HomeKarnatakaಸಂಚಲನ ಸೃಷ್ಟಿಸಿದ 'ಸ್ಟಿಂಗ್ ಆಪರೇಷನ್‌' ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ!

ಸಂಚಲನ ಸೃಷ್ಟಿಸಿದ ‘ಸ್ಟಿಂಗ್ ಆಪರೇಷನ್‌’ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದದ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದಿದ್ದಾರೆ.

 ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರನ್ನು ಜೋಡಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಇದರಲ್ಲಿ ಯಾವುದೇ ಭಯವಿಲ್ಲ, ಅಂತಿಮವಾಗಿ ಸತ್ಯವೇ ಗೆಲ್ಲಲಿದೆ ಎಂದು ಹೇಳಿದ್ದಾರೆ. ಅಲ್ಲದೆ, ವಿವಾದಿತ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವುದಾಗಿ ತಿಳಿಸಿದ್ದು, ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸರಿಗೂ ದೂರು ನೀಡಿದ್ದಾರೆ.

 ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ. ಈ ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲದೆ ಇದ್ದರೂ ಇದನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ನನ್ನ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಹೆಸರಿನ ಉಲ್ಲೇಖ ಇರುವ ಈ ಸ್ಟ್ರಿಂಗ್ ಆಪರೇಷನ್ ವಿಡಿಯೋ ಅನ್ನು ಯಾವುದೇ ಪತ್ರಿಕೆ, ಚಾನೆಲ್ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಇಲ್ಲವೇ ಪ್ರಸಾರ ಮಾಡದಂತೆ ತಡೆನೀಡಬೇಕು ಎಂದು ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಈ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ತೆರೆದ ಪುಸ್ತಕದಂತಿರುವ ನನ್ನ ಐದು ದಶಕಗಳ ರಾಜಕೀಯ ಜೀವನದ ಅರಿವು ಇರುವ ರಾಜ್ಯದ ಜನತೆಗೂ ಇದು ಗೊತ್ತಿದೆ ಎನ್ನುವ ವಿಶ್ವಾಸ ನನಗಿದೆ. ಆದರೆ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ನಾನು ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆಯೇ ಹೊರತು ಉಳಿದಂತೆ ಯಾವ ಭಯವೂ ನನಗಿಲ್ಲ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವ ವಿಶ್ವಾಸವೂ ನನಗಿದೆ. ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು. ಇಲ್ಲಿಯ ವರೆಗಿನ ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿದವನಲ್ಲ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ. ಈ ಬಗ್ಗೆ ನನಗೆ ವಿಷಾದವಿದೆ. ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಾನು ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವೂ ನನಗಿದೆ. ಅಲ್ಲಿಯ ವರೆಗೆ ಮಾಧ್ಯಮಗಳು ಮಾತ್ರವಲ್ಲ ಸಾರ್ವಜನಿಕರು ಕೂಡಾ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕೆಂದು ಕೋರುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರ: ಸುಪ್ರೀಂಕೋರ್ಟ್ ಮೆಟ್ಟಿಲೇರುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ!

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ 2022ರ ಕರ್ನಾಟಕ ಸರ್ಕಾರದ ಕಾನೂನಿನ ಕೆಲವು ಅಂಶಗಳನ್ನು ಹೈಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ, ಮುಂದಿನ ಕ್ರಮದ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಎಸ್‌ಸಿ, ಎಸ್‌ಟಿ ಮೀಸಲಾತಿ ಎಷ್ಟು ಹೆಚ್ಚಿಸಲಾಗಿತ್ತು?

2022ರಲ್ಲಿ ಜಾರಿಗೆ ಬಂದ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿ ಸೀಟುಗಳ ಹಾಗೂ ರಾಜ್ಯದ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳ ಮೀಸಲಾತಿ) ಕಾಯ್ದೆಯಡಿ, ಎಸ್‌ಸಿ ಸಮುದಾಯದ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‌ಟಿ ಸಮುದಾಯದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು.

ಇದರೊಂದಿಗೆ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಈಗಾಗಲೇ ಇದ್ದ ಶೇ.32ರಷ್ಟು ಮೀಸಲಾತಿ ಸೇರಿ, ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.56ಕ್ಕೆ ಏರಿಕೆಯಾಗಿತ್ತು.

ಸಂಪುಟ ಸಭೆಯಲ್ಲಿ ಮುಂದಿನ ನಿರ್ಧಾರ

ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಿಸಲಾಗಿತ್ತು. ಎಸ್‌ಸಿಗಳಿಗೆ ಶೇ.17 ಮತ್ತು ಎಸ್‌ಟಿಗಳಿಗೆ ಶೇ.7ರಷ್ಟು ಮೀಸಲಾತಿ ನಿಗದಿಪಡಿಸಲಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕವೂ ಇದೇ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಬರಲಾಗಿದೆ ಎಂದು ಹೇಳಿದರು.

ಮೀಸಲಾತಿ ಹೆಚ್ಚಳವನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಅವಕಾಶಗಳಿಂದ ವಂಚಿತರಾದ ಸಮುದಾಯಗಳು ಸಮಾಜದಲ್ಲಿ ಮುಂದೆ ಬರಲು ಮೀಸಲಾತಿ ನೆರವಾಗಬೇಕು. ವಿಶೇಷ ಸಂದರ್ಭಗಳಲ್ಲಿ ಮೀಸಲಾತಿ ಹೆಚ್ಚಳಕ್ಕೆ ಅವಕಾಶವಿದೆ ಎಂಬುದು ಸರ್ಕಾರದ ನಿಲುವಾಗಿದೆ ಎಂದು ಅವರು ತಿಳಿಸಿದರು.

ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕೇ ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ನ್ಯಾಯಾಂಗದ ನಿರ್ಧಾರದಲ್ಲಿ ಸರ್ಕಾರದ ಹಸ್ತಕ್ಷೇಪ ಸಾಧ್ಯವಿಲ್ಲ

ಈ ವಿಚಾರವಾಗಿ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ನ್ಯಾಯಾಂಗದ ನಿರ್ಧಾರಗಳ ಮೇಲೆ ಸರ್ಕಾರ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಹೇಳಿದರು.ನ್ಯಾಯಾಧೀಶರು ಯಾವ ರೀತಿಯ ತೀರ್ಪು ನೀಡಬೇಕು ಎಂದು ಸರ್ಕಾರ ನಿರ್ದೇಶಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪನ್ನು ಸರ್ಕಾರ ಗೌರವಿಸುತ್ತದೆ. ಮುಂದಿನ ಕಾನೂನು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಇದೇ ವೇಳೆ, ಇದೇ ಆಧಾರದ ಮೇಲೆ ಜಾರಿಗೊಳಿಸಲಾಗಿರುವ ಆಂತರಿಕ ಮೀಸಲಾತಿ ವಿಚಾರವನ್ನೂ ಸರ್ಕಾರ ಪರಿಶೀಲಿಸಲಿದೆ ಎಂದು ಹೇಳಿದರು.

ಹೈಕೋರ್ಟ್ ತೀರ್ಪಿಗೆ ಸಿದ್ದರಾಮಯ್ಯ ಅಸಮಾಧಾನ

ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು, ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪು, ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಮುದಾಯಗಳ ಆಶಯಗಳಿಗೆ ಹಿನ್ನಡೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ, 2023ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಸರ್ಕಾರ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿತ್ತು. ಒಟ್ಟು ಮೀಸಲಾತಿ ಪ್ರಮಾಣ ಶೇ.50ರ ಮಿತಿಯನ್ನು ಮೀರುತ್ತದೆ ಎಂಬುದು ತಿಳಿದಿದ್ದರೂ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ನ್ಯಾಯಾಂಗವನ್ನು ಗೌರವಿಸುತ್ತೇವೆ. ಆದರೆ, ಮೀಸಲಾತಿ ಹೆಚ್ಚಳದ ನಿರ್ಧಾರ ಕೈಗೊಳ್ಳುವ ಮೊದಲು ಅದರ ಸಾಂವಿಧಾನಿಕ ಮಾನ್ಯತೆಯನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಸರ್ಕಾರ ಏಕೆ ಕ್ರಮ ಕೈಗೊಳ್ಳಲಿಲ್ಲ? ದೀರ್ಘಕಾಲೀನ ಸಾಮಾಜಿಕ ನ್ಯಾಯಕ್ಕಿಂತ ಚುನಾವಣಾ ಲಾಭಕ್ಕೆ ಆದ್ಯತೆ ನೀಡಲಾಗಿತ್ತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧವೂ ಟೀಕೆ

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಸರ್ಕಾರ ಮುಂದೂಡಿದ್ದನ್ನೂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈಗ ಕೇಂದ್ರ ಸರ್ಕಾರವು ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸಮಸ್ಯೆಗೆ ಯಾವ ಸಾಂವಿಧಾನಿಕ ಪರಿಹಾರವನ್ನು ಸೂಚಿಸಲಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮೀಸಲಾತಿ ಹೆಚ್ಚಳದ ಬೇಡಿಕೆ ಹಲವು ದಶಕಗಳ ಹೋರಾಟದ ಫಲವಾಗಿದೆ. 2018ರಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಈ ಕ್ರಮಕ್ಕೆ ಅಡಿಪಾಯ ಹಾಕಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular