HomeKarnatakaಇಬ್ಬರು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ಬಳ್ಳಾರಿ: ಇಬ್ಬರು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ನಗರದ ಮಿಲ್ಲರ್ ಪೇಟೆಯ ಕಾಲುವೆಯ ಬಳಿ ನಡೆದಿದೆ.

ತನ್ನ ಇಬ್ಬರು ಮಕ್ಕಳಾದ ಮೊಹಮ್ಮದ್ ಆಯಾನ್(3) ಮತ್ತು ಆಯಿಷಾ ಫಾತಿಮಾ(2) ಅವರ ಜೊತೆಗೆ ಕಾಲುವೆಗೆ ಆರಿ ತಾಯಿ ಲತೀಫಾ ಸಿಮ್ರಾನ್(29)  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳ ಜೊತೆಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕಾಲುವೆಯಲ್ಲಿ ತಾಯಿ ಲತೀಫಾ ಸಿಮ್ರಾನ್ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ಮುಂದುವರೆದಿದೆ. ಬಳ್ಳಾರಿ ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು. ಟೆಲಿ-ಮನಸ್ ಉಚಿತ ಸಹಾಯವಾಣಿ 14416 ಸಂಖ್ಯೆಗೆ ಕರೆ ಮಾಡಿ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಬಹುದು.)

ಆರಂಭಿಕ ಚಿಕಿತ್ಸೆ ಹಾಗೂ ಕುಟುಂಬದ ಬೆಂಬಲದಿಂದ ಮಾನಸಿಕ ಕಾಯಿಲೆ ಗುಣಮುಖ ಸಾಧ್ಯ

ಬಳ್ಳಾರಿ: ವ್ಯಕ್ತಿಯಲ್ಲಿ ಪದೇ ಪದೇ ಎದುರಾಗುವ ತೀವ್ರ ಸಂಕಷ್ಟಗಳು, ಅತಿಯಾದ ಮಾನಸಿಕ ಒತ್ತಡ ಹಾಗೂ ಮಿತಿಮೀರಿದ ಆಲೋಚನೆಗಳಿಂದ ಮಾನಸಿಕ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆರಂಭಿಕ ಹಂತದಲ್ಲಿಯೇ ರೋಗಿಯ ಮನಃಸ್ಥಿತಿಯನ್ನು ಅರ್ಥೈಸಿಕೊಂಡು, ಕುಟುಂಬದ ಸದಸ್ಯರ ಸಹಕಾರ ಮತ್ತು ಪ್ರೀತಿಯೊಂದಿಗೆ ಸೂಕ್ತ ಚಿಕಿತ್ಸೆ ಕೊಡಿಸಿದರೆ ಕಾಯಿಲೆಯನ್ನು ಬೇಗನೆ ಗುಣಪಡಿಸಬಹುದು ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿಯ ಅಧ್ಯಕ್ಷರಾದ ಮೋಹನ್ ಹೆಚ್.ಎ ಅವರು ಹೇಳಿದರು.

ನಗರದ ಬಿ.ಐ.ಟಿ.ಎಂ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಮಾನಸಿಕ ರೋಗಿಗಳನ್ನು ಮನೆಯಲ್ಲಿ ಇರಿಸಿಕೊಳ್ಳುವುದು ಅಪಾಯಕಾರಿ ಎಂಬ ತಪ್ಪು ಕಲ್ಪನೆ ಇತ್ತು. ಆದರೆ ಕಳೆದ ಮೂರು ದಶಕಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಆದ ಅಭೂತಪೂರ್ವ ಸಂಶೋಧನೆಗಳು ಮತ್ತು ಸುಧಾರಿತ ಚಿಕಿತ್ಸಾ ಪದ್ಧತಿಗಳಿಂದಾಗಿ ರೋಗಿಗಳಿಗೆ ಮನೆಯಲ್ಲಿಯೇ ಆರೈಕೆ ಹಾಗೂ ಚಿಕಿತ್ಸೆ ನೀಡಲು ಸಾಧ್ಯವಿದೆ. ಪ್ರತಿಯೊಬ್ಬರೂ ಆತ್ಮಸ್ಥೈರ್ಯ ಮತ್ತು ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳುವ ಮೂಲಕ ಇಂತಹ ಸಮಸ್ಯೆಗಳಿಂದ ಹೊರಬರಬಹುದು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಮಾತನಾಡಿ, ವಿದ್ಯಾರ್ಥಿಗಳು ಅನಗತ್ಯ ಒತ್ತಡ ಹಾಗೂ ಖಿನ್ನತೆಗೆ ಒಳಗಾಗಬಾರದು. ಯಾವುದೇ ಮಾನಸಿಕ ಸಮಸ್ಯೆ ಅಥವಾ ಸಂಕಷ್ಟಗಳಿದ್ದಾಗ ಮುಕ್ತವಾಗಿ ಪಾಲಕರೊಂದಿಗೆ ಮನದಾಳದ ನೋವನ್ನು ಹಂಚಿಕೊಂಡು ಮಾನಸಿಕವಾಗಿ ಸದೃಢರಾಗಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ವೀರೇಂದ್ರ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಾಮಾನ್ಯವಾಗಿ 15 ರಿಂದ 25 ವರ್ಷದ ಯುವಜನತೆಯಲ್ಲಿ ಗ್ರಾಮೀಣ-ನಗರ ಅಥವಾ ಬಡವ-ಶ್ರೀಮಂತ ಎಂಬ ಭೇದವಿಲ್ಲದೆ ಮಾನಸಿಕ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕಾಗಿ ಉಚಿತ ಆಪ್ತ ಸಮಾಲೋಚನೆ ಮತ್ತು ಔಷಧೋಪಚಾರಗಳು ಲಭ್ಯವಿವೆ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಟೆಲಿ-ಮನಸ್ ಉಚಿತ ಸಹಾಯವಾಣಿ 14416 ಸಂಖ್ಯೆಗೆ ಕರೆ ಮಾಡಿ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಬಹುದು ಎಂದು ತಿಳಿಸಿದರು.

ಮನೋರೋಗ ತಜ್ಞ ಡಾ. ನಂದಕಿಶೋರ್ ಎನ್.ಬಿ ಅವರು ಮಾತನಾಡಿ, ಮಾನಸಿಕ ಸಮಸ್ಯೆಯು ವ್ಯಕ್ತಿಯ ಆಲೋಚನೆ, ಭಾವನೆ ಹಾಗೂ ಗ್ರಹಿಕೆಯನ್ನು ಬಾಧಿಸುತ್ತದೆ. ಕಾರಣವಿಲ್ಲದೆ ಅತಿಯಾದ ಕೋಪ, ದುಃಖ, ಅತಿಯಾದ ನಗು ಅಥವಾ ಅಳು ಮುಂತಾದ ಲಕ್ಷಣಗಳು ಕಂಡುಬರುತ್ತವೆ. ಲಕ್ಷಣಗಳು ಕಂಡ ಕೆಲವೇ ವಾರಗಳಲ್ಲಿ ಮಾತ್ರೆ ಅಥವಾ ಚುಚ್ಚುಮದ್ದಿನ ಚಿಕಿತ್ಸೆ ಆರಂಭಿಸಿದರೆ ಕಾಯಿಲೆಯನ್ನು ಶೀಘ್ರವೇ ನಿಯಂತ್ರಿಸಬಹುದು. ಪ್ರಸ್ತುತ ‘ಮನೋಚೈತನ್ಯ’ ಕಾರ್ಯಕ್ರಮದಡಿ ಪ್ರತಿ ಮಂಗಳವಾರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಉಚಿತ ತಪಾಸಣೆ ಮತ್ತು ಆಪ್ತ ಸಮಾಲೋಚನೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ರಕ್ಷಣೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿಶ್ವ ದೃಷ್ಟಿ ದಿನದ ಅಂಗವಾಗಿ ಡಾ. ಅಪರ್ಣಾ ಅವರು ಕಣ್ಣಿನ ಆರೈಕೆ ಹಾಗೂ ನೇತ್ರದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಐ.ಟಿ.ಎಂ ಕಾಲೇಜಿನ ಅಧ್ಯಕ್ಷ ಡಾ. ಯಶವಂತ್ ಭೂಪಾಲ್ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಲಕಾನಂದ ಡಿ. ಮಳಗಿ, ಬಿ.ಐ.ಟಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಯಡವಳ್ಳಿ ಬಸವರಾಜ್ ಭಾಗವಹಿಸಿದ್ದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಎಸ್. ಕರ್ಜಿಗಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಾಂತಕುಮಾರ್ ಹೆಚ್., ಶರ್ಮಾಸ್ ವಲಿ, ರಂಜಿತಾ ಜಿ., ಸಾಹೇರಾ ಬಾನು, ನಿರಂಜನ, ವೀರಭದ್ರಪ್ಪ, ರಮೇಶ್ ಬಾಬು ಸೇರಿದಂತೆ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular