HomeKarnatakaಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ...

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದಿಂದ ಪ್ರತಿ ವರ್ಷದಂತೆ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.

ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಿಇಟಿ, ನೀಟ್, ಜೆಇಇ, ಪಿಜಿಸಿಇಟಿ, ಕ್ಲಾಟ್, ಐಸಿಎಆರ್ (CET/NEET/JEE/PGCET/CLAT/ICAR) ಮುಂತಾದ ಪ್ರಮುಖ ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆಯಾಗುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಶೈಕ್ಷಣಿಕ ಸಾಲವನ್ನು ಒದಗಿಸಲಾಗುತ್ತದೆ. ಪ್ರಸ್ತುತ ಸಾಲಿನಿಂದ ಯೋಜನೆಯ ಸೌಲಭ್ಯವನ್ನು ಸರ್ಕಾರಿ, ಮ್ಯಾನೇಜೆಂಟ್ ಹಾಗೂ ಖಾಸಗಿ ಸೀಟುಗಳಿಗೂ ಅನ್ವಯಿಸಲಾಗಿದೆ. ಈ ಅರಿವು ಯೋಜನೆಯ ವ್ಯಾಪ್ತಿಯನ್ನು ಮೇಲ್ಕಂಡ ಪ್ರವೇಶ ಪರೀಕ್ಷಾ ಕೋರ್ಸ್ ಗಳಿಗೆ ಮಾತ್ರ ಸೀಮಿತಗೊಳಿಸದೆ, ರಾಷ್ಟ್ರೀಯ/ರಾಜ್ಯ ಮಟ್ಟದಲ್ಲಿ ಮಾನ್ಯತೆ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವಿವಿಧ ಪದವಿ, ಸ್ನಾತಕೋತ್ತರ ಪದವಿ, ಪಿ.ಎಚ್.ಡಿ, ಐಟಿಐ, ಡಿಪ್ಲೋಮಾ ಕೋರ್ಸ್ಗಳನ್ನು ವ್ಯಾಸಂಗ ಮಾಡಲು ಬಡ್ಡಿರಹಿತ ಶೈಕ್ಷಣಿಕ ಸಾಲವನ್ನು ಒದಗಿಸಲಾಗುತ್ತದೆ.

ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ” ಸಹಾಯಧನ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾವಲಂಭಿಯನ್ನಾಗಿ ಮಾಡುವ ಸಲುವಾಗಿ ರಾಷ್ಟ್ರೀಕೃತ/ಶೆಡ್ಯೂಲ್ ಬ್ಯಾಂಕ್/ಆರ್.ಬಿ.ಐ.ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇ. 50 ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು. ಸಹಾಯಧನವು ಬ್ಯಾಕ್ ಎಂಡ್ ಸಬ್ಸಿಡಿಯಾಗಿದ್ದು, ಸ್ವ-ಸಹಾಯ ಸಂಘಗಳ ಆರ್ಥಿಕ ಬ್ಯಾಂಕ್ ಗಳಿಂದ ಪಡೆದ ಸಾಲದ ಮರುಪಾವತಿಗೆ ಹೊಂದಾಣಿಕೆ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು ಮಾನ್ಯತೆ ಪಡೆದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು ಪಡೆಯಲು ರೂ. 20 ಲಕ್ಷದವರೆಗೆ ಬಡ್ಡಿರಹಿತ ಸಾಲ ಪಡೆಯಬಹುದು. ಕೋರ್ಸ್ ಪೂರ್ಣಗೊಂಡ 6 ತಿಂಗಳ ನಂತರದಿAದ 60 ಕಂತುಗಳಲ್ಲಿ ಸಾಲವನ್ನು ಮರುಪಾವತಿಸಬೇಕು. ಸಾಲ ಮಂಜೂರಾತಿ ಮೊತ್ತದಿಂದ ಶೇ 2 ರಷ್ಟು ಸೇವಾ ಶುಲ್ಕವನ್ನು ಸಾಲ ವಿತರಣೆಯ ಸಮಯದಲ್ಲಿ ಕಡಿತಗೊಳಿಸಲಾಗುತ್ತದೆ.

ಸ್ಮಶಾನಗಳ ಮೂಲಭೂತ ಸೌಕರ್ಯ ಹಾಗೂ ಆವರಣ ಗೋಡೆ ನಿರ್ಮಾಣ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳಿಗೆ ಆವರಣ ಗೋಡೆ ನಿರ್ಮಾಣ ಮತ್ತು ಈ ಸ್ಮಶಾನಗಳಿಗೆ ಮೂಲಭೂತ ಸೌಕರ್ಯಗಳಾದ ವಿದ್ಯುದ್ದೀಕರಣ, ಶುದ್ಧ ಕುಡಿಯುವ ನೀರಿನ ಹಾಗೂ ಕೊಳವೆ ಬಾವಿ ಸೌಕರ್ಯ, ಶವ ಇಡುವ ಕಟ್ಟಡ, ರಸ್ತೆ ಇತ್ಯಾದಿಗಳಿಗೆ ಅಂದಾಜು ವೆಚ್ಚದ ಶೇ. 90 ರಷ್ಟು ಅಥವಾ ಗರಿಷ್ಠ ರೂ. 30 ಲಕ್ಷ ಯಾವುದು ಕಡಿಮೆಯೋ ಅದರಂತೆ ಕ್ರಿಶ್ಚಿಯನ್ ಸಂಸ್ಥೆಗಳಿಗೆ ಅನುದಾನ ಮಂಜೂರು ಮಾಡಲಾಗುವುದು.

ಚರ್ಚ್ ದುರಸ್ತಿ ಹಾಗೂ ಆವರಣ ಗೋಡೆ ನಿರ್ಮಾಣ ಯೋಜನೆಯಡಿ 10 ವರ್ಷಗಳ ಮೇಲ್ಪಟ್ಟ ಚರ್ಚಗಳ ದುರಸಿ ನವೀಕರಣ/ ಜೀರ್ಣೋದ್ಧಾರ/ ಮೇಲರ್ಜಿಗಾಗಿ ಕಾಮಗಾರಿಯ ಅಂದಾಜು ವೆಚ್ಚದ ಶೇ. 50ರಷ್ಟು ಅಥವಾ ಗರಿಷ್ಠ ರೂ. 50 ಲಕ್ಷಗಳು ಯಾವುದು ಕಡಿಮೆಯೋ ಅಷ್ಟು ಅನುದಾನವನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಚರ್ಚ್ ಆವರಣ ಗೋಡೆ ನಿರ್ಮಾಣ ಕಾಮಗಾರಿಯ ಅಂದಾಜು ವೆಚ್ಚದ ಶೇ. 90ರಷ್ಟು ಅಥವಾ ಗರಿಷ್ಠ ರೂ. 25 ಲಕ್ಷಗಳು ಯಾವುದು ಕಡಿಮೆಯೋ ಅಷ್ಟು ಅನುದಾನವನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ.

ಸಮುದಾಯ ಭವನ ನಿರ್ಮಾಣ ಯೋಜನೆಯಡಿ ಜಿಲ್ಲಾ ಕೇಂದ್ರ ಸ್ಥಾನಗಳು ಹಾಗೂ ಮಹಾನಗರ ಪಾಲಿಕೆಗಳಲ್ಲಿ ಸಮುದಾಯ ಭವನಗಳಿಗೆ ಗರಿಷ್ಠ ರೂ. 1.ಕೋಟಿವರೆಗೆ ಹಾಗೂ ಇತರೆ ಸ್ಥಳಗಳಲ್ಲಿ ಗರಿಷ್ಠ ರೂ. 50 ಲಕ್ಷಗಳವರೆಗೆ ಅನುದಾನ ಮಂಜೂರು ಮಾಡಲಾಗುವುದು. ಅಂದಾಜು ಮೊತ್ತವು ಇದಕ್ಕಿಂತ ಕಡಿಮೆ ಇದ್ದಲ್ಲಿ, ಅಂದಾಜು ಮೊತ್ತದಷ್ಟೇ ಅನುದಾನ ನೀಡಲಾಗುವುದು.

ಫಾಸ್ಟ್ ಫುಡ್ ಟ್ರಕ್, ಟ್ರೈಲರ್, ಮೊಬೈಲ್ ಅಡುಗೆಮನೆ ಹಾಗೂ ಆಹಾರದ ಮಳಿಗೆ ಯೋಜನೆಯಡಿ ಆಧುನಿಕ ಮತ್ತು ಸುಸಜ್ಜಿತವಾದ ಈ ಮೊಬೈಲ್ ಫುಡ್ ಟ್ರಕ್, ಟ್ರೈಲರ್, ಆಹಾರ ತಯಾರಿಕೆ ಮತ್ತು ಸೇವೆಯನ್ನು ಸಮರ್ಥವಾಗಿ ನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ. ಫಾಸ್ಟ್ ಫುಡ್. ಲಘು ಉಪಹಾರ, ಪಾನೀಯಗಳು ಮತ್ತು ಕ್ಯಾಟರಿಂಗ್ ಸೇವೆಗಳಿಗೆ ಅತ್ಯುತ್ತಮವಾಗಿರುವ ಇದು ಸಂಚಾರಿ ಆಹಾರ ಉದ್ಯಮಗಳಿಗೆ ಹೊಂದಿಕೊಳ್ಳುವ ಹಾಗೂ ವೃತ್ತಿಪರ ಪರಿಹಾರವನ್ನು ಒದಗಿಸುತ್ತದೆ.

ಹೆಚ್‌ಐವಿ ಪೀಡಿತ ಹಾಗೂ ಮಾನಸಿಕ ಮತ್ತು ದೈಹಿಕ ವಿಶೇಷಚೇತನರ ಆಶ್ರಯ ಗೃಹ ಸಹಾಯಧನ ಯೋಜನೆಯಡಿ ರಾಜ್ಯದ ಕ್ರೈಸ್ತ ಸಮುದಾಯದ ಸ್ವಯಂಸೇವಾ ಸಂಸ್ಥೆಗಳು ನಡೆಸುತ್ತಿರುವ ಹೆಚ್‌ಐವಿ ಅಥವಾ ಏಡ್ಸ್ ಪೀಡಿತರು ಹಾಗೂ ಮಾನಸಿಕ ಮತ್ತು ದೈಹಿಕವಾಗಿ ವಿಶೇಷ ಚೇತನರ ಆಶ್ರಯ ಕೇಂದ್ರಗಳಲ್ಲಿ ಉಚಿತ ಆಹಾರ, ವಸತಿ, ವೈದ್ಯಕೀಯ ಸೌಲಭ್ಯಗಳು ಮತ್ತು ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ. ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಸಹಾಯಧನ ಯೋಜನೆಯನ್ನು ಜಾರಿಗೊಳಿಸಲು ಆದೇಶಿಸಲಾಗಿದ್ದು. ಈ ಯೋಜನೆಯಡಿ ಅರ್ಹ ಸಂಸ್ಥೆಗಳಿಗೆ ಗರಿಷ್ಠ ರೂ. 8,00,000 (ರೂಪಾಯಿ ಎಂಟು ಲಕ್ಷ ಮಾತ್ರ) ಸಹಾಯಧನವನ್ನು ಮಂಜೂರು ಮಾಡಲಾಗುವುದು.

ಅನಾಥಾಶ್ರಮ ಮತ್ತು ವೃದ್ಧಾಶ್ರಮ ಯೋಜನೆಯಡಿ ಕ್ರಿಶ್ಚಿಯನ್ ಸ್ವಯಂಸೇವಾ ಸಂಸ್ಥೆಗಳು ಭಾರತೀಯ ಸೊಸೈಟಿ ನೋಂದಣಿ ಕಾಯ್ದೆ 1860 ಅಥವಾ ಕರ್ನಾಟಕ (ಮೈಸೂರು) ಕಾಯ್ದೆ 1960ರಡಿ ಕನಿಷ್ಠ 3 ವರ್ಷಗಳಿಂದ ನೋಂದಣಿಯಾಗಿರಬೇಕು. ಸಂಸ್ಥೆಯು ಲಾಭರಹಿತವಾಗಿ ಸಮಾಜ ಸೇವೆಯಲ್ಲಿ ತೊಡಗಿರಬೇಕು. ಆಶ್ರಮದಲ್ಲಿ ಕನಿಷ್ಠ 25 ಫಲಾನುಭವಿಗಳು ಹಾಗೂ 2500 ಚದರ ಅಡಿ ವಿಸ್ತೀರ್ಣ ಇರಬೇಕು ಮತ್ತು ಕನಿಷ್ಠ 2 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರಬೇಕು. ಸಂಸ್ಥೆಯು ಅಗತ್ಯ ಸೌಲಭ್ಯ, ಸಿಬ್ಬಂದಿ, ಅನುಭವ ಮತ್ತು ಆರ್ಥಿಕ ಸ್ಥಿರತೆ ಹೊಂದಿರಬೇಕು. ಫಲಾನುಭವಿಗಳಿಂದ ಯಾವುದೇ ಶುಲ್ಕ ಅಥವಾ ದೇಣಿಗೆ ವಸೂಲಿ ಮಾಡಬಾರದು ಹಾಗೂ ಇದೇ ಉದ್ದೇಶಕ್ಕಾಗಿ ಇತರೆ ಅನುದಾನ ಪಡೆದಿರಬಾರದು. ಸಂಸ್ಥೆಯ ಖಾತೆಯಲ್ಲಿ ಕನಿಷ್ಠ ರೂ. 50,000 ಮೊತ್ತ ಇರಬೇಕು.

ಈ ಎಲ್ಲಾ ಯೋಜನೆಗಳಿಗೆ ವೆಬ್‌ಸೈಟ್  http://kccdclonline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ಆದರೆ, ಈ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 31 ವರೆಗೆ ವಿಸ್ತರಿಸಲಾಲಾಗಿದ್ದು, ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08539-225008 ಗೆ ಸಂಪರ್ಕಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular