HomeKarnatakaಬೆಂಗಳೂರಿಗರಿಗೆ ರಿಲೀಫ್: ಮನೆ ಮುಂದೆ ವಾಹನ ನಿಲ್ಲಿಸುವ ಜಿಬಿಎ ಪಾರ್ಕಿಂಗ್ ನೀತಿಯ ಪ್ರಸ್ತಾವನೆಗೆ ನಗರಾಭಿವೃದ್ಧಿ ಇಲಾಖೆ...

ಬೆಂಗಳೂರಿಗರಿಗೆ ರಿಲೀಫ್: ಮನೆ ಮುಂದೆ ವಾಹನ ನಿಲ್ಲಿಸುವ ಜಿಬಿಎ ಪಾರ್ಕಿಂಗ್ ನೀತಿಯ ಪ್ರಸ್ತಾವನೆಗೆ ನಗರಾಭಿವೃದ್ಧಿ ಇಲಾಖೆ ತಡೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ಕೊಂಚ ರಿಲೀಫ್ ಸುದ್ದಿ. ಮನೆ ಮುಂದೆ ಸ್ವಂತ ವಾಹನ ನಿಲ್ಲಿಸುವುದಕ್ಕೂ ಶುಲ್ಕ ವಿಧಿಸುವ ಜಿಬಿಎ ಪಾರ್ಜಿಂಗ್ ನೀತಿಗೆ ಸಧ್ಯ ಬ್ರೇಕ್ ಬಿದ್ದಿದೆ. ಇದು ಜನರನ್ನು ನಿರಾಳರನ್ನಾಗಿ ಮಾಡಿದೆ.

ಬೆಂಗಳೂರಿನಲ್ಲಿ ಇನ್ಮುಂದೆ ಮನೆ ಮುಂದೆ ಸ್ವಂತ ವಾಹನ ನಿಲ್ಲಿಸುವುದಕ್ಕೂ ವಾರ್ಷಿಕ ಶುಲ್ಕ ವಿಧಿಸುವುದಾಗಿ ಜಿಬಿಎ ಹೇಳಿತ್ತು. ಈ ನಿಟ್ಟಿನಲ್ಲಿ ಜಿಬಿಎ ಪಾರ್ಕಿಂಗ್ ನೀತಿಯ ಪ್ರಸ್ತಾವನೆ ಸಲ್ಲಿಸಿತ್ತು. ಜಿಬಿಎ ಪಾರ್ಕಿಂಗ್ ನೀತಿಯ ಪ್ರಸ್ತಾವನೆಗೆ ನಗರಾಭಿವೃದ್ಧಿ ಇಲಾಖೆ ತಡೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರಿಂದ ತೀವ್ರ ವಿರೋಧ ಮತ್ತು ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಬೆಂಗಳೂರಿನ ವಾಹನ ಮಾಲೀಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ಸಂಚಾರ ದಟ್ಟಣೆ ಮತ್ತು ಅನಿಯಂತ್ರಿತ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಬಿಎ ಹೊಸ ಪಾರ್ಕಿಂಗ್ ನೀತಿಯನ್ನು ರೂಪಿಸಿತ್ತು. ಈ ನೀತಿಯಲ್ಲಿ ಮನೆಗಳ ಮುಂದೆ ವಾಹನ ನಿಲುಗಡೆಗೂ ವಾರ್ಷಿಕ ಶುಲ್ಕ ವಿಧಿಸುವ ಪ್ರಸ್ತಾವನೆ ಸೇರಿಸಲಾಗಿತ್ತು. ಮನೆ ಮುಂದೆ ವಾಹನ ನಿಲ್ಲಿಸಲು ಸಾವಿರಾರು ರೂಪಾಯಿ ಪಾವತಿಸಬೇಕಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿತ್ತು.

ಈ ನೀತಿಯ ಕುರಿತು ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಇಲಾಖೆಗೆ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು.

ಬೆಲೆ ಏರಿಕೆ, ಆಸ್ತಿ ತೆರಿಗೆ ಮತ್ತು ವಿದ್ಯುತ್ ದರಗಳ ಹೆಚ್ಚಳದಿಂದ ಈಗಾಗಲೇ ಆರ್ಥಿಕ ಒತ್ತಡ ಎದುರಿಸುತ್ತಿರುವ ಜನರಿಗೆ ಮನೆ ಮುಂದೆ ವಾಹನ ನಿಲ್ಲಿಸುವುದಕ್ಕೂ ಶುಲ್ಕ ವಿಧಿಸುವುದು ಸರಿಯಲ್ಲ ಎಂಬ ಆಕ್ಷೇಪ ವ್ಯಕ್ತವಾಗಿತ್ತು. ಸಾರ್ವಜನಿಕರ ಈ ವಿರೋಧದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಪಾರ್ಕಿಂಗ್ ನೀತಿಯ ಪ್ರಸ್ತಾವನೆಗೆ ಸದ್ಯಕ್ಕೆ ತಡೆ ನೀಡಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ, ಇಂತಹ ನೀತಿಯ ಅನುಷ್ಠಾನವು ಸಾರ್ವಜನಿಕರ ಪ್ರತಿಕ್ರಿಯೆ ಮತ್ತು ರಾಜಕೀಯ ಚರ್ಚೆಗೆ ಕಾರಣವಾಗಬಹುದು ಎಂಬ ವಿಶ್ಲೇಷಣೆಯೂ ಇದೆ. ಆದರೆ ಪ್ರಸ್ತಾವನೆಗೆ ತಡೆ ನೀಡಿರುವುದಕ್ಕೆ ಚುನಾವಣೆಯೇ ಕಾರಣ ಎಂಬುದನ್ನು ಅಧಿಕೃತವಾಗಿ ದೃಢಪಡಿಸಲಾಗಿಲ್ಲ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಸಾರ್ವಜನಿಕರಿಗೆ ಹೆಚ್ಚುವರಿ ಆರ್ಥಿಕ ಹೊರೆ ಆಗದಂತೆ ವ್ಯವಸ್ಥೆ ರೂಪಿಸುವ ಅಗತ್ಯವಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular