HomeKarnatakaತಲಕಾವೇರಿಯಲ್ಲಿ ಅ. 17ರಂದು ಕಾವೇರಿ ತೀರ್ಥೋದ್ಭವ: ಮದ್ಯ ಮಾರಾಟ ನಿಷೇಧ

ತಲಕಾವೇರಿಯಲ್ಲಿ ಅ. 17ರಂದು ಕಾವೇರಿ ತೀರ್ಥೋದ್ಭವ: ಮದ್ಯ ಮಾರಾಟ ನಿಷೇಧ

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ-ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ರಾತ್ರಿ 7.50 ಗಂಟೆಗೆ ಕಾವೇರಿ ತೀರ್ಥೋದ್ಭವ ನಡೆಯಲಿದೆ.

ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವುದರಿಂದ ಸಾರ್ವಜನಿಕ ಹಿತಾಸಕ್ತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಅಕ್ಟೋಬರ್, 17 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ 20 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

ಮದ್ಯ ಮಾರಾಟ ನಿಷೇಧ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಅಕ್ಟೋಬರ್ 20 ರಂದು ಬೆಳಗ್ಗೆ 06 ರಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಸುಂಟಿಕೊಪ್ಪ, 7ನೇ ಹೊಸಕೋಟೆ, ಕಂಬಿಬಾಣಿ ಮತ್ತು ಕೊಡಗರಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯವರೆಗೆ, ಅಕ್ಟೋಬರ್ 21 ರಂದು ಬೆಳಗ್ಗೆ 06 ರಿಂದ ಅಕ್ಟೋಬರ್, 22 ರ ಸಂಜೆ 6 ಗಂಟೆ ವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಸುಂಟಿಕೊಪ್ಪ, ಕುಶಾಲನಗರ ಹಾಗೂ ಬೆಟ್ಟಗೇರಿ, ಮುರ್ನಾಡು ನಗರ ವ್ಯಾಪ್ತಿಯ ವರೆಗೆ ಹಾಗೂ ಅಕ್ಟೋಬರ್ 21 ರಂದು ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 22 ರ ಬೆಳಗ್ಗೆ 10 ಗಂಟೆಯವರೆಗೆ ಗೋಣಿಕೊಪ್ಪ ನಗರ ಹಾಗೂ ಅದರ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಪೆÇನ್ನಂಪೇಟೆ ತಾಲ್ಲೂಕಿನಾದ್ಯಂತ ಮತ್ತು ವಿರಾಜಪೇಟೆ ಗ್ರಾಮಾಂತರ ಠಾಣಾ ಸರಹದ್ದಿನ ಅಮ್ಮತ್ತಿ, ಬಿಟ್ಟಂಗಾಲ, ಸಿದ್ಧಾಪುರ ರಾಣಾ ವ್ಯಾಪ್ತಿ, ಪಾಲಿಬೆಟ್ಟ ವ್ಯಾಪ್ತಿಯವರೆಗೆ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಯ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership programme (EP) ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್  ವಾಹನ ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ.

ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 03 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿ ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ  ಉದ್ದೇಶಿಸಲಾಗಿದೆ.

ಅರ್ಜಿ ಸಲ್ಲಿಸುವವರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 20 ರಿಂದ 45 ವರ್ಷದೊಳಗಿರಬೇಕು. ಅರ್ಜಿದಾರರು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಲಘ ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.2 ಲಕ್ಷ ಮೀರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷ ಮೀರಬಾರದು. ಅರ್ಜಿದಾರರು ಕೊಡಗು ಜಿಲ್ಲೆಯ ನಿವಾಸಿಯಾಗಿರಬೇಕು.  ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು. 

ಜಿಲ್ಲಾಮಟ್ಟದ ಪ್ರವಾಸೋದ್ಯಮ ಕಚೇರಿಯಿಂದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇತ್ತೀಚಿನ  ಭಾವಚಿತ್ರದೊಂದಿಗೆ ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು. ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಜಾತಿ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ. ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿ. ಖಾಯಂ ಲಘ ವಾಹನ ಚಾಲನಾ ಪರವಾನಗಿ ಪತ್ರದ ಪ್ರತಿ. ವಿದ್ಯಾರ್ಹತೆಯ ಬಗ್ಗೆ ಕನಿಷ್ಠ ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ/ ನಿಗಮ/ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣಿಕರಿಸಿ, ರೂ.50 ರ ಬೆಲೆಯ ಛಾಪಾ ಕಾಗದ ದಲ್ಲಿ ನಮೂನೆ-3ರಲ್ಲಿ ಪ್ರಮಾಣ ಪತ್ರವನ್ನು ಸಲ್ಲಿಸುವುದು. ಅರ್ಜಿದಾರನು ಮೇಲಿನ ಎಲ್ಲಾ ದಾಖಲಾತಿ ಸ್ವಯಂ ದೃಢೀಕರಿಸಿ ಸಲ್ಲಿಸತಕ್ಕದ್ದು.

ತರಬೇತಿಯನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಅಕ್ಟೋಬರ್, 23 ರವರೆಗೆ ವಿಸ್ತರಿಸಲಾಗಿದೆ. ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ ಅಕ್ಟೋಬರ್, 23 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ: 08272-200519 ಅಥವಾ ಈ-ಮೇಲ್ [email protected]  ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಶಶಿಧರ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular