ಹಾವೇರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಾಗ ತಿರುಕನ ಕನಸು ಕಾಣ್ತಾರೆ. ಹಾಗಾಗಿ ನಮ್ಮ ಪಕ್ಷದ 25 ಶಾಸಕರು ಬಿಜೆಪಿಗೆ ಬರ್ತಾರೆ ಎಂದು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಗಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ರಾಜ್ಯದಲ್ಲಿ ಮೂರನೇ ಸಿಎಂ ಬರುತ್ತಾರೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಮತನಾಡಿದ ಅವರು, ವಿಜಯೇಂದ್ರ ತಿರುಕನ ಕನಸು ಕಾಣುತ್ತಿದ್ದಾರೆ. ನಮ್ಮ 25 ಜನ ಶಾಸಕರು ಬರ್ತಾರೆ ಅಂತಾ ಅವರು ತಿಳಿದುಕೊಂಡಿದ್ದಾರೆ. ಹೀಗಾಗಿ ವಿಜಯೇಂದ್ರ ಆಗಾಗ ಈ ರೀತಿ ಮಾತನಾಡುತ್ತಾರೆ ಎಂದು ಟಾಂಗ್ ನೀಡಿದ್ದಾರೆ.
ಸಿಜೆಪಿಗೆ ಕಾಂಗ್ರೆಸ್ ಫಂಡಿಂಗ್ ಮಾಡುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಫಂಡಿಂಗ್, ಆರ್ ಟಿಜಿಎಸ್ ಇದೆಲ್ಲವೂ ವಿಜಯೇಂದ್ರಗೆ ಗೊತ್ತು. ಜೈಲಿಗೆ ಹೋದರೆ ಸಹಾಯ ಮಾಡುತ್ತೇವೆ ಎಂದಿದ್ದೇವೆ. ಇದನ್ನು ಫಂಡಿಂಗ್ ಅನ್ನಲ್ಲ. ಸಿ಼ದರಾಮಯ್ಯ ಅವರನ್ನು ಭೇಟಿಯಾಗಿ ಸಿಎಂ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿಗೆ ಸ್ಯಾಟಲೈಟ್ ಮೂಲಕ ವಿಷಯ ಗೊತ್ತಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.
ಶಾಸಕರು, ಸಂಸದರ ವೈಯಕ್ತಿಕ ವಿಷಯಗಳನ್ನು ನಾನು ಮಾತನಾಡುವುದಿಲ್ಲ ಎಂದು ಹೇಳಿದರು. ಇದೇ ವೇಳೆ ಗ್ಯಾರಂಟಿಯಿಂದ ರೈತರ ಸಾಲಮನ್ನಾ ಮಾಡಲು ಆಗಲ್ಲ ಎಂದು ಹೇಳಿದ್ದಾರೆ. ಬರದ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ವಿಚಾರವಾಗಿ ಮಾತನಾಡಿದರು. ಸದ್ಯ ಗ್ಯಾರಂಟಿಯಿಂದ ಸಾಲಮನ್ನಾ ಮಾಡಲು ಆಗಲ್ಲ. ಆದರೆ ರೈತರಿಗೆ ಏನು ಸಹಾಯ ಮಾಡಬೇಕು ಆ ಸಹಾಯ ನಾವು ಮಾಡುತ್ತೇವೆ ಎಂದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ವಿಚಾರವಾಗಿ, ನಮ್ಮ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಶಿಕ್ಷಕರು ನಮ್ಮ ಅಭ್ಯರ್ಥಿಗೆ ಮತ ಕೊಡಬೇಕು ಎಂದು ವಿನಂತಿಸುತ್ತೇವೆ ಎಂದರು.
ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯೊಂದಿಗೆ ನಂಟು: ಕಲಬುರಗಿಯಲ್ಲಿ ಮತ್ತೋರ್ವ ಶಂಕಿತ ಅರೆಸ್ಟ್
ಕಲಬುರಗಿ: ಲಷ್ಕರ್-ಎ-ತೈಬಾ ಉಗ್ರ ಸಂಘನೆಗಳೊಂದಿಗೆ ನಂಟು ಹೊಂದಿದ ಆರೋಪದಲ್ಲಿ ಕಲಬುರಗಿಯಲ್ಲಿ ಓರ್ವ ಶಂಕಿತನನ್ನು ಕೇಂದ್ರ ಗುಪ್ತಚರ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಸರಾಫ್ ಬಜಾರ್ನಲ್ಲಿ ಚಿನ್ನಾಭರಣ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ವುಲ್ ಮಲೀಕ್ ಬಂಧಿತ ಆರೋಪಿ. ಈತ ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ಸಹೋದರನೊಂದಿಗೆ ಚಿನ್ನಾಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಮ್ತಾಜ್ವುಲ್ ಮಲೀಕ್, ಸಾಮಾಜಿಕ ಜಾಲತಾಣಗಳ ಮೂಲಕ ಲಷ್ಕರ್ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ. ಹಲವು ಮಹತ್ವದ ವಿಷಯಗಳನ್ನು ಮೆಸೇಜ್ ಮೂಲಕ ಹಂಚಿಕೊಂಡಿದ್ದ ಎಂಬ ಮಾಹಿತಿ ಲಭಿಸಿದೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕೆಲ ದಿನಗಳ ಹಿಂದೆ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಯುವಕನನ್ನು ಬಂಧಿಸಲಾಗಿತ್ತು. ಈ ನಡುವೆಯೇ ಕಲಬುರಗಿಯಲ್ಲಿ ಇದೀಗ ಮತ್ತೊಬ್ಬ ಶಂಕಿತ ವ್ಯಕ್ತಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ.
ಕೆಲ ದಿನಗಲ ಹಿಂದೆ ಪಾಕಿಸ್ತಾನ ಮೂಲದ ಘೋಷಿತ ಉಗ್ರ ಶಹಜಾದ್ ಭಟ್ಟಿ ಆ್ಯಂಡ್ ಇತರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಯಣಕೂರ ಗ್ರಾಮದ ವಿಶಾಲ್ ಮೇತ್ರೆ ಎಂಬಾತನನ್ನು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಎನ್ಐಎ ಅ1ರಂದು ಬಂಧಿಸಿತ್ತು. ಆ ಬಳಿಕ ವಿಶಾಲ್ ಮೇತ್ರೆ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿ ಪಾಕಿಸ್ತಾನ ಮೂಲದ ಉಗ್ರರ ಜಾಲದ ಜೊತೆ ನಂಟಿದೆ. ವಾಟ್ಸ್ಆ್ಯಪ್, ಇನ್ಸ್ಟಾಗ್ರಾಮ್ ಮೂಲಕ ಪಾಕ್ ಮೂಲದ ಶಹಜಾದ್ ಭಟ್ಟಿ ರಾಣಾ ಹುನೇನ್ ಜೊತೆ ವಿಶಾಲ್ ಮೇತ್ರೆ ಸಂಪರ್ಕ ಹೊಂದಿದ್ದ. ಅಕ್ರಮಶಸ್ತ್ರಾಸ್ತ್ರ ಖರೀದಿ,ಸಾಗಣೆ ಕುರಿತು ಚರ್ಚಿಸಿದ್ದ ಎಂಬ ಬಗ್ಗೆ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿತ್ತು.
ಕಳೆದ ಜೂನ್ ನಲ್ಲಿ 20 ವರ್ಷದ ಸುಹೇಲ್ ಎಂಬಾತನನ್ನು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಲಾಗಿತ್ತು. ಈತ ಉತ್ತರ ಪ್ರದೇಶದ ಮೂಲದವನಾಗಿದ್ದು, ಪೇಂಟರ್ ಸೋಗಿನಲ್ಲಿ ತಲೆಮರೆಸಿಕೊಂಡಿದ್ದ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಮತ್ತು ವಿದೇಶಿ ಹ್ಯಾಂಡ್ಲರ್ಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಆನ್ಲೈನ್ ಉಗ್ರಗಾಮಿ ಪ್ರೇರಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಎನ್ಐಎ ಖಚಿತ ಮಾಹಿತಿ ಮೇರೆಗೆ ಈತನನ್ನು ಬಂಧಿಸಲಾಗಿತ್ತು. ಇದೀಗ ಕಲಬುರಗಿಯಲ್ಲಿ ಇನ್ನೋರ್ವ ಶಂಕಿತನನ್ನು ಬಂಧಿಸಲಾಗಿದೆ.

