HomeEntertainment‘ಪ್ರೇಮದ ಊರಲಿ’ ಚಿತ್ರದ ಟಿವಿ ಹಾಗೂ OTT ಪ್ರಸಾರ ಹಕ್ಕುಗಳ ಕುರಿತು ಚಿತ್ರ ತಂಡದಿಂದ ಅಧಿಕೃತ...

‘ಪ್ರೇಮದ ಊರಲಿ’ ಚಿತ್ರದ ಟಿವಿ ಹಾಗೂ OTT ಪ್ರಸಾರ ಹಕ್ಕುಗಳ ಕುರಿತು ಚಿತ್ರ ತಂಡದಿಂದ ಅಧಿಕೃತ ಸ್ಪಷ್ಟನೆ

ಬೆಂಗಳೂರು: ರಾಜ್ಯಾಅದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಚಿತ್ರದ ಟಿವಿ ಹಾಗೂ OTT ಪ್ರಸಾರ ಹಕ್ಕುಗಳ ಕುರಿತು ಚಿತ್ರ ತಂಡ ಅಧಿಕೃತ ಸ್ಪಷ್ಟನೆ ನೀಡಿದ್ದು, ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಪ್ರೇಕ್ಷಕರ ಅಪಾರ ಪ್ರೀತಿ, ಅಭಿಮಾನ ಹಾಗೂ ಬೆಂಬಲದೊಂದಿಗೆ ‘ಪ್ರೇಮದ ಊರಲಿ’ ಚಿತ್ರವು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಚಿತ್ರದ ಡಿಜಿಟಲ್ (OTT) ಹಾಗೂ ಸ್ಯಾಟಲೈಟ್ (ಟಿವಿ) ಪ್ರಸಾರ ಹಕ್ಕುಗಳ ಕುರಿತು ಚಿತ್ರ ತಂಡದಿಂದ ಒಂದು ಮಹತ್ವದ ಸ್ಪಷ್ಟನೆ ನೀಡಲು ಬಯಸುತ್ತೇವೆ. ನಮ್ಮ ಮೊದಲ ಆದ್ಯತೆ ಚಿತ್ರಮಂದಿರಗಳೇ. ಪ್ರೇಕ್ಷಕರು ‘ಪ್ರೇಮದ ಊರಲಿ’ ಚಿತ್ರವನ್ನು ದೊಡ್ಡ ಪರದೆಯ ಮೇಲೆ ವೀಕ್ಷಿಸಿ, ಅದರ ಪ್ರೀತಿ, ಭಾವನೆ ಹಾಗೂ ಅನುಭವವನ್ನು ಸಂಪೂರ್ಣವಾಗಿ ಆಸ್ವಾದಿಸಬೇಕು ಎಂಬುದೇ ನಮ್ಮ ಆಶಯ ಎಂದು ತಿಳಿಸಿದೆ.

‘ಪ್ರೇಮದ ಊರಲಿ’ ಚಿತ್ರದ OTT ಅಥವಾ ಟಿವಿ ಪ್ರಸಾರ ಹಕ್ಕುಗಳಿಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಸಂಸ್ಥೆ ಅಥವಾ ವೇದಿಕೆಯೊಂದಿಗೆ ಒಪ್ಪಂದ ಮಾಡಿಕೊಂಡಿಲ್ಲ ಹಾಗೂ ಯಾವುದೇ ರೀತಿಯ ಅಧಿಕೃತ ಬದ್ಧತೆಯನ್ನೂ ನೀಡಿಲ್ಲ.

ಸದ್ಯಕ್ಕೆ ಚಿತ್ರದ OTT ಅಥವಾ ಟಿವಿ ಪ್ರಸಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಕುರಿತು ಮುಂದಿನ ದಿನಗಳಲ್ಲಿ ಯಾವುದೇ ಅಧಿಕೃತ ಮಾಹಿತಿ ಇದ್ದಲ್ಲಿ ಅದನ್ನು ಚಿತ್ರತಂಡವೇ ನೇರವಾಗಿ ಪ್ರಕಟಿಸಲಿದೆ.

‘ಪ್ರೇಮದ ಊರಲಿ’ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿ, ಪ್ರೀತಿಸಿ, ಬೆಂಬಲಿಸುತ್ತಿರುವ ಪ್ರತಿಯೊಬ್ಬ ಪ್ರೇಕ್ಷಕರಿಗೂ ನಮ್ಮ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಯೇ ನಮ್ಮ ಚಿತ್ರದ ನಿಜವಾದ ಗೆಲುವು! ಎಂದು ಚಿತ್ರ ತಂಡ ಸ್ಪಷ್ಟಪಡಿಸಿದೆ.

ಮನೋಜ್ ಕುಮಾರ್ ನಿರ್ದೇಶನದ, ಮಮತಾ ದೇವೇಂದ್ರ ಎಂ ನಿರ್ಮಾಣದಲ್ಲಿ ಮೂಡಿ ಬಂದಿರುವ ಪ್ರೇಮದ ಊರಲಿ ಚಿತ್ರ ರಾಜ್ಯಾದ್ಯಂತ ಭಜರಿ ಪ್ರದರ್ಶನ ಕಾಣುತ್ತಿದೆ. ರಂಗಾಯಣ ರಘು, ಶ್ರೀ ರಾಮ್ , ತಪಸ್ವಿನಿ ಪೂಣಚ್ಚ, ರಮಿಕಾ ಶಿವು, ಗೋವಿಂದೇ ಗೌಡ ಮುಖ್ಯ ತಾರಾಗಣದಲ್ಲಿ ಅಭಿನಯಿಸಿರುವ ಈ ಚಿತ್ರ ಬಿಡುಗಡೆಯಾಗಿ 23 ದಿನಗಳು ಕಳೆದರೂ ಬಾಕ್ಸ್ ಆಫಿಸ್ ನಲ್ಲಿ 90 ಕೋಟಿ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.

ಕಾವೇರಿ ತೀರ್ಥೋದ್ಭವ: ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಜೀವನದಿ

ಮಡಿಕೇರಿ: ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು, ಜೀವನದಿ ಕಾವೇರಿ ತೀರ್ಥರೂಪಿಣಿಯಾಗಿ ಆವೀರ್ಭವಿಸಿದ್ದಾಳೆ. ಲಕ್ಷಾಂತರ ಭಕ್ತರು ಈ ಅಪರೂಪದ ಘಳಿಯನ್ನು ಕಣ್ತುಂಬಿಕೊಂಡು ಪುನೀತರಾದರು.

ಇಂದು ಸಂಜೆ 7 ಗಂಟೆ 50 ನಿಮಿಷಕ್ಕೆ ಕಾವೇರಿ, ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಉದ್ಭವಿಸಿದ್ದು, ನೆರೆದಿದ್ದ ಜನರು, ಜಯಘೊಷಗಳನ್ನು ಹಾಕಿದರು. ಕಾವೇರಿ ಮಾತೆಗೆ ಮಂತ್ರಘೋಷಗಳೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಅರ್ಚಕರು, ತೀರ್ಥವನ್ನು ನೆರೆದ ಜನಸ್ತೋಮದ ಮೇಲೆ ಪ್ರೋಕ್ಷಿಣೆ ಮಾಡಿದರು. ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಪ್ರಧಾನ ಅರ್ಚಕ ರವಿರಾಜ್ ಆಚಾರ್, ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಬಳಿಕ ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥವನ್ನು ಹಂಚಲಾಯಿತು.

ಕೋಟ್ಯಂತರ ಜನರ ಪಾಲಿಗೆ ದೈವಿ ಸ್ವರೂಪವಾಗಿರುವ ಕಾವೇರಿ ಕೇವಲ ನದಿಯ ನೀರಲ್ಲ ಅದೊಂದು ಶಕ್ತಿ ಸ್ವರೂಪಿಣಿ. ಅಗಸ್ತ್ಯ ಮುನಿಯ ಪತ್ನಿಯಾಗಿದ್ದ ಕಾವೇರಿ ಲೋಕಕಲ್ಯಾಣಕ್ಕಾಗಿ ನದಿಯಾಗಿ ಹರಿಯುತ್ತಾಳೆ. ತುಲಾ ಮಾಸದ ಮೊದಲ ದಿನ ಅಂದರೆ ಸೂರ್ಯ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ ಎಂಬುದು ನಂಬಿಕೆ. ಈ ಪವಿತ್ರ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ತಲಕಾವೇರಿಯಲ್ಲಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಭಕ್ತರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಭಕ್ತರ ನಿಯಂತ್ರಣಕ್ಕೆ ದೇವಸ್ಥಾನದ ಆವರಣದಲ್ಲಿ ಬ್ಯಾರಿಕೇಡ್​ಗಳನ್ನ ಅಳವಡಿಸಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಕಟ್ಟೆಚ್ಚರವಹಿಸಲಾಗಿದೆ.

ಭದ್ರತೆಗಾಗಿ ಕೆಎಸ್​ಆರ್​ಪಿ ಮತ್ತು ಡಿಎಆರ್​ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾದೆ. ಭಕ್ತರಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ತೆಗೆದುಕೊಂಡು ಹೋಗಲು ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಭಾಗಮಂಡಲದಿಂದ ಸಹಸ್ರಾರು ಭಕ್ತರು ತಲಕಾವೇರಿಗೆ ಪಾದಯಾತ್ರೆ ಮಾಡಲಿದ್ದಾರೆ. ಹಾಗಾಗಿ ರಸ್ತೆಯುದ್ಧಕ್ಕೂ ವಿದ್ಯುತ್ ದೀಪ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular