HomeKarnatakaಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಹಿನ್ನಡೆಯಾಗಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಗಣಪತಿ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಟಿ. ನರಸೀಪುರ ಠಾಣೆ ಸಬ್ ಇನ್ಸ್ಪೆಕ್ಟರ್ ದೂರು ನೀಡಿದ್ದರು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರತಾಪ್ ಸಿಂಹ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ಗಂಭೀರತೆಯಿಂದ ಕೂಡಿದ್ದು ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಪ್ರತಾಪ್ ಸಿಂಹ ಅವರ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಪ್ರತಾಪ್ ಸಿಂಹ ಅವರಿಗೆ ಬಂಧನ ಭೀತಿ ಎದುರಾಗಿದೆ. ಟಿ. ನರಸೀಪುರ ಠಾಣೆಯಲ್ಲಿ ಈ ಪ್ರಕರಣವು ಸೇರಿದಂತೆ ಎರಡು ಪ್ರಕರಣಗಳು ಅವರ ವಿರುದ್ಧ ದಾಖಲಾಗಿದ್ದು, ಇವುಗಳನ್ನು ರದ್ದುಪಡಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಬಂಧನದ ಆತಂಕ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಆರೋಪ

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಪ್ರತಾಪ್ ಸಿಂಹ ಅವರ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಟಿ. ನರಸೀಪುರ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಬಂಧನವಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಾಪ್ ಸಿಂಹ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರತಾಪ್ ಸಿಂಹ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಕಿತ್ತೂರು ಉತ್ಸವ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗೆ ಸೂಚನೆ

ಬೆಳಗಾವಿ: ವೀರರಾಣಿ‌ ಕಿತ್ತೂರು ಚನ್ನಮ್ಮ ಉತ್ಸವದ ಅಂಗವಾಗಿ ರಚಿಸಲಾದ ವಿವಿಧ ಉಪ ಸಮಿತಿಗಳು ಪರಸ್ಪರ‌ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರ ಮೂಲಕ ಉತ್ಸವ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಅ.13) ನಡೆದ ಕಿತ್ತೂರು ಉತ್ಸವ-2026ರ ಉಪಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉತ್ಸವದ ಯಶಸ್ವಿಗಾಗಿ ಈಗಾಗಲೇ ರಚಿಸಲಾದ ವಿಜಯ ಜ್ಯೋತಿ, ಸ್ವಾಗತ, ವಸತಿ, ಉಟೋಪಚಾರ, ವೇದಿಕೆ, ಸಾಂಸ್ಕೃತಿಕ, ಮೆರವಣಿಗೆ‌ ಸಮಿತಿ ಸೆರಿದಂತೆ ವಿವಿಧ ಉಪ‌ ಸಮಿತಿಗಳು ತಮ್ಮ‌ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಉಪ ಸಮಿತಿಗಳಿಗೆ ಹಂಚಿಕೆ‌ ಮಾಡಲಾದ ಅನುದಾನದಡಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆಗೆ ಕ್ರಮ‌ ವಹಿಸಲು ಸೂಚಿಸಿದರು.

ಕಿತ್ತೂರಿನಲ್ಲಿ ಮೂರು‌ ದಿನಗಳ ಕಾಲ ಜರುಗುವ ಕಿತ್ತೂರು ಉತ್ಸವದ ಜೊತೆಗೆ ಕಾಕತಿ ಉತ್ಸವದ ಆಚರಣೆಗೆ ಎಲ್ಲ‌ ಉಪ ಸಮಿತಿಗಳು ಜವಾಬ್ದಾರಿಯುತವಾಗಿ ನಿರ್ವಹಿಸುವುದರ ಮೂಲಕ‌ ಅದ್ಧೂರಿ ಉತ್ಸವದ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಅವರು ತಿಳಿಸಿದರು.

ಸಭೆಯಲ್ಲಿ ಪ್ರಶಿಕ್ಷಣಾರ್ಥಿ ಐ.ಎ.ಎಸ್. ಅಧಿಕಾರಿ ರೋಹಿತ್ ಸಿಂಗ್, ಉಪ ವಿಭಾಗಾಧಿಕಾರಿಗಳಾದ ಪ್ರವೀಣ ಜೈನ್, ಶ್ರವಣಕುಮಾರ ನಾಯಕ, ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಾಜಶ್ರೀ ಜೈನಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ, ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಉಪನಿರ್ದೆಶಕ‌ ಮಲ್ಲಿಕಾರ್ಜುನ ನಾಯಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular