ಬೆಂಗಳೂರು: ಬೆಂಗಳೂರಿನಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಗಂಭೀರವಗೈ ಗಾಯಗೊಂಡಿದ್ದ ಮತ್ತೋರ್ವ ಮಗು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್ ನಲ್ಲಿ ಈ ದುರಂತ ಸಂಭವಿಸಿತ್ತು. ತಂದೆ ಕರಿಲಿಂಗಪ್ಪ ಸ್ಥಿತಿ ಕೂಡ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಘಟನೆಯಲ್ಲಿ ಈವರೆಗೆ ತಾಯಿ ಹಾಗೂ ಇಬ್ಬರು ಅವಳಿ ಮಕ್ಳಳು ಸಾವನ್ನಪ್ಪಿದ್ದಾರೆ.
ತಾಯಿ ಲಕ್ಷ್ಮಮ್ಮ, ಅವಳಿ ಮಗ್ಗಳಾದ ಗೀತಾ, ಗಿರಿಜಾ ಮೃತ ದುರ್ದೈವಿಗಳು. ಇನ್ನೂ ಇಬರು ಮಕ್ಕಳಿಗೆ ಹಾಗೂ ತಂದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅಕ್ಟೋಬರ್ ೨ರಂದು ವಿನಾಯಕ ಲೇಔಟ್ ನ ಮನೆಯಲ್ಲಿ ಈ ಘಟನೆ ನಡೆದಿತ್ತು.
ರಾಯಚೂರು ಮೂಲದ ಕುಟುಂಬವೊಂದು ನಾಯಂಡಹಳ್ಳಿ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಬೆಳಿಗ್ಗೆ ತಿಂಡಿ ರೆಡಿ ಮಾಡಲು ಒಲೆ ಹಚ್ಚುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ. ಚಂದ್ರಾ ಲೇಔಠ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾಧ್ಯಮ ಪ್ರತಿನಿಧಿಗಳೆಂದು ಹೇಳಿ ಸ್ಪಾ ಮತ್ತು ಸಲೂನ್ ಸಿಬ್ಬಂದಿ ಮೇಲೆ ಹಲ್ಲೆ: ಹಣ ಸುಲಿಗೆ ಮಾಡಿದ್ದ ನಾಲ್ವರು ಮಹಿಳೆಯರು ಸೇರಿ 6 ಆರೋಪಿಗಳು ಅರೆಸ್ಟ್
ಬೆಂಗಳೂರು: ಮಾಧ್ಯಮ ಪ್ರತಿನಿಧಿಗಳೆಂದು ಹೇಳಿಕೊಂಡು ಸ್ಪಾ ಹಾಗೂ ಸಲೂನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮಾಲೀಕರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ ಗ್ಯಾಂಗ್ ಒಂದನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಈರಮ್ಮ, ಸಗಾಯಿ ಮೇರಿ, ಮಮತಾ, ಪಿಯಾ, ಯೋಗಾಬು ಹಾಗೂ ಮೊಹಮ್ಮದ್ ಆಸಿಫ್ ಎಂದು ಗುರುತಿಸಲಾಗಿದೆ.
ಈ ಗ್ಯಾಂಗ್ ಅಕ್ಟೋಬರ್ 3 ರ ರಾತ್ರಿ ವಿದ್ಯಾರಣ್ಯಪುರ ಮುಖ್ಯರಸ್ತೆಯ ನಂಜಪ್ಪ ಲೇಔಟ್ನಲ್ಲಿರುವ ಸ್ಪಾ ಮತ್ತು ಸಲೂನ್ಗೆ ನುಗ್ಗಿ, ಇಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆಯೆಂದು ಸುಳ್ಳು ಆರೋಪ ಹೊರಿಸಿ ಸಿಬ್ಬಂದಿಯನ್ನು ಬೆದರಿಸಿದೆ.
ಅಲ್ಲದೆ, ಸ್ಪಾ ಕುರಿತ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಆರಂಭದಲ್ಲಿ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ದುಷ್ಕರ್ಮಿಗಳು, ಕೊನೆಗೆ ಬಲವಂತವಾಗಿ ಹಣವನ್ನು ವಸೂಲಿ ಮಾಡಿಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಸಾಯಿ ನಗರ ನಿವಾಸಿ ಹಾಗೂ ಸ್ಪಾ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಂಡು ಕೆ.ಆರ್. ಸರ್ಕಲ್ ಬಳಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯದಲ್ಲಿ ಭಾಗಿಯಾದ ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 80,000 ರೂ. ನಗದು, 7 ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಮತ್ತು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಇತರೆ ಸುಲಿಗೆ ಪ್ರಕರಣಗಳಲ್ಲಿ ಈ ಗ್ಯಾಂಗ್ ಭಾಗಿಯಾಗಿರುವ ಬಗ್ಗೆಯೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

