HomeKarnatakaಹಿರಿಯ ನಾಗರೀಕರು, ವಿಕಲಚೇತನರು, ಒಂದು ವರ್ಷದೊಳಗಿನ ಮಕ್ಕಳ ತಾಯಂದಿರಿಗೆ ಶ್ರೀ ಹಾಸನಾಂಬ ದೇವಿ ವಿಶೇಷ ದರ್ಶನ...

ಹಿರಿಯ ನಾಗರೀಕರು, ವಿಕಲಚೇತನರು, ಒಂದು ವರ್ಷದೊಳಗಿನ ಮಕ್ಕಳ ತಾಯಂದಿರಿಗೆ ಶ್ರೀ ಹಾಸನಾಂಬ ದೇವಿ ವಿಶೇಷ ದರ್ಶನ ವ್ಯವಸ್ಥೆ

ಹಾಸನ: ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಹಿರಿಯ ನಾಗರೀಕರು/ವಿಕಲಚೇತನರು/ತೀವ್ರತರವಾದ ಆರೋಗ್ಯ ಸಮಸ್ಯೆಯುಳ್ಳವರು/ಒಂದು ವರ್ಷದೊಳಗಿನ ಮಕ್ಕಳ ತಾಯಂದಿರಿಗೆ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಹಿರಿಯ ನಾಗರೀಕರು/ವಿಕಲಚೇತನರು/ತೀವ್ರತರವಾದ ಆರೋಗ್ಯ ಸಮಸ್ಯೆಯುಳ್ಳವರು/ಒಂದು ವರ್ಷದೊಳಗಿನ ಮಕ್ಕಳ ತಾಯಂದಿರಿಗೆ ವಿಶೇಷ ದರ್ಶನಕ್ಕೆ ದಿನಾಂಕ:08/10/2026 ರಿಂದ 09/11/2026 ರ ವರೆಗೆ ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ.

ವಿಶೇಷ ದರ್ಶನಕ್ಕೆ ಬರುವ 80 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರೀಕರು ವಯಸ್ಸಿನ ದಾಖಲೆಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ತರುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವರ್ಷದೊಳಗಿನ ಮಗುವನ್ನು ಹೊಂದಿರುವ ತಾಯಂದಿರು ವಿಶ್ಲೇಷ ದರ್ಶನಕ್ಕಾಗಿ ಮಗುವಿನ ಜನನ ಪ್ರಮಾಣ ಪತ್ರ ಕಡ್ಡಾಯವಾಗಿ ನೀಡಬೇಕಾಗಿರುತ್ತದೆ.

ಆಯ್ದ ವಿಕಲಚೇತನರಿಗೆ ಮಾತ್ರ ವಿಶೇಷ ದರ್ಶನದ ವ್ಯವಸ್ಥೆಯಿದ್ದು, ವಿಶೇಷ ದರ್ಶನದ ಸಮಯದಲ್ಲಿ ತಮ್ಮ ಯುಡಿಐಡಿ ಕಾರ್ಡ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ.

ತೀವ್ರತರವಾದ ಖಾಯಿಲೆಯಿಂದ ಬಳಲುತ್ತಿರುವವರು ವಿಶೇಷ ದರ್ಶನದ ಸಮಯದಲ್ಲಿ ವೈಧ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ.

ಹಿರಿಯ ನಾಗರೀಕರು/ ವಿಕಲಚೇತನರು/ ತೀವ್ರತರವಾದ ಆರೋಗ್ಯ ಸಮಸ್ಯೆಯುಳ್ಳವರು/ ಒಂದು ವರ್ಷದೊಳಗಿನ ಮಕ್ಕಳ ತಾಯಂದಿರಿಗೆ ದೇವಸ್ಥಾನದ ಸ್ವಯಂ ಸೇವಕರೊಂದಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅವರೊಂದಿಗೆ ಕುಟುಂಬದ ಇತರೆ ಸದಸ್ಯರಿಗೆ ವಿಶೇಷ ದರ್ಶನಕ್ಕೆ ಅವಕಾಶವಿರುವುದಿಲ್ಲ.

ಭಕ್ತಾದಿಗಳಿಗೆ ವಿಶೇಷ ದರ್ಶನವನ್ನು ಏರ್ಪಡಿಸಲು ಯಾವುದಾದರೂ ಗೊಂದಲ ಉಂಟಾದಲ್ಲಿ ಸ್ಥಳೀಯ ವೈಧ್ಯಾಧಿಕಾರಿಗಳ ನಿರ್ಧಾರ ಅಂತಿಮವಾಗಿರುತ್ತದೆ.

ಕಂಟ್ರೋಲ್ ರೂಂ ಸ್ಥಾಪನೆ

ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ – 2026 ಅಂಗವಾಗಿ ಭಕ್ತಾದಿಗಳಿಗೆ ಸುಗಮ ಹಾಗೂ ಸುರಕ್ಷಿತ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಕಂಟ್ರೋಲ್ ರೂಂ ಮೂಲಕ ಜನಸಂದಣಿ ನಿಯಂತ್ರಣ, ಭದ್ರತೆಗಾಗಿ ತ್ವರಿತ ಸ್ಪಂದನೆ.

ಯಾವುದೇ ತುರ್ತು ನೆರವಿಗಾಗಿ ತಕ್ಷಣ 7353939613, 7353939614, 7353939618 ಸಂಖ್ಯೆಗೆ ಕರೆ ಮಾಡಿ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅ.16 ರಂದು ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ : 16-10-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಪಿರಮಲ್ ಫೈನಾನ್ಸ್ ಪ್ರೈ. ಲಿ. ಖಾಸಗಿ ಕಂಪನಿ ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.ಉಚಿತ ಪ್ರವೇಶವಿದ್ದು,

ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular