HomeKarnatakaಉದ್ಯೋಗಕ್ಕಾಗಿ ನಕಲಿ ದಾಖಲೆ ನೀಡಿದವರಿಗೆ ಬಿಗ್ ಶಾಕ್: 288 ಅತಿಥಿ ಉಪನ್ಯಾಸಕರು ಆಯ್ಕೆ ಪ್ರಕ್ರಿಯೆಯಿಂದಲೇ ಹೊರಕ್ಕೆ

ಉದ್ಯೋಗಕ್ಕಾಗಿ ನಕಲಿ ದಾಖಲೆ ನೀಡಿದವರಿಗೆ ಬಿಗ್ ಶಾಕ್: 288 ಅತಿಥಿ ಉಪನ್ಯಾಸಕರು ಆಯ್ಕೆ ಪ್ರಕ್ರಿಯೆಯಿಂದಲೇ ಹೊರಕ್ಕೆ

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿ, ದಾಖಲೆಗಳನ್ನು ಸಲ್ಲಿಸಿರುವ ಅತಿಥಿ ಉಪನ್ಯಾಸಕರಲ್ಲಿ ಅಧಿಕೃತ ಪರಿಶೀಲನಾ ಕಾರ್ಯವಿಧಾನದ ಪ್ರಕಾರ ನಕಲಿ ಅಥವಾ ಅಮಾನ್ಯ ದಾಖಲೆಗಳನ್ನು ಸಲ್ಲಿಸಿದ್ದ 288 ಅತಿಥಿ ಉಪನ್ಯಾಸಕರನ್ನು 2026-27ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ಸರ್ಕಾರಕ್ಕೆ ಸುಳ್ಳು ಮಾಹಿತಿ/ದಾಖಲೆ ನೀಡಿ ವಂಚನೆ ಎಸಗಲು ಪ್ರಯತ್ನಿಸಿರುವುದರಿಂದ ಅವರುಗಳ ವಿರುದ್ಧ ಭಾರತ ನ್ಯಾಯ ಸಂಹಿತೆಯಡಿ ಅನ್ವಯವಾಗುವ ನಿಬಂಧನೆಗಳಡಿ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಪ್ರಾಂಶುಪಾಲರಿಗೆ ಸೂಚಿಸಲಾಗಿರುತ್ತದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2025-26ನೇ ಸಾಲಿನಲ್ಲಿ ಆನ್‌ಲೈನ್ ಕೌನ್ಸಲಿಂಗ್ ಮೂಲಕ ಕಾಲೇಜು ಆಯ್ಕೆ ಮಾಡಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವ 11,010 ಅತಿಥಿ ಉಪನ್ಯಾಸಕರುಗಳ ಸ್ನಾತಕೋತ್ತರ ಪದವಿ ಅಂಕಪಟ್ಟಿ ಮತ್ತು ಎನ್‌ಇಟಿ, ಎಸ್‌ಎಲ್‌ಇಟಿ, ಕೆ-ಎಸ್‌ಇ ಟಿ, ಪಿಎಚ್ಡಿ, ಎಂಫಿಲ್ ಹಾಗೂ ವಿಕಲಚೇತನ ಪ್ರಮಾಣ ಪತ್ರ ಮತ್ತು ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳನ್ನು ಅಧಿಕೃತ ಪರಿಶೀಲನಾ ಕಾರ್ಯವಿಧಾನದ ಪ್ರಾಂಶುಪಾಲರ ಹಂತದಲ್ಲಿ ಪರಿಶೀಲನೆ ನಡೆಸಲಾಗಿರುತ್ತದೆ.

ಅದರಂತೆ, ಬಹುತೇಕ ಅತಿಥಿ ಉಪನ್ಯಾಸಕರ ದಾಖಲೆಗಳನ್ನು ಕಾಲೇಜುಗಳ ಹಂತದಲ್ಲಿ ಪ್ರಾಂಶುಪಾಲರ ನೇತೃತ್ವದ ಸಮಿತಿಗಳು ಪರಿಶೀಲಿಸಿದ್ದು, ಕೆಲವು ಅತಿಥಿ ಉಪನ್ಯಾಸಕರು ರಾಜೀನಾಮೆ, ಗೈರು ಹಾಜರಿ ಅನಾರೋಗ್ಯದ ಕಾರಣ ದಾಖಲೆಗಳನ್ನು ಸಲ್ಲಿಸದಿರುವ ಪ್ರಕರಣಗಳಲ್ಲಿ ಅಗತ್ಯ ದಾಖಲೆಗಳ ಕೊರತೆಯಿಂದಾಗಿ ಪರಿಶೀಲನೆ ನಡೆಸಿರುವುದಿಲ್ಲ. ಅಲ್ಲದೆ ಹೊರ ರಾಜ್ಯದ ವಿಶ್ವವಿದ್ಯಾಲಯಗಳ ವಿದ್ಯಾರ್ಹತೆ ಅಂಕ ಪಟ್ಟಿಗಳ ನೈಜತೆ ವರದಿಗಾಗಿ ಆಯಾ ವಿಶ್ವವಿದ್ಯಾಲಯಗಳಿಗೆ ಕಳುಹಿಸಲಾಗಿದ್ದು ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ ಎಂದು ಇಲಾಖೆ ತಿಳಿಸಿದೆ.

ಸಹಾಯಕ ಇಲಾಖೆಯಲ್ಲಿ ಒಟ್ಟು 7187 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿದ್ದು ಇದರಲ್ಲಿ 5971 ಹುದ್ದೆಗಳು ಭರ್ತಿಯಾಗಿರುತ್ತವೆ. ಉಳಿದಂತೆ 1216 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಲ್ಲಿ ಪ್ರಸ್ತುತ 826 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ. ಅದರಂತೆ 826 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2026 ಕರಡು ವಿಶೇಷ ನಿಯಮಗಳನ್ನು ರೂಪಿಸಲು ಕ್ರಮವಹಿಸಲಾಗುತ್ತಿದೆ.

ರಾಜ್ಯದ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಒಟ್ಟು 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ 7187 ಸಹಾಯಕರ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿದ್ದು, ಇದರಲ್ಲಿ 5971 ಹುದ್ದೆಗಳು ಭರ್ತಿಯಾಗಿರುತ್ತವೆ. ಉಳಿದಂತೆ 1216 ಹುದ್ದೆಗಳು ಸದ್ಯ ಖಾಲಿ ಇದೆ ಎಂದು ಮಾಹಿತಿ ನೀಡಿದೆ.

2025-26 ಸಾಲಿಗೆ ಒಟ್ಟು 11,100 ಅತಿಥಿ ಉಪನ್ಯಾಸಕರನ್ನು ಕ್ರಮವಹಿಸಲಾಗಿದ್ದು, ಇದರಲ್ಲಿ ಆಯ್ಕೆಯಾದ 11,010 ಅತಿಥಿ ಉಪನ್ಯಾಸಕರನ್ನು ನೇಮಕಮಾಡಲಾಗಿದೆ. ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಅನ್ನು ಗಣನೆಗೆ ತೆಗೆದುಕೊಳ್ಳುವುದು. ಅಲ್ಲದೆ ಹೆಚ್ಚುವರಿ ವಿದ್ಯಾರ್ಹತೆಯ ಜೊತೆಗೆ ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 15 ವರ್ಷಗಳಿಗೆ 48 ಅಂಕಗಳನ್ನು ಮಿತಿಗೊಳಿಸಲಾಗುತ್ತಿದೆ.

ಸೇವೆಗೆ ಅಂಕಗಳನ್ನು ನಿರ್ಧರಿಸಲು ಪ್ರತಿ ಶೈಕ್ಷಣಿಕ ವರ್ಷದ 8 ತಿಂಗಳು ಮತ್ತು ಹೆಚ್ಚಿನ ಅವಧಿಯ ( ಶೈಕ್ಷಣಿಕ ವರ್ಷದಲ್ಲಿ 240 ದಿನಗಳ) ಸೇವೆಯನ್ನು ಒಂದು ವರ್ಷ ಎಂದು ಪರಿಗಣಿಸುವುದು. ಶೈಕ್ಷಣಿಕ ವರ್ಷದಲ್ಲಿನ 8 ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಭಾಗಶಃ ವರ್ಷವೆಂದೂ ಪರಿಗಣಿಸಿ ಒಟ್ಟು ಸೇವಾವಧಿಗೆ ಪರಿಗಣಿಸುವುದು ಎಂದು ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular