HomeJobsಉದ್ಯೋಗಾಂಕ್ಷಿಗಳ ಗಮನಕ್ಕೆ ; ಅ.17 ರಂದು ನೇರ ಸಂದರ್ಶನ

ಉದ್ಯೋಗಾಂಕ್ಷಿಗಳ ಗಮನಕ್ಕೆ ; ಅ.17 ರಂದು ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಎಸ್‌ಬಿಐ ಲೈಫ್ ಇನ್ಶೂರೆನ್ಸ್ ಕಂಪೆನಿ ಲಿಮಿಟೆಡ್ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಉಚಿತ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಎಸ್‌ಬಿಐ ಲೈಫ್ ಇನ್ಶೂರೆನ್ಸ್ ಕಂಪೆನಿ ಲಿಮಿಟೆಡ್ ಸಂಸ್ಥೆಯು ತಮ್ಮಲ್ಲಿ ಖಾಲಿ ಇರುವ 20 ಕ್ಕೂ ಹೆಚ್ಚು ಡೆವಲಪ್ಮೆಂಟ್ ಮ್ಯಾನೇಜರ್ (ಟೆಲಿಕಾಲರ್) ಹಾಗೂ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳುವರು.

ವಿದ್ಯಾರ್ಹತೆಯು ಪಿಯುಸಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದ ಹಾಗೂ 38 ವರ್ಷದ ಒಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದೆ. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕವಿರುವುದಿಲ್ಲ (ಉಚಿತ ಪ್ರವೇಶ).

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ಸ್ವ-ವಿವರಗಳ ಪ್ರತಿಯೊಂದಿಗೆ ಕೆಳಗಿನ ವಿಳಾಸದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ವಿಳಾಸ:

ಎಸ್‌ಬಿಐ ಲೈಫ್ ಇನ್ಶೂರೆನ್ಸ್ ಕಂಪೆನಿ ಲಿಮಿಟೆಡ್ ಕಚೇರಿ, ಜಿ.ಎಸ್.ಆರ್ ಬಿಲ್ಡಿಂಗ್, ಪಾರ್ವತಿ ನಗರ ಮುಖ್ಯ ರಸ್ತೆ, ಬಳ್ಳಾರಿ. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ:7619207762, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾರೂ ಗುಳೆ ಹೋಗಬೇಡಿ, ಗ್ರಾಮದಲ್ಲೇ ನಿರಂತರ ಉದ್ಯೋಗ: ಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೈರ್ ಭರವಸೆ

ಬಳ್ಳಾರಿ : ಗ್ರಾಮೀಣ ಭಾಗದ ಕೂಲಿಕಾರರು ಉದ್ಯೋಗ ಅರಸಿ ಬೇರೆ ಊರುಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ನಿರಂತರವಾಗಿ ಕೆಲಸ ಒದಗಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೈರ್ ಅವರು ತಿಳಿಸಿದರು.

ಬಳ್ಳಾರಿ ತಾಲೂಕಿನ ಹಲಕುಂದಿ ಮತ್ತು ಸಂಜೀವರಾಯನ ಕೋಟೆ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಕೂಲಿಕಾರರೊಂದಿಗೆ ನೇರ ಸಂವಾದ ನಡೆಸಿದರು.

ಗುಳೆ ಹೋದರೆ ಕುಟುಂಬಕ್ಕೆ ಸಂಕಷ್ಟ

ಹಲಕುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಳ್ಳಿ ತಾಂಡಾದ ಗುಡ್ಡದ ಬಳಿ ನಡೆಯುತ್ತಿರುವ ಟ್ರೆಂಚ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಿಇಒ, ಅಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರು ಹಾಗೂ ಮೇಟಿಗಳ ಜತೆ ಸಮಾಲೋಚನೆ ನಡೆಸಿದರು. “ಬೇರೆ ಊರುಗಳಿಗೆ ಗುಳೆ ಹೋದರೆ ಮಕ್ಕಳ ವಿದ್ಯಾಭ್ಯಾಸ ಮೊಟಕುಗೊಳ್ಳುತ್ತದೆ, ಮಹಿಳೆಯರಿಗೆ ಸುರಕ್ಷತೆ ಇರುವುದಿಲ್ಲ ಹಾಗೂ ವಯಸ್ಸಾದ ಪೋಷಕರ ಪಾಲನೆ-ಪೋಷಣೆಗೆ ತೊಂದರೆಯಾಗುತ್ತದೆ. ಹಾಗಾಗಿ ಯಾರೂ ಗ್ರಾಮ ಬಿಟ್ಟು ಹೋಗಬಾರದು. ಕೂಲಿಕಾರರಿಗೆ ಗ್ರಾಮ ಪಂಚಾಯತಿಯಿಂದಲೇ ನಿರಂತರವಾಗಿ ಉದ್ಯೋಗ ಕಲ್ಪಿಸಬೇಕು” ಎಂದು ಸ್ಥಳದಲ್ಲಿದ್ದ ಪಿಡಿಒ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿವಿಧ ಕಾಮಗಾರಿಗಳ ಪರಿಶೀಲನೆ:*

ಎಸ್.ಜಿ. ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹೊಸ ಕೆರೆ ಕಾಮಗಾರಿಯನ್ನು ಸಿಇಒ ಪರಿಶೀಲಿಸಿದರು. ಬಳಿಕ ಮಿಂಚೇರಿ ಗ್ರಾಮದ 2ನೇ ವಾರ್ಡಿನಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಖುದ್ದು ವೀಕ್ಷಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು. ಇದೇ ವೇಳೆ ಗ್ರಾಮದಲ್ಲಿ ತ್ಯಾಜ್ಯ ವಿಂಗಡಣಾ ಘಟಕದಲ್ಲೇ ಕಸವನ್ನು ಸರಿಯಾಗಿ ಬೇರ್ಪಡಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕದಂತೆ ನಿಗಾ ವಹಿಸಿ ಗ್ರಾಮದ ಸ್ವಚ್ಛತೆ ಕಾಪಾಡಬೇಕು ಎಂದು ವಾಹನ ಚಾಲಕರು ಮತ್ತು ಪಿಡಿಒ ಅವರಿಗೆ ನಿರ್ದೇಶನ ನೀಡಿದರು.

ಆಸ್ಪತ್ರೆ, ಗ್ರಂಥಾಲಯ, ಅಂಗನವಾಡಿಗೆ ಭೇಟಿ:*

ಗ್ರಾಮದ ಆಯುಷ್ಮಾನ್ ಭಾರತ್ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿದರಲ್ಲದೆ, ತಪಾಸಣೆಗೆ ಬಂದಿದ್ದ ಸಾರ್ವಜನಿಕರ ಆರೋಗ್ಯ ವಿಚಾರಿಸಿದರು. ನಂತರ ಸ್ಥಳೀಯ ಗ್ರಂಥಾಲಯಕ್ಕೆ ತೆರಳಿ, ಅಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳೊಂದಿಗೆ ಉತ್ಸಾಹದಿಂದ ಸಂವಾದ ನಡೆಸಿದರು.

ಗ್ರಾಮದ ಅಂಗನವಾಡಿ ಕೇಂದ್ರಕ್ಕೂ ಭೇಟಿ ನೀಡಿ ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ ಹಾಗೂ ಅಡುಗೆ ಕೋಣೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಬಾರಕೇರ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಆರ್.ಕೆ. ಬಸವರಾಜ್, ಟಿಐಇಸಿ ರಮೇಶ್, ಟಿಸಿ ವಿಜಯಮಹಾಂತೇಶ್, ಸಬ್ ಜಾನ್, ಶಾವಲಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ತಾಂತ್ರಿಕ ಸಂಯೋಜಕರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular