HomeHealthಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುತ್ತಿದ್ದೀರಾ?: ದೈನಂದಿನ ಈ ಅಭ್ಯಾಸ ತರಬಹುದು ಗಂಭೀರ ಆರೋಗ್ಯ ಸಂಕಷ್ಟ!

ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುತ್ತಿದ್ದೀರಾ?: ದೈನಂದಿನ ಈ ಅಭ್ಯಾಸ ತರಬಹುದು ಗಂಭೀರ ಆರೋಗ್ಯ ಸಂಕಷ್ಟ!

ದಿನೇ ದಿನೇ ಹೆಚ್ಚುತ್ತಿರುವ ಪ್ಲಾಸ್ಟಿಕ್ ಬಳಕೆ ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಅದರಲ್ಲೂ ವಿಶೇಷವಾಗಿ ನೀರಿನ ಬಳಕೆಗೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವವರ ಸಂಖ್ಯೆ ದೊಡ್ಡದಾಗಿದೆ. ಪ್ರಯಾಣ ಮಾಡುವಾಗ ಅಥವಾ ಹೊರಗಡೆ ಓಡಾಡುವಾಗ ಕೇವಲ ಒಂದು ಪ್ಲಾಸ್ಟಿಕ್ ಬಾಟಲ್ ನೀರು ಸುಲಭವಾಗಿ ಸಿಗುವುದರಿಂದ ಅನೇಕರು ದಿನನಿತ್ಯ ಇದೇ ಅಭ್ಯಾಸವನ್ನು ರೂಢಿಸಿಕೊಳ್ಳುತ್ತಾರೆ. ಆದರೆ ಈ ಸಣ್ಣ ನಿರ್ಲಕ್ಷ್ಯವು ಮೌನವಾಗಿ ನಮ್ಮ ಆರೋಗ್ಯವನ್ನು ಹೇಗೆ ಹಾಳುಮಾಡುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ.

ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರನ್ನು ಸಂಗ್ರಹಿಸಿ ಕುಡಿಯುವುದರಿಂದ ದೇಹಕ್ಕೆ ಉಂಟಾಗುವ ತೊಂದರೆಗಳು ಹಲವಿವೆ. ಮುಖ್ಯವಾಗಿ ಬಿಸ್ಫೆನಾಲ್ ಎ ಮತ್ತು ಥಾಲೇಟ್ಸ್ ನಂತಹ ಹಾನಿಕಾರಕ ರಾಸಾಯನಿಕಗಳು ಬಾಟಲಿಯಿಂದ ನೀರಿನೊಂದಿಗೆ ಬೆರೆತು ದೇಹದ ಒಳಗೆ ಸೇರಿಕೊಳ್ಳುತ್ತವೆ. ಇವು ಮಾನವನ ದೇಹದಲ್ಲಿ ಹಾರ್ಮೋನುಗಳ ಸಮತೋಲನವನ್ನು ಸಂಪೂರ್ಣವಾಗಿ ಹದಗೆಡಿಸುತ್ತವೆ. ವಿಶೇಷವಾಗಿ ಬಿಸಿಲು ಅಥವಾ ಉಷ್ಣತೆಗೆ ಒಡ್ಡಿಕೊಂಡ ಪ್ಲಾಸ್ಟಿಕ್ ಬಾಟಲಿಗಳಲ್ಲಿನ ನೀರನ್ನು ಕುಡಿಯುವುದರಿಂದ ವಿಷಕಾರಿ ಅಂಶಗಳು ಬಿಡುಗಡೆಯಾಗಿ ನರಮಂಡಲ ಹಾಗೂ ರೋಗನಿರೋಧಕ ಶಕ್ತಿಯ ಮೇಲೆ ದುಷ್ಪರಿಣಾಮ ಬೀರುತ್ತವೆ.

ಇತ್ತೀಚಿನ ವೈದ್ಯಕೀಯ ಸಂಶೋಧನೆಗಳ ಪ್ರಕಾರ, ಮೈಕ್ರೋ ಪ್ಲಾಸ್ಟಿಕ್ ಕಣಗಳು ನೀರಿನ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ಜೀರ್ಣಾಂಗ ವ್ಯವಸ್ಥೆ, ಮಧುಮೇಹ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ ಕಾರಣವಾಗುತ್ತಿವೆ. ಪುರುಷರಲ್ಲಿ ವೀರ್ಯಾಣುಗಳ ಉತ್ಪತ್ತಿ ಕುಂಠಿತಗೊಳ್ಳಲು ಹಾಗೂ ಮಹಿಳೆಯರಲ್ಲಿ ಹಾರ್ಮೋನ್ ವ್ಯತ್ಯಯಕ್ಕೆ ಇದು ಪ್ರಮುಖ ಕಾರಣವಾಗುತ್ತಿದೆ. ಈ ಅಪಾಯಕಾರಿ ಬೆಳವಣಿಗೆಯಿಂದ ದೂರವಿರಲು ದೈನಂದಿನ ಜೀವನದಲ್ಲಿ ಸ್ಟೀಲ್, ಗಾಜು ಅಥವಾ ತಾಮ್ರದ ಪಾತ್ರೆಗಳಲ್ಲಿ ಸಂಗ್ರಹಿಸಿದ ಶುದ್ಧ ನೀರನ್ನು ಬಳಸುವುದು ಅತ್ಯಂತ ಸುರಕ್ಷಿತ ಹಾಗೂ ಆರೋಗ್ಯಕರ ಮಾರ್ಗವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular