HomeKarnatakaಕಾರಾಗೃಹಗಳ ಮೂಲಸೌಕರ್ಯ ಅಭಿವೃದ್ಧಿ, ಕೈದಿಗಳ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಣೆಗೆ ಮಹತ್ವದ ಕ್ರಮ

ಕಾರಾಗೃಹಗಳ ಮೂಲಸೌಕರ್ಯ ಅಭಿವೃದ್ಧಿ, ಕೈದಿಗಳ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಣೆಗೆ ಮಹತ್ವದ ಕ್ರಮ

ಬೆಂಗಳೂರು: ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿಯ 5ನೇ ಸಭೆ ನಡೆಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಡಳಿಯನ್ನು ಸ್ವಾವಲಂಬಿ ಮತ್ತು ಸದೃಢವನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ.

ಪ್ರಮುಖವಾಗಿ ಕೈದಿಗಳ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಣೆ: ಕಾರಾಗೃಹಗಳಲ್ಲಿ ತಯಾರಾಗುವ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ, ಆಕರ್ಷಕ ಪ್ಯಾಕೇಜಿಂಗ್‌ನೊಂದಿಗೆ ಮಾರುಕಟ್ಟೆಗೆ ಪರಿಚಯಿಸುವುದು.

ಕೌಶಲ್ಯಾಭಿವೃದ್ಧಿ ಮತ್ತು ಪುನರ್ವಸತಿ: ಕೈದಿಗಳಿಗೆ ಆಧುನಿಕ ವೃತ್ತಿಪರ ತರಬೇತಿ ನೀಡಿ, ಅವರ ಕೌಶಲಗಳನ್ನು ಅಭಿವೃದ್ಧಿಪಡಿಸಲು ಒತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾನಸಿಕ ಪರಿವರ್ತನೆಗೆ ಆದ್ಯತೆ: ಕಲಾ ಚಿಕಿತ್ಸಾ ಕಾರ್ಯಕ್ರಮಗಳು, ಸ್ವಯಂಸೇವಾ ಸಂಸ್ಥೆಗಳ ಸಹಯೋಗ ಮತ್ತು ವ್ಯಸನಮುಕ್ತ ಕೇಂದ್ರಗಳ ಸ್ಥಾಪನೆ.

ಮೂಲಸೌಕರ್ಯ ಮತ್ತು ಉತ್ಪಾದನೆಗೆ ಉತ್ತೇಜನ: ಕಾರಾಗೃಹಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಿ, ಉತ್ಪಾದನೆ ಹಾಗೂ ಮಾರಾಟ ಚಟುವಟಿಕೆಗಳನ್ನು ವಿಸ್ತರಿಸಲು ಕ್ರಮ.

ಕೈದಿಗಳ ಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತು ಸ್ವಾವಲಂಬನೆಗೆ ಅವಕಾಶ ಕಲ್ಪಿಸುವುದರ ಜೊತೆಗೆ, ಉತ್ಪನ್ನಗಳ ಮಾರಾಟದ ಮೂಲಕ ಮಂಡಳಿಯ ಆದಾಯ ಹೆಚ್ಚಿಸಿ ಆರ್ಥಿಕವಾಗಿ ಸ್ವಾವಲಂಬಿಯಾಗಿಸಲು ಅಗತ್ಯ ಯೋಜನೆಗಳನ್ನು ರೂಪಿಸಲು ಸೂಚಿಸಲಾಗಿದೆ.

ಭಿಕ್ಷಾಟನೆಗೆ ಮಕ್ಕಳ ಬಳಕೆ ವಿರುದ್ಧ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ ಅಪ್ರಾಪ್ತ ವಯಸ್ಸಿನ 13 ಮಕ್ಕಳ ರಕ್ಷಣೆ

ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಹೊರರಾಜ್ಯಗಳಿಂದ ಅಪ್ರಾಪ್ತ ಮಕ್ಕಳನ್ನು ಕರೆತಂದು ಟ್ರಾಫಿಕ್ ಸಿಗ್ನಲ್‌ ಗಳಲ್ಲಿ ಭಿಕ್ಷಾಟನೆಗೆ ತಳ್ಳುತ್ತಿದ್ದ ಅಮಾನವೀಯ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಂಟಿ ಕಾರ್ಯಾಚರಣೆ ಅತ್ಯಂತ ಶ್ಲಾಘನೀಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

ಸಿಸಿಬಿ ಪಡೆ ದಾಳಿ ನಡೆಸಿ 13 ಅಪ್ರಾಪ್ತ ಮಕ್ಕಳನ್ನು ರಕ್ಷಿಸಿ, ಈ ದಂಧೆಯಲ್ಲಿದ್ದ ಹೊರರಾಜ್ಯದ 4 ಮಂದಿ ಆರೋಪಿಗಳನ್ನು ಬಂಧಿಸಿದೆ. ರಕ್ಷಿಸಲ್ಪಟ್ಟ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ  ಹಸ್ತಾಂತರಿಸಿ ಸುರಕ್ಷಿತ ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗಿದೆ.

ಮಕ್ಕಳ ಸುರಕ್ಷತೆ ಮತ್ತು ಪ್ರತಿಯೊಂದು ಮಗುವಿಗೂ ಭದ್ರವಾದ, ಹಸನಾದ ಬಾಲ್ಯ ರೂಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳನ್ನು ಭಿಕ್ಷಾಟನೆಗೆ ಅಥವಾ ಕಾನೂನುಬಾಹಿರ ಕೆಲಸಗಳಿಗೆ ಬಳಸಿಕೊಳ್ಳುವ ಯಾವುದೇ ಜಾಲಗಳ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಯಲಿದೆ.

ಸಾರ್ವಜನಿಕರಲ್ಲಿ ವಿನಂತಿ, ನಿಮ್ಮ ಸುತ್ತಮುತ್ತ ಮಕ್ಕಳ ಶೋಷಣೆ ಅಥವಾ ಭಿಕ್ಷಾಟನೆ ಕಂಡುಬಂದಲ್ಲಿ ತಕ್ಷಣವೇ 1098 ಅಥವಾ 112 ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಕೋರಿದ್ದಾರೆ.

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾನ, ಮತ ಎಣಿಕೆ ದಿನಗಳಂದು ರಜೆ ಘೋಷಣೆ

ಕೊಪ್ಪಳ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ-2026ರ ಹಿನ್ನೆಲೆಯಲ್ಲಿ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಜೆ ಘೋಷಿಸಿ ಚುನಾವಣಾಧಿಕಾರಿಗಳು ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ಪ್ರಕಟಿಸಿರುವ ವೇಳಾಪಟ್ಟಿಯಂತೆ, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನವು 2026ರ ಅಕ್ಟೋಬರ್ 23ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮತ ಎಣಿಕೆ ಕಾರ್ಯವು ಅಕ್ಟೋಬರ್ 27ರಂದು ಬೆಳಿಗ್ಗೆ 8 ಗಂಟೆಯಿಂದ ಕಲಬುರಗಿ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಭಾಸ್ಕರ ಭವನದಲ್ಲಿ (Mathematics Department Bhaskar Hall, Gulbarga University) ಜರುಗಲಿದೆ.

ಮತದಾನ ಮತ್ತು ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದ್ದು, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ನೋಂದಾಯಿತ ಶಿಕ್ಷಕ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅನುಕೂಲವಾಗುವಂತೆ ಮತದಾನದ ದಿನದಂದು (ಅ. 23ರಂದು) ರಜೆ ನೀಡಲಾಗಿದೆ.

ಅದೇ ರೀತಿ ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರವಾಗಿರುವ ಕಲಬುರಗಿ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಭಾಸ್ಕರ ಭವನದ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಮತ ಎಣಿಕೆಯ ದಿನದಂದು (ಅ. 27ರಂದು) ರಜೆ ಘೋಷಿಸಲಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular