ಬೆಂಗಳೂರು: ತೋಟಗಾರಿಕೆ ಇಲಾಖೆಯ ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ಅಧಿಕಾರಿ ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಅಂಕಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಫಲಿತಾಂಶ ಪ್ರಕಟಿಸಲಾಗಿದೆ. ಕನಿಷ್ಠ 35 ಅಂಕ ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದವರನ್ನು ಪರಿಗಣಿಸಿ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಮಾಹಿತಿ
ತೋಟಗಾರಿಕೆ ಇಲಾಖೆಯ ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ಅಧಿಕಾರಿ ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕರು ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ತೋಟಗಾರಿಕೆ ಇಲಾಖೆಯ ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ಅಧಿಕಾರಿ ಮತ್ತು ಸಹಾಯಕ ತೋಟಗಾರಿಕೆ ನಿರ್ದೇಶಕರು ಹುದ್ದೆಗಳ ನೇಮಕಾತಿ ಸಂಬಂಧ ১৯০৮ 28-09-2026, 29-09-2026 2 30-09-2026 ಉತ್ತರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ದಿನಾಂಕ 30-9-2026 ರಂದು ಪ್ರಕಟಿಸಲಾಗಿದ್ದು, ಸದರಿ ಕೀ ಉತ್ತರಗಳಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿ ಮೂಲಕ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ 07-10-2026 ರಂದು ಪ್ರಕಟಿಸಲಾಗಿರುತ್ತದೆ.
ಪರಿಷ್ಕೃತ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ៥ ៩ ៩ 07.10.2026 ໐ ໑໖ 2 09.10.2026 25 11.00 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ತಾತ್ಕಾಲಿಕ ಫಲಿತಾಂಶಕ್ಕೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ವೃಂದವಾರು ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 14.10.2026 ರಂದು ಪ್ರಕಟಿಸಲಾಗಿದೆ. ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕನಿಷ್ಠ 35% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಿ ಅಂತಿಮ ಅಂಕಪಟ್ಟಿಯನ್ನು ದಿನಾಂಕ 15.10.2026 ರಂದು ಪ್ರಕಟಿಸಿ ತೋಟಗಾರಿಕೆ ಇಲಾಖೆಗೆ ಸದರಿ ಅಂತಿಮ ಅಂಕಪಟ್ಟಿಯನ್ನು ಹಸ್ತಾಂತರಿಸಲಾಗುವುದು ಹಾಗೂ ನೇಮಕಾತಿ ಪ್ರಾಧಿಕಾರದಿಂದ ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸುವರು.
ವಸತಿ ನಿಲಯಗಳ ನೋಂದಣಿಗೆ ಆನ್ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ನಿಲಯಗಳ ನೋಂದಣಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅನ್ವಯಿಸುವ ವಸತಿ ನಿಲಯಗಳು: ಸರ್ಕಾರಿ, ಸರ್ಕಾರೇತರ, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ ಹಾಗೂ ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ ಮತ್ತು ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯಗಳಿಗೆ (ಸ್ಟ್ಯಾಂಡ್-ಅಲೋನ್ ಹಾಸ್ಟೆಲ್ ಗಳು, ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳು ಮತ್ತು ವಸತಿ ಶಾಲೆಗಳು) ಈ ನಿಯಮ ಅನ್ವಯಿಸುತ್ತದೆ.
ಅಧಿಕೃತ ವೆಬ್ಸೈಟ್ https://shivamogga.nic.in ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಸಂಬಂಧಿತ ಕಚೇರಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮಾರ್ಗಸೂಚಿಯನ್ವಯ 31/10/2026 ರೊಳಗೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರನ್ನು ಅಥವಾ ದೂರವಾಣಿ ಸಂಖ್ಯೆ 08182-295514 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

