HomeKarnatakaಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾನ, ಮತ ಎಣಿಕೆ ದಿನಗಳಂದು ರಜೆ ಘೋಷಣೆ, ಮದ್ಯ ಮಾರಾಟ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾನ, ಮತ ಎಣಿಕೆ ದಿನಗಳಂದು ರಜೆ ಘೋಷಣೆ, ಮದ್ಯ ಮಾರಾಟ ನಿಷೇಧ

ಕೊಪ್ಪಳ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ-2026ರ ಹಿನ್ನೆಲೆಯಲ್ಲಿ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಜೆ ಘೋಷಿಸಿ ಚುನಾವಣಾಧಿಕಾರಿಗಳು ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ಪ್ರಕಟಿಸಿರುವ ವೇಳಾಪಟ್ಟಿಯಂತೆ, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನವು 2026ರ ಅಕ್ಟೋಬರ್ 23ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮತ ಎಣಿಕೆ ಕಾರ್ಯವು ಅಕ್ಟೋಬರ್ 27ರಂದು ಬೆಳಿಗ್ಗೆ 8 ಗಂಟೆಯಿಂದ ಕಲಬುರಗಿ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಭಾಸ್ಕರ ಭವನದಲ್ಲಿ (Mathematics Department Bhaskar Hall, Gulbarga University) ಜರುಗಲಿದೆ.

ಮತದಾನ ಮತ್ತು ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದ್ದು, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ನೋಂದಾಯಿತ ಶಿಕ್ಷಕ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅನುಕೂಲವಾಗುವಂತೆ ಮತದಾನದ ದಿನದಂದು (ಅ. 23ರಂದು) ರಜೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರವಾಗಿರುವ ಕಲಬುರಗಿ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಭಾಸ್ಕರ ಭವನದ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಮತ ಎಣಿಕೆಯ ದಿನದಂದು (ಅ. 27ರಂದು) ರಜೆ ಘೋಷಿಸಲಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಅ. 21 ರಿಂದ ಅ. 23 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಕೊಪ್ಪಳ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ-2026ರ ಮತದಾನವು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಯುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಅಕ್ಟೋಬರ್ 21ರ ಅಪರಾಹ್ನ 4 ಗಂಟೆಯಿಂದ ಅ. 23ರ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ಹಾಗೂ ಕರ್ನಾಟಕ ಅಬಕಾರಿ ಪರವಾನಿಗೆಗಳ ನಿಯಮಾವಳಿಗಳ ಅನ್ವಯ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅ‌ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ನಿಯಮಾವಳಿಯಂತೆ ಮತದಾನ ಮುಕ್ತಾಯವಾಗುವ 48 ಗಂಟೆಗಳ ಪೂರ್ವದಿಂದ ಹಿಡಿದು ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಅಬಕಾರಿ ವೃತ್ತ ನಿರೀಕ್ಷಕರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಥವಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular