ಚಿಕ್ಕಮಗಳೂರು: ದೆವ್ವ ಬಿಡಿಸುವುದಾಗಿ ಹೇಳಿ ಮಹಿಳೆಯನ್ನು ನಂಬಿಸಿ ನಿರಂತರ ಅತ್ಯಾಚಾರವೆಸಗಿದ್ದ ಮಾಂತ್ರಿಕ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಸತೀಶ್ ಪಾತ್ರಿ ಬಂಧಿತ ಆರೋಪಿ. ಹಾಸನ ಮೂಲದ ಮಹಿಳೆಯ ಮೂಢ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ಆರೋಪಿ ಸತೀಶ್ ಪಾತ್ರಿ ವಾವಾಚಾರ, ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ.
ಹೀಗೆ ಒಮ್ಮೆ ಆರಂಭವಾದ ಹೇಯ ಕೃತ್ಯವನ್ನು ಪದೇ ಪದೇ ಬ್ಲ್ಯಾಕ್ ಮೇಲ್ ಮಾಡಿ ಮಹಿಳೆ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು.
ಮಹಿಳೆಯ ದೂರಿನ ಮೇರೆಗೆ ಆರೋಪಿ ಸತೀಶ್ ಪಾತ್ರಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಾಗುತ್ತಿದ್ದಂತೆ ಸತೀಶ್ ಪಾತ್ರು ತಲೆಮರೆಸಿಕೊಂಡಿದ್ದ. ಇದೀಗ ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಸತೀಶ್ ಪಾತ್ರಿಯನ್ನು ಬಂಧಿಸಿದ್ದಾರೆ.
ಹಾಸನ ಮೂಲದ ಮಹಿಳೆಯ ಮೇಲೆ ಆರೋಪಿ ಸತೀಶ್ ಪಾತ್ರಿ ನಿರಂತರವಾಗಿ ಅತ್ಯಾಚಾರವೆಸಿದ್ದ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿಗೆ ಕರೆದೊಯ್ದು ಈ ಕೃತ್ಯ ಎಸಗಿರುವುದಾಗಿ ಮಹಿಳೆ ಆರೋಪಿಸಿದ್ದರು. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ತನ್ನ ಮೇಲೆ ಎಫ್ಐಆರ್ ಆಗುತ್ತಿದ್ದಂತೆ ಪರಾರಿಯಾಗಿದ್ದ ಸತೀಶ್ ಪಾತ್ರಿ, ಒಂದು ತಿಂಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಸಂತ್ರತೆಯ ದೂರಿನ ಮೇರೆಗೆ ಎನ್.ಆರ್. ಪುರ ಠಾಣೆಯಲ್ಲಿ ಮೌಢ್ಯ ಪ್ರತಿಬಂಧಕ (ಬ್ಲಾಕ್ ಮ್ಯಾಜಿಕ್) ಕಾಯ್ದೆಯಡಿ ಮತ್ತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಈಗ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
ಈ ಹಿಂದೆ ಈತ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಬಲವಂತವಾಗಿ ಕೋಳಿ ರಕ್ತ ಕುಡಿಯುವಂತೆ ಒತ್ತಾಯಿಸಿರುವ ಆಘಾತಕಾರಿ ವಿಚಾರ ಹೊರಬಂದಿತ್ತು.. ಸತೀಶ್ ಪಾತ್ರಿಯ ಈ ಅಮಾನವೀಯ ಕೃತ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿಗೆ ಪೊಲೀಸ್ ಇಲಾಖೆಯೊಳಗಿನಿಂದಲೇ ರಕ್ಷಣೆ ದೊರೆಯುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಎನ್.ಆರ್. ಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಾಂತೇಶ್ ಎಂಬಾತನೇ ಆರೋಪಿಗೆ ಠಾಣೆಯ ಪ್ರತಿ ಕ್ಷಣದ ಮಾಹಿತಿಯನ್ನು ರವಾನಿಸುತ್ತಿದ್ದನು. ಪೊಲೀಸರು ದಾಳಿಗೆ ಬರುವ ಮುಂಚೆಯೇ ಸಿಬ್ಬಂದಿಯಿಂದ ಮಾಹಿತಿ ಪಡೆದು ಆರೋಪಿ ಜಾಗ ಬದಲಾಯಿಸುತ್ತಿದ್ದನು ಎಂದು ಹೇಳಲಾಗಿದೆ.
ಈ ಮಾಹಿತಿ ಸೋರಿಕೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅವರು ಕರ್ತವ್ಯಲೋಪ ಎಸಗಿದ ಪೇದೆ ಕಾಂತೇಶ್‌ನನ್ನು ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಅತ್ಯಾಚಾರಆರೋಪಿ ಸತೀಶ್ ಪಾತ್ರಿಯ ಬಂಧನವಾಗಿದೆ

