಲಿ ಬೆಂಕಿ ಅವಘಡ: ತಪ್ಪಿದ ಮತ್ತೊಂದು ಭಾರಿ ಅನಾಹುತ

BREAKING: ಇಂಡಿಗೋ ವಿಮಾನದಲ್ಲಿ ಬೆಂಕಿ ಅವಘಡ: ತಪ್ಪಿದ ಮತ್ತೊಂದು ಭಾರಿ ಅನಾಹುತ

ಚೆನ್ನೈ: ಇಂಡಿಗೋ ವಿಮಾನವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ದೆಹಲಿಯಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿದ್ದ ಪವರ್ ಬ್ಯಾಂಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿ ಅವಘಡ ಕಂಡು ಪ್ರಯಾಣಿಕರು ಕಂಗಾಲಾಗಿದ್ದಾರೆ. ಬೆಂಕಿ ನಂದಿಸಲು ಯತ್ನಿಸಿದ್ದಾರೆ. ತಕ್ಷಣ ವಿಷಯ ತಿಳಿದ ಪೈಲಟ್ ವಿಮಾನವನ್ನು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ ನಡೆಸಲಾಗಿದೆ. ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿದ್ದ ಪವರ್ ಬ್ಯಾಂಕ್ ಸ್ಫೋಟಗೊಂಡಿದ್ದೇ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆಯಲ್ಲಿ ಮಲಗಿದ್ದ ನನ್ನನ್ನು 20 ಜನ ಅಪರಿಚಿತರು ಬಂದು ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದರು: ಧ್ರುವ ರಾಠಿ ಗಂಭೀರ ಆರೋಪ

ನವದೆಹಲಿ: ಎಸ್ಐಅರ್ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್ ಮಂತರರ್ ಗೆ ತೆರಳಲು ಸಿದ್ಧರಾಗಿದ್ದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಯನ್ನು ಶನಿವಾರ ಪೊಲೀಸರು ಗುರುಗ್ರಾಮದ ಅವರ ಮನೆಯಲ್ಲಿಯೇ ವಶಕ್ಕೆ ಪಡೆದಿದ್ದರು. ಒಂದು ದಿನದ ಬಳಿಕ ಇಂದು ಮುಂಜಾನೆ ಅವರನ್ನು ಬಿಡುಗಡೆ ಮಾಡಿದ್ದಾರೆ.

ಬಿಡುಗಡೆ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡಿರುವ ಧ್ರುವ ರಾಠಿ, ಅದು ಬಂಧನ ಅಥವಾ ವಶವಲ್ಲ, ನನ್ನನ್ನು ಕಿಡ್ನ್ಯಾಅಪ್ ಮಾಡಿದ್ದರು ಎಂದು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಭಾನುವಾರ ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಬಿಡುಗಡೆಯಾದ ನಂತರ, ರಾಠಿ ಬಂಧನದ ಕುರಿತು ವಿಡಿಯೋ ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ಧ್ರುವ್ , ನಾನು ಗುರುಗ್ರಾಮ್‌ ನಿವಾಸದಲ್ಲಿ ಇದ್ದಾಗ ನನ್ನನ್ನು ಪೊಲೀಸರು ಏಕಾಏಕಿ ಅರೆಸ್ಟ್‌ ಮಾಡಿದ್ದಾರೆ. ನನ್ನನ್ನು ಕಾನೂನುಬದ್ಧವಾಗಿ ಬಂಧಿಸಲಾಗಿಲ್ಲ, ನಾನಿನ್ನು ಆಗ ಮಲಗಿದ್ದೆ, ಅಪರಿಚಿತರು ಬಂದು ನನ್ನನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ.

ಶನಿವಾರ ಬೆಳಿಗ್ಗೆ 7:00 ಗಂಟೆಗೆ ಸಾಮಾನ್ಯ ಉಡುಪಿನಲ್ಲಿದ್ದ ಸುಮಾರು 20 ಜನ ನನ್ನ ಮಲಗುವ ಕೋಣೆಗೆ ಪ್ರವೇಶಿಸಿದರು. ನನ್ನನ್ನು ಕರೆದುಕೊಂಡು ಹೋದರು. ನನನ್ನು ಹಲವು ಪೊಲೀಸ್ ಠಾಣೆಗಳಿಗೆ ಸ್ಥಳಾಂತರಿಸಲಾಯಿತು. ಸುಮಾರು 22 ರಿಂದ 23 ಗಂಟೆಗಳ ಕಾಲ ನನ್ನ ಕಾನೂನು ಸಲಹೆಗಾರರು ಅಥವಾ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಅವಕಾಶ ಕೊಡಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ನನ್ನ ಮನೆಯಿಂದ ಹೊರಗೆ ಕರೆದೊಯ್ಯುವಾಗ ಸಣ್ಣಪುಟ್ಟ ಗಾಯಗಳು ಕೂಡ ಅಗಿವೆ. ವೀಡಿಯೊದಲ್ಲಿ, ತನ್ನ ಪಾಸ್‌ಪೋರ್ಟ್‌ ತೋರಿಸಿ ಈಗಲೂ ಕೂಡ ನಾನು ಭಾರತೀಯ ಪ್ರಜೆ. ಭಾರತೀಯ ಪ್ರಜೆಯಾಗಿ, ಶಾಂತಿಯುತ ಪ್ರತಿಭಟನೆಗಳು ಮತ್ತು ಪ್ರಜಾಪ್ರಭುತ್ವ ಚಳುವಳಿಗಳಲ್ಲಿ ಭಾಗವಹಿಸುವ ಮೂಲಭೂತ ಹಕ್ಕು ನನಗೂ ಇದೆ ಎಂದು ಹೇಳಿದ್ದಾರೆ.

ರಾಠಿ ಅವರನ್ನು ಬಿಡುಗಡೆ ಮಾಡಲಾಗಿದ್ದರೂ, ಅವರು ನಿಷೇಧಾಜ್ಞೆಗಳನ್ನು ಉಲ್ಲಂಘಿಸಲು ಅಥವಾ ಜಂತರ್ ಮಂತರ್ ಪ್ರತಿಭಟನಾ ಸ್ಥಳಕ್ಕೆ ಮತ್ತೆ ಪ್ರವೇಶಿಸಲು ಪ್ರಯತ್ನಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಪೊಲೀಸರು ಸೂಚಿಸಿದ್ದಾಅರೆ.

ಎಸ್ಐಆರ್ ವಿರೋಧಿಸಿ ಕರೆ ನೀಡಿದ್ದ ಪ್ರತಿಭಟನೆಗೆ ನಿಷೇಧಾಜ್ಞೆಗಳ ನಡುವೆ ಪ್ರತಿಭಟನಾಕಾರರು ಸೇರುವುದನ್ನು ತಡೆಯಲು, ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದರು ಮತ್ತು ಗುರುಗ್ರಾಮ್‌ನಲ್ಲಿರುವ ಧ್ರುವ್ ರಾಠಿ ನಿವಾಸದಿಂದಲೇ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular