HomeEntertainmentಬಾಕ್ಸ್‌ ಆಫೀಸ್‌ನಲ್ಲಿ ಮಂಕಾದ ನಯ್ಯಿ ನವೇಲ್ಲಿ: ಮೊದಲ ದಿನದ ಜಾಗತಿಕ ಗಳಿಕೆ ಕೇವಲ 4.58 ಕೋಟಿ...

ಬಾಕ್ಸ್‌ ಆಫೀಸ್‌ನಲ್ಲಿ ಮಂಕಾದ ನಯ್ಯಿ ನವೇಲ್ಲಿ: ಮೊದಲ ದಿನದ ಜಾಗತಿಕ ಗಳಿಕೆ ಕೇವಲ 4.58 ಕೋಟಿ ರೂಪಾಯಿ

ಬಾಲಿವುಡ್ ನಟಿ ಯಾಮಿ ಗೌತಮ್ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಹಾರರ್ ಕಾಮಿಡಿ ಸಿನಿಮಾ ನಯಿ ನವೆಲ್ಲಿ ಅಕ್ಟೋಬರ್ 16 ರಂದು ತೆರೆಕಂಡಿದೆ. ಮಾರಿ ಖ್ಯಾತಿಯ ನಿರ್ದೇಶಕ ಬಾಲಾಜಿ ಮೋಹನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಮೇಲೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಬಿಡುಗಡೆಯಾದ ಮೊದಲ ದಿನವೇ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದ್ದು ಬಾಕ್ಸ್‌ ಆಫೀಸ್ ಕಲೆಕ್ಷನ್ ವಿಚಾರದಲ್ಲೂ ನಿರೀಕ್ಷಿತ ಮಟ್ಟದಲ್ಲಿ ಸದ್ದು ಮಾಡಿಲ್ಲ.

ಮಾರುಕಟ್ಟೆ ವಿಶ್ಲೇಷಕರ ವರದಿಗಳ ಪ್ರಕಾರ ಚಿತ್ರವು ಮೊದಲ ದಿನ ಭಾರತದಲ್ಲಿ ಅಂದಾಜು 3.25 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಇನ್ನು ದೇಶೀಯ ಮಾರುಕಟ್ಟೆಯ ಗ್ರಾಸ್ ಗಳಿಕೆ 3.83 ಕೋಟಿ ರೂಪಾಯಿಗಳಷ್ಟಿದ್ದರೆ ವಿದೇಶಿ ಮಾರುಕಟ್ಟೆಯಿಂದ ಸುಮಾರು 75 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಒಟ್ಟಾರೆಯಾಗಿ ಜಾಗತಿಕ ಮಟ್ಟದಲ್ಲಿ ಸಿನಿಮಾ ಮೊದಲ ದಿನ 4.58 ಕೋಟಿ ರೂಪಾಯಿ ಗಳಿಕೆ ಕಾಣುವ ಮೂಲಕ ಸಾಧಾರಣ ಆರಂಭ ಪಡೆದುಕೊಂಡಿದೆ.

ಸುಮಾರು 50 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಮೊದಲ ದಿನ ಸಿಕ್ಕಿರುವ ಪ್ರತಿಕ್ರಿಯೆ ಕೊಂಚ ನಿರಾಶಾದಾಯಕವಾಗಿದೆ. ವಾರಾಂತ್ಯದ ರಜೆ ದಿನಗಳಲ್ಲಿ ಚಿತ್ರದ ಕಲೆಕ್ಷನ್ ಹೆಚ್ಚಳವಾದರೆ ಮಾತ್ರ ಬಾಕ್ಸ್‌ ಆಫೀಸ್‌ನಲ್ಲಿ ಉಳಿಗಾಲವಿರಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಗಲ್ಲಾ ಪೆಟ್ಟಿಗೆಯನ್ನು ಕಾಯ್ದುಕೊಳ್ಳಲು ವಾರದ ದಿನಗಳಲ್ಲೂ ಉತ್ತಮ ಪ್ರದರ್ಶನ ಕಾಯ್ದುಕೊಳ್ಳುವುದು ಅನಿವಾರ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಪ್ರದೇಶದ ಮೀರತ್ ನಗರದ ಹಿನ್ನೆಲೆಯಲ್ಲಿ ಸಾಗುವ ಈ ಕಥೆಯಲ್ಲಿ ಯಾಮಿ ಗೌತಮ್ ಮೋಹಿನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದಿನಾಥ್ ಕೊಠರೆ ರಾಜಾ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಮೋಹಿನಿ ಮದುವೆಯಾಗಿ ಹೊಸ ಮನೆಯೊಳಗೆ ಕಾಲಿಟ್ಟ ಬಳಿಕ ನಡೆಯುವ ಕೆಲವು ರಹಸ್ಯ ಘಟನೆಗಳು ಹಾಗೂ ಮೈಮರೆಸುವ ದೆವ್ವದ ಕಥಾನಕವೇ ಈ ಸಿನಿಮಾದ ಹೂರಣವಾಗಿದೆ. ಚಿತ್ರದಲ್ಲಿ ಮಿತಾ ವಶಿಷ್ಠ್, ಸೋನಲ್ ಝಾ, ಸುನಿತಾ ರಾಜ್ವಾರ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಿನಿಮಾ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೆಲವೊಂದು ಸನ್ನಿವೇಶಗಳು ನಿರೀಕ್ಷಿತ ಮಟ್ಟದಲ್ಲಿ ರಂಜಿಸುವಲ್ಲಿ ವಿಫಲವಾಗಿವೆ ಎಂದು ವಿಮರ್ಶೆಗಳು ಬಂದಿವೆ. ವಾರಾಂತ್ಯದಲ್ಲಿ ಚಿತ್ರದ ಗಳಿಕೆ ಯಾವ ರೀತಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular