HomeKarnatakaಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಆರು ಜನರಿಗೆ ಗಂಭೀರ ಗಾಯ

ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಆರು ಜನರಿಗೆ ಗಂಭೀರ ಗಾಯ

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಶ್ರೀಸಾಯಿ ಬಡಾವಣೆಯಲ್ಲಿ ನಡೆದಿದೆ.

ಮಂಜುನಾಥ್ ಎಂಬವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ಇವರ ಮನೆಯಲ್ಲಿ ಉತ್ತರ ಭಾರತ ಮೂಲದವರು ಬಾಡಿಗೆಗೆ ಇದ್ದರು. ರಾತ್ರಿ ಗ್ಯಾಸ್ ಸ್ಟೌವ್ ಸ್ವಿಚ್ ಆಫ್ ಮಾಡಿರಲಿಲ್ಲ. ಕಿಟಕಿ ಬಾಗಿಲು ಕ್ಲೋಸ್ ಮಾಡಿ ನಿದ್ರೆಗೆ ಜಾರಿದ್ದರು. ಈ ವೇಳೆ ಅಡುಗೆ ಅನಿಲ ಸೋರಿಕೆಯಾಗಿ ಮನೆಯ ತುಂಬೆಲ್ಲ ವ್ಯಾಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಜಾನೆ 3 ಗಂಟೆಗೆ ಬೀಡಿ ಸೇದಲು ಕಡ್ಡಿ ಹಚ್ಚಿದ ವೇಳೆ ಮನೆಯಲ್ಲಿ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಘಟನೆಯ ಪರಿಣಾಮ ಮನೆಯಲ್ಲಿದ್ದ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಸಂಜಯ್ ಮತ್ತು ಬೋರೋ ಹಾಗೂ ಮದ್ಯಪ್ರದೇಶದ ಧೀರು, ವಿಜಯ್, ಕೋಬಿನ್ ಗಾಯಗೊಂಡಿದ್ದಾರೆ. ಸದ್ಯ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಗಾಯಾಳುಗಳೆಲ್ಲಾ ಬಿಲ್ಡಿಂಗ್ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಸ್ಫೋಟದ ತೀವ್ರತೆಗೆ ಮನೆಯ ಸಿಮೆಂಟ್ ಶೀಟ್‌ಗಳು ಛಿದ್ರಛಿದ್ರಗೊಂಡಿದೆ. ಸ್ಫೋಟದಿಂದ ಮನೆಯಲ್ಲಿನ ಬಟ್ಟೆಗಳಿಗೆ ಬೆಂಕಿ ತಗುಲಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಸೀಜ್ ಮಾಡಲಾಅಗಿದೆ.

ಆರೋಪಿಗಳು ಬೆಂಗಳೂರಿನಿಂದ 2 ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್‌ಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದರು. ಈ ವೇಳೆ ಸಿಸಿಬಿ ಪೊಲೀಸರು ನೇರವಾಗಿ ಆರೋಪಿಗಳ ಮೇಲೆ ದಾಳಿ ಮಾಡಿ ಮಹಮದ್ ರಿಯಾಝ್ ಹಾಗೂ ಕುಮಾರನ್ ಎಂಬವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಅವರ ಬಳಿ ಇದ್ದ 20 ಲಕ್ಷ ಮೌಲ್ಯದ ಸಿಗರೇಟ್‌ಗಳನ್ನು ಜಪ್ತಿ ಮಾಡಿದ್ದಾರೆ.

ಇದೇ ವೇಳೆ ಮತ್ತೊಂದು ಪ್ರಕರಣದಲ್ಲಿ ಉಪ್ಪಾರಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ 10 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಸೀಜ್ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಮಹಮದ್ ಗುಲ್ಜಾರ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಎರಡೂ ಪ್ರಕರಣಗಳಲ್ಲಿ ಒಟ್ಟು ಮೂವರನ್ನು ಬಂಧಿಸಿದ್ದು, ಒಟ್ಟು 30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇವರ ಹಿಂದೆ ಬೃಹತ್ ಜಾಲವೇ ಇರುವ ಶಂಕೆ ಇದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular