HomeKarnatakaಟ್ರಾಫಿಕ್ ಸಿಗ್ನಲ್ ನಲ್ಲಿ ಮಕ್ಕಳಿಂದ ಭಿಕ್ಷಾಟನೆ: ನಾಲ್ವರು ವಶಕ್ಕೆ, 13 ಮಕ್ಕಳ ರಕ್ಷಣೆ

ಟ್ರಾಫಿಕ್ ಸಿಗ್ನಲ್ ನಲ್ಲಿ ಮಕ್ಕಳಿಂದ ಭಿಕ್ಷಾಟನೆ: ನಾಲ್ವರು ವಶಕ್ಕೆ, 13 ಮಕ್ಕಳ ರಕ್ಷಣೆ

ಬೆಂಗಳೂರು: ಹಣದ ಆಸೆಗಾಗಿ ಅಪ್ರಾಪ್ತ ಮಕ್ಕಳನ್ನು ಭಿಕ್ಷಾಟನೆಗೆ ಬಳಸುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, 13 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಬೆಂಗಳೂರು ನಗರದ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕೋಗಿಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ.

ಖಚಿತ ಮಾಹಿತಿ ಆಧರಿಸಿ ಜಂಟಿ ಕಾರ್ಯಾಚರಣೆ

ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕೋಗಿಲು ಕ್ರಾಸ್ ಸಮೀಪ ಫ್ಲೈಓವರ್ ಕೆಳಭಾಗದ ಫುಟ್‌ ಪಾತ್‌ ನಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದ ಹೊರರಾಜ್ಯದ ಕೆಲವರು ಅಪ್ರಾಪ್ತ ಮಕ್ಕಳನ್ನು ಭಿಕ್ಷಾಟನೆಗೆ ಬಳಸುತ್ತಿದ್ದರೆಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳನ್ನು ಟ್ರಾಫಿಕ್ ಸಿಗ್ನಲ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷೆ ಬೇಡಲು ಬಳಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಿಸಿಬಿಯ ಮಹಿಳಾ ರಕ್ಷಣಾ ದಳದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆಯ ವೇಳೆ ಭಿಕ್ಷಾಟನೆಯಲ್ಲಿ ಮಕ್ಕಳನ್ನು ತೊಡಗಿಸುತ್ತಿದ್ದರೆಂಬ ಆರೋಪದ ಮೇಲೆ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಹೊರ ರಾಜ್ಯದ ನಾಲ್ವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಕ್ಕಳನ್ನು ಇಟ್ಟುಕೊಂಡು ಟ್ರಾಫಿಕ್ ಸಿಗ್ನಲ್ ಗಲ್ಲಿ ಭಿಕ್ಷಾಟನೆ ಮಾಡಿಸಿ ಅವರಿಂದ ಹಣ ಸಂಪಾದನೆ ಮಾಡುತ್ತಿರುವುದು ಗೊತ್ತಾಗಿದೆ. ಯಲಹಂಕ ಪೊಲೀಸ್ ಠಾಣೆಗೆ ವರದಿ ನೀಡಲಾಗಿದೆ. ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ.

`ಸುಸ್ಥಿರ ಅಭಿವೃದ್ಧಿಗಾಗಿ ವಿರಳ ಖನಿಜಗಳು’: ನ. 4ರಿಂದ ಬೆಂಗಳೂರಿನಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (ಕೆ.ಎಸ್.ಟಿ.ಎ) ವತಿಯಿಂದ “ಸುಸ್ಥಿರ ಅಭಿವೃದ್ಧಿಗಾಗಿ ವಿರಳ ಖನಿಜ ಮೌಲ್ಯ ಸರಪಳಿಯ ಭದ್ರತೆ” (Securing the Critical Mineral Value Chain for Sustainable Development) ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಈ ಸಮ್ಮೇಳನವು ನವೆಂಬರ್ 04 ಮತ್ತು 05 ರಂದು ಬೆಂಗಳೂರಿನ ವಿದ್ಯಾರಣ್ಯಪುರ ಬಳಿಯ ಪ್ರೊ. ಯು.ಆರ್. ರಾವ್ ವಿಜ್ಞಾನ ಭವನದಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದ್ದು, ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಖ್ಯಾತ ವಿಜ್ಞಾನಿಗಳು ಈ ಸಮ್ಮೇಳನದಲ್ಲಿ ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ವಿಜ್ಞಾನಿಗಳು, ಖನಿಜಾನ್ವೇಷಣೆ, ಗಣಿಗಾರಿಕೆ ಹಾಗೂ ಲೋಹಶಾಸ್ತ್ರ ಸಂಸ್ಥೆಗಳ ಪ್ರತಿನಿಧಿಗಳು, ಸಂಶೋಧನಾ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳು, ನವೋದ್ಯಮಗಳ (ಸ್ಟಾರ್ಟಪ್ಸ್) ಪ್ರತಿನಿಧಿಗಳು, ಖರೀದಿದಾರರು ಮತ್ತು ರಫ್ತುದಾರರು ಭಾಗವಹಿಸಬಹುದಾಗಿದೆ.

ಸಂಶೋಧನಾ ಪ್ರಬಂಧ ಮಂಡನೆಗೆ ಅವಕಾಶ: ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನಾ ಪ್ರಬಂಧಗಳನ್ನು (ಪೋಸ್ಟರ್ ರಿಸರ್ಚ್ ಪೆಪರ್) ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾಗುವ ಅತ್ಯುತ್ತಮ ಪ್ರಬಂಧಕ್ಕೆ ನಗದು ಬಹುಮಾನ ನೀಡಲಾಗುವುದು.

ನೋಂದಣಿಗಾಗಿ ಅಕ್ಟೋಬರ್ 30 ಕೊನೆಯ ದಿನಾಂಕವಾಗಿದ್ದು, ಆಸಕ್ತರು https://forms.gle/wgyoGKPOZVK8RJhCA ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9620767819, 9743084194 ಗೆ ಸಂಪರ್ಕಿಸಬಹುದು ಅಥವಾ ವೆಬ್‌ಸೈಟ್ https://kstacademy.in ನ್ನು ವೀಕ್ಷಿಸಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಸಂಶೋಧಕರು ಈ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯುವಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular