HomeJobsಉದ್ಯೋಗಾಂಕ್ಷಿಗಳೇ ಗಮನಿಸಿ ; ಅ.16 ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

ಉದ್ಯೋಗಾಂಕ್ಷಿಗಳೇ ಗಮನಿಸಿ ; ಅ.16 ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

ಶಿವಮೊಗ್ಗ :   ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ : 16-10-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

 ಈ ನೇರ ಸಂದರ್ಶನದಲ್ಲಿ ಪಿರಮಲ್ ಫೈನಾನ್ಸ್ ಪ್ರೈ. ಲಿ. ಖಾಸಗಿ ಕಂಪನಿ ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

 ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.ಉಚಿತ ಪ್ರವೇಶವಿದ್ದು,ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

 ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯ ಅನುಷ್ಠಾನಕ್ಕಾಗಿ ಸೇವಾ ಸೇತು ಶಿಬಿರ ಆಯೋಜನೆ

 ಶಿವಮೊಗ್ಗ :  ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಮೆಸ್ಕಾಂ ಉಪವಿಭಾಗ ಕಛೇರಿಗಳಲ್ಲಿ ದಿನಾಂಕ 15.10.2026, 16.10.2026 ಮತ್ತು 17.10.2026 ರಂದು ಮೂರು ದಿನಗಳ ಸೇವಾ ಸೇತು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

 ಈ ಶಿಬಿರಗಳ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸುವುದು ಹಾಗೂ ಮೇಲ್ಛಾವಣಿ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಿಕೊಳ್ಳಲು ಅಗತ್ಯವಿರುವ ನೋಂದಣಿ ಪ್ರಕ್ರಿಯೆ, ಬ್ಯಾಂಕ್ ಸಾಲ ಸೌಲಭ್ಯಗಳನ್ನು ಪಡೆಯುವ ಕುರಿತು ಮಾರ್ಗದರ್ಶನ ಮತ್ತು ಸೌರ ವಿದ್ಯುತ್ ಘಟಕಗಳ ಅಳವಡಿಕೆಗಾಗಿ ಅಧಿಕೃತ ಮಾರಾಟಗಾರರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಸಹಾಯ ಒದಗಿಸುವುದಾಗಿದೆ.

 ಆಸಕ್ತ ಸಾರ್ವಜನಿಕರು ಮೇಲ್ಕಂಡ ದಿನಾಂಕಗಳಂದು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿರುವ ಮೆಸ್ಕಾಂ ಉಪವಿಭಾಗ ಕಛೇರಿಗಳಿಗೆ ತಮ್ಮ ವಿದ್ಯುತ್ ಬಿಲ್ಲಿನ ಪ್ರತಿ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಭೇಟಿ ನೀಡಿ, ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಸಭೆಯ ಪ್ರಯೋಜನವನ್ನು ಪಡೆಯುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಅ. 15 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಉಷಾ ನರ್ಸಿಂಗ್ ಹೋಮ್ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ದಿನಾಂಕ 15.10.2026 ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ರವೀಂದ್ರ ನಗರ, ಗಾಂಧಿನಗರ, ಸವಳಂಗ ರಸ್ತೆ, ಉಷಾ ನರ್ಸಿಂಗ್ ಹೋಮ್ ಹಾಸ್ಪಿಟಲ್, ಚಂದ್ರಗಿರಿ ಹಾಸ್ಪಿಟಲ್, ಸುಶೋಧ ಹಾಸ್ಪಿಟಲ್, ಹನುಮಂತ ನಗರ, ವಿನಾಯಕ ನಗರ, ವೆಂಕಟೇಶ ನಗರ / ಎಎನ್ ಕೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular