HomeKarnatakaಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬಂದ್: ಪಾರ್ಕಿಂಗ್ ವ್ಯವಸ್ಥೆಯಲ್ಲಿಯೂ ಬದಲಾವಣೆ

ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬಂದ್: ಪಾರ್ಕಿಂಗ್ ವ್ಯವಸ್ಥೆಯಲ್ಲಿಯೂ ಬದಲಾವಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ವೆಸ್ಟ್​ ಇಂಡೀಸ್​ ನಡುವೆ ಟಿ20 ಪಂದ್ಯ ಹಿನ್ನೆಲೆಯಲ್ಲಿ ಕೆಲ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಹನಗಳ ನಿಲುಗಡೆಗೆ ನಿಷೇಧಿಸಿರುವ ರಸ್ತೆಗಳು:

​ಕ್ವೀನ್ಸ್ ರಸ್ತೆಯ ಎರಡು ಬದಿಯಲ್ಲಿ, ಬಾಲೇಕ್ಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿ.ಟಿ.ಓ ಜಂಕ್ಷನ್​​ವರೆಗೆ

​ಎಂ.ಜಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಅನಿಲ್‌ಕುಂಬ್ಳೆ ವೃತ್ತದವರೆಗೆ ಮತ್ತು ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ.

​ಲಿಂಕ್ ರಸ್ತೆ – ಎಂ.ಜಿ ರಸ್ತೆಯಿಂದ ಕ್ವೀನ್ಸ್ ರಸ್ತೆವರೆಗೆ

​ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ

​ಸೆಂಟ್ರಲ್ ಸ್ಕ್ವೇರ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.

​ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಮಣಿಪಾಲ್ ವೃತ್ತದವರೆಗೆ ಎರಡೂ ಕಡೆ,

ಕಾಮರಾಜ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಡಿಕನ್ಸನ್ ಜಂಕ್ಷನ್​​ವರೆಗೆ

​ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಆಶೀರ್ವಾದಂ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ

ಎಸ್.ಬಿ.ಐ ಜಂಕ್ಷನ್‌ನಿಂದ ಕ್ಯಾಶ್ ಫಾರ್ಮಸಿ ಜಂಕ್ಷನ್‌ವರೆಗೆ.

​ಮ್ಯೂಸಿಯಂ ಕ್ರಾಸ್ ರಸ್ತೆ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ

​ಕಸ್ತೂರಬಾ ರಸ್ತೆಯಲ್ಲಿ, ಹಡ್ಸನ್‌ ವೃತ್ತದಿಂದ ಕ್ವೀನ್ಸ್‌ವೃತ್ತದವರೆಗೆ

​ಕಬ್ಬನ್‌ಪಾರ್ಕ್ ಒಳಗಿನ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಜಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.

ವಾಹನ ಪಾರ್ಕಿಂಗ್ ವ್ಯವಸ್ಥೆ: (ಬೆಳಿಗ್ಗೆ 11-00 ರಿಂದ ರಾತ್ರಿ 09-00)

​ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ.ಸಿಟಿ ನಿಲುಗಡೆ ಸ್ಥಳ

​ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ.

​ಫ್ರೀಡಂ ಪಾರ್ಕ್ ಎಂ.ಎಲ್.ಸಿ.ಪಿ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ

​ಸೆಂಟ್ ಜೋಸೆಫ್ (ಯುರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ

​ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಗಿನ ಟೆನ್ನಿಸ್ ಕ್ಲಬ್ ರಸ್ತೆಯಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಪ್ರವೇಶಿಸಲು ಹಾಗೂ ಹೊರಗೆ ಹೋಗಲು ಅವಕಾಶ ಕಲ್ಪಿಸಿರುವ ಸ್ಥಳಗಳೆಂದರೆ ಗೇಟ್ ನಂ-1 ರಿಂದ ಗೇಟ್ ನಂ-3 ಮತ್ತು ಗೇಟ್ ನಂ ಇ-18, ಇ-19, ಇ-22 ಹಾಗೂ ಇ-23 ಕಬ್ಬನ್ ರಸ್ತೆಯಲ್ಲಿದ್ದು, ಈ ಗೇಟ್‌ಗಳ ಮುಖಾಂತರ ಪ್ರವೇಶಿಸಬಹುದಾಗಿದೆ .

​

ಗೇಟ್ ನಂ. ಇ-11 ರಿಂದ ಗೇಟ್ ನಂ ಇ-17 ರವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರವೇಶಿಸಬಹುದಾಗಿದೆ. ​ಕ್ವೀನ್ಸ್ ರಸ್ತೆಯಲ್ಲಿ ಗೇಟ್ ನಂ. ಇ-07 ಮತ್ತು ಇ-08 ರಲ್ಲಿ ಪ್ರವೇಶಿಸದ್ದು, ಗೇಟ್ ನಂ- ಇ-09, ಇ-9ಎ ಗೇಟ್‌ನಲ್ಲಿ ನಿರ್ಗಮಿಸಲು ಮಾತ್ರ ಅವಕಾಶವಿರುತ್ತದೆ. ಕ್ವೀನ್ಸ್ ರಸ್ತೆಯ ಗೇಟ್ ನಂ-210 ರಲ್ಲಿ ಆಟಗಾರರು, ಸಹ ಆಟಗಾರರು ಹಾಗೂ ಸ್ಟೇಡಿಯಂ ಅಧಿಕಾರಿಗಳು ಬಿ.ಸಿ.ಸಿ ಐ ರವರಿಗೆ ಅವಕಾಶವಿರುತ್ತದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular