HomeKarnatakaಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಹೆಡ್ ಕಾನ್ಸ್ಟೇಬಲ್, ಪುತ್ರಿ ಸ್ಥಳದಲ್ಲೇ ಸಾವು

ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಹೆಡ್ ಕಾನ್ಸ್ಟೇಬಲ್, ಪುತ್ರಿ ಸ್ಥಳದಲ್ಲೇ ಸಾವು

ಬೆಳಗಾವಿ: ಬೈಕ್‌ ಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹಾಗೂ ಅವರ ಪುತ್ರಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಸಂಭವಿಸಿದೆ.

ಮೃತರನ್ನು ನಿಪ್ಪಾಣಿ ಟೌನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಪುಂಡಲಿಕ ಹಟ್ಟಿ (50) ಹಾಗೂ ಅವರ ಪುತ್ರಿ ನಿಖಿತಾ (24) ಎಂದು ಗುರುತಿಸಲಾಗಿದೆ. ತಂದೆ-ಮಗಳು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಹಿಂಬದಿಯಿಂದ ಬಂದ ಲಾರಿಯ ಡಿಕ್ಕಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿಯ ಪ್ರಕಾರ, ಪುಂಡಲಿಕ ಹಟ್ಟಿ ಅವರು ತಮ್ಮ ಪುತ್ರಿ ನಿಖಿತಾ ಅವರೊಂದಿಗೆ ಬೈಕ್‌ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿಯೊಂದು ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ತಂದೆ-ಮಗಳು ರಸ್ತೆಗೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

ಘಟನೆ ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಂದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50,000 ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ವಧು, ವರರು ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ ಗಳು, ದೇವಸ್ಥಾನ ಟ್ರಸ್ಟ್ ಗಳು, ಸಂಘ, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 5,000 ನೀಡಲಾಗುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವುದು. ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.

ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 5 ಜೋಡಿಗಳು ಭಾಗವಹಿಸಿರತಕ್ಕದ್ದು, ವಧುವಿಗೆ ಕನಿಷ್ಠ 18 ವರ್ಷದಿಂದ 42 ವರ್ಷಗಳು, ವರನಿಗೆ ಕನಿಷ್ಠ 21 -45 ವರ್ಷ ವಯಸ್ಸು ಆಗಿರತಕ್ಕದ್ದು. ವಧುವರರ ವಾರ್ಷಿಕ ಆದಾಯವು ರೂ. 2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ 5 ಲಕ್ಷ ರೂ. ಮೀರತಕ್ಕದ್ದಲ್ಲ. ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡೊಲಾಗುವುದು. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ

ಆಸಕ್ತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220206ನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular