HomeKarnatakaಪೂಜೆಗೆ ತೆರಳುತ್ತಿದ್ದ ಸಚಿವರು, ಶಾಸಕರನ್ನು ಅಡ್ದಗಟ್ಟಿ ತಡೆದ ಎಸ್ ಪಿ: ಪೊಲೀಸರು ಹಾಗೂ ಜನಪ್ರತಿನಿಧಿಗಳ ನಡುವೆ...

ಪೂಜೆಗೆ ತೆರಳುತ್ತಿದ್ದ ಸಚಿವರು, ಶಾಸಕರನ್ನು ಅಡ್ದಗಟ್ಟಿ ತಡೆದ ಎಸ್ ಪಿ: ಪೊಲೀಸರು ಹಾಗೂ ಜನಪ್ರತಿನಿಧಿಗಳ ನಡುವೆ ಮಾತಿನಚಕಮಕಿ: ಹೈಡ್ರಾಮಾ

ಮೈಸೂರು: ಪೂಜೆಗೆ ತೆರಳುತ್ತಿದ್ದ ಸಚಿವರು, ಶಾಸಕರನ್ನು ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅಡ್ಡಗಟ್ಟಿ ತಡೆದಿದ್ದು, ಇದರಿಂದ ಸಚಿವರು, ಶಾಸಕರು ಪೊಲೀಸ್ ಅಧಿಕಾರಿಗಳ ಮೇಲೆ ಸಿಡಿಮಿಡಿಗೊಂಡ ಘಟನೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ನಡೆದಿದೆ.

ಐತಿಹಾಸಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದ ‘ನಂದಿ ಧ್ವಜ ಪೂಜೆ’ ವೇಳೆ ಆಡಳಿತ ಪಕ್ಷದ ಸಚಿವರು ಹಾಗೂ ಪೊಲೀಸ್ ಇಲಾಖೆ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರತೆಯ ಕಾರಣ ನೀಡಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರು ಸಚಿವರು ಹಾಗೂ ಜನಪ್ರತಿನಿಧಿಗಳನ್ನು ಪೂಜೆಗೆ ತೆರಳದಂತೆ ಅಡ್ಡಗಟ್ಟಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೂ ಮುನ್ನ ಮುಖ್ಯಮಂತ್ರಿಗಳ ಜೊತೆ ಆಗಮಿಸುವ ಸಚಿವರು, ಶಾಸಕರು ಹಾಗೂ ಗಣ್ಯರು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜರುಗುವ ಪವಿತ್ರ ನಂದಿ ಧ್ವಜ ಪೂಜೆ ಸಲ್ಲಿಸುವುದು ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯ. ಆದರೆ, ಈ ಬಾರಿ ಸಿಎಂ ಜೊತೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಮಾತ್ರ ನಂದಿ ಧ್ವಜ ಪೂಜೆಗೆ ಬಿಡಲಾಗಿದ್ದು, ಅವರೊಂದಿಗೆ ಬಂದಿದ್ದ ಮತ್ತಿತರ ಸಚಿವರು ಹಾಗೂ ಇತರೆ ಜನಪ್ರತಿನಿಧಿಗಳನ್ನು ಸ್ಥಳದಲ್ಲೇ ಎಸ್‌ಪಿ ರಿಷ್ಯಂತ್ ತಡೆದಿದ್ದಾರೆ.

ಶಿಷ್ಟಾಚಾರದ ಹೆಸರಿನಲ್ಲಿ ಮತ್ತು ಭದ್ರತೆಯ ನೆಪದಲ್ಲಿ ಏಕಾಏಕಿ ಪ್ರವೇಶ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಸ್ಥಳದಲ್ಲಿದ್ದ ಸಚಿವರು ಎಸ್‌ಪಿ ರಿಷ್ಯಂತ್ ಅವರೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದಾರೆ. ನಂದಿ ಕಂಬ ಪೂಜೆಗೆ ಅವಕಾಶ ಮಾಡಿಕೊಡುವಂತೆ ಪಟ್ಟು ಹಿಡಿದಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇನ್ನು ಇದೇ ವೇಳೆ ಭದ್ರತೆಯ ಕಾರಣ ನೀಡಿ ಹಿರಿಯ ಶಾಸಕರಾದ ತನ್ವೀರ್ ಸೇಠ್ ಹಾಗೂ ಶಾಸಕ ಶ್ರೀವತ್ಸ ಅವರನ್ನು ಕೂಡ ಪೊಲೀಸರು ಅಡ್ಡಗಟ್ಟಿದ್ದಾರೆ. ಇದರಿಂದಾಗಿ ತನ್ವೀರ್ ಸೇಠ್ ಅವರು ಕೆಲಕಾಲ ಹೊರಗಡೆಯೇ ನಿಲ್ಲಬೇಕಾಯಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿಗಳು ಪರಿಸ್ಥಿತಿಯನ್ನು ಗಮನಿಸಿ, ತನ್ವೀರ್ ಸೇಠ್ ಅವರೊಂದಿಗೆ ಮಾತನಾಡಿ ಮನವೋಲಿಸಿ ಜತೆಯಲ್ಲಿಯೇ ಪೂಜೆಗೆ ಕರೆದುಕೊಂಡು ಹೋದರು. ಅಂತಿಮವಾಗಿ ಮೇಲಿನವರ ಸೂಚನೆ ಮತ್ತು ಸಿಎಂ ಸೂಚನೆಯ ಮೇರೆಗೆ ಅವರನ್ನು ಪೂಜೆಗೆ ಒಳಗೆ ಬಿಡಲಾಯಿತು. ಸ್ಥಳದಲ್ಲಿದ್ದ ಮೈಸೂರಿನ ಇತರೆ ಶಾಸಕರಾದ ಅನಿಲ್ ಚಿಕ್ಕಮಾದು, ಡಿ. ರವಿಶಂಕರ್, ದರ್ಶನ ಧ್ರುವನಾರಾಯಣ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ತಿಮ್ಮಯ್ಯ ಅವರಿಗೆ ಒಳಗೆ ಪ್ರವೇಶ ಸಿಗದ ಕಾರಣ ದೂರದಿಂದಲೇ ನಂದಿ ಧ್ವಜ ಪೂಜೆ ವೀಕ್ಷಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular